ಮಂಗಳವಾರ, ಫೆಬ್ರವರಿ 3, 2026
ಬೀದಿನಾಟಕ ಮೂಲಕ ಸರ್ಕಾರದ ಯೋಜನೆಗಳ ಜಾಗೃತಿ
ಬಳ್ಳಾರಿ,ಫೆ.03(ಕರ್ನಾಟಕ ವಾರ್ತೆ):
ತಾಲ್ಲೂಕಿನ ಕೊಳಗಲ್ಲು ಗ್ರಾಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕ್ಷೇತ್ರ ಪ್ರಚಾರ ಕಾರ್ಯಕ್ರಮದಡಿ ಸೋಮವಾರ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಹಾಗೂ ವಿವಿಧ ಯೋಜನೆಗಳ ಕುರಿತು ಬೀದಿನಾಟಕ ಹಾಗೂ ಜಾನಪದ ಸಂಗೀತ ಕಲಾತಂಡಗಳಿAದ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮಕ್ಕೆ ಗ್ರಾಮದ ಹಿರಿಯರಾದ ತಿಮ್ಮಪ್ಪ ಅವರು ತಮಟೆ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಇಬ್ರಾಹಿಂಪುರ ಚಿಗುರು ಕಲಾತಂಡ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ವಿವಿಧ ಜನಪರ ಯೋಜನೆಗಳ ಕುರಿತು ಬೀದಿ ನಾಟಕದ ಮೂಲಕ ಹಾಡುಗಳು ಪ್ರಸ್ತುತಪಡಿಸುವ ಮೂಲಕ ಜನರಿಗೆ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಈರಣ್ಣ, ತಿಪ್ಪಯ್ಯ, ಭಾಷಾ ಸಾಬ್, ದುರ್ಗಪ್ಪ, ಸಿದ್ದಪ್ಪ, ನಾಗಪ್ಪ, ಕಲಾವಿದರಾದ ಹುಲುಗಪ್ಪ ಎಸ್.ಎಂ., ಹೆಚ್.ರಮೇಶ್, ಹೆಚ್.ಎರ್ರಿಸ್ವಾಮಿ, ನವೀನ್, ವೆಂಕಟೇಶ್, ಗಂಗಮ್ಮ, ರುತಮ್ಮ, ರಾಜು ಸೇರಿದಂತೆ ಸಾರ್ವಜನಿಕರು ಇದ್ದರು.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ