ಮಂಗಳವಾರ, ಫೆಬ್ರವರಿ 10, 2026
ಪೋಷಕತ್ವ ಯೋಜನೆಯಡಿ ಅರ್ಜಿ ಆಹ್ವಾನ
ಬಳ್ಳಾರಿ,ಫೆ.10(ಕರ್ನಾಟಕ ವಾರ್ತೆ):
ಬಾಲನ್ಯಾಯ ಕಾಯ್ದೆ-2015 ಸೆಕ್ಷನ್-44 ರ ಅನ್ವಯ ಮಕ್ಕಳನ್ನು ಪೋಷಕತ್ವ ಯೋಜನೆಯಡಿ ಪಾಲನೆ ಹಾಗೂ ಪೋಷಣೆಗಾಗಿ ಆಸಕ್ತಿ ಇರುವ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಕ್ಕಳ ಕಲ್ಯಾಣ ಸಮಿತಿಯ ಆದೇಶದ ಮೇರೆಗೆ ಮಗುವಿಗೆ ಸಂಬAಧವಿಲ್ಲದ ಕುಟುಂಬಕ್ಕೆ ತಾತ್ಕಾಲಿಕವಾಗಿ ಅಥವಾ ವಿಸ್ತರಿಸಲ್ಪಟ್ಟ ಒಂದು ವರ್ಷದ ಅವಧಿಗೆ ಮೀರದಂತೆ ಮಗುವನ್ನು ಪೋಷಕತ್ವ ಯೋಜನೆಯಡಿಯಲ್ಲಿ ನಿಯೋಜನೆ ಮಾಡಬಹುದಾಗಿದೆ.
ಮಗು ಹಾಗೂ ಕುಟುಂಬದ ಹೊಂದಾಣಿಕೆಯ ಆಧಾರದ ಮೇರೆಗೆ ಮಕ್ಕಳ ಕಲ್ಯಾಣ ಸಮಿತಿಯು ಮಗುವನ್ನು 18 ವರ್ಷದ ವಯಸ್ಸಿನವರೆಗೂ ಪೋಷಕತ್ವವನ್ನು ಮುಂದುವರೆಸಲು ಅವಕಾಶ ಕಲ್ಪಿಸುತ್ತದೆ.
ಪ್ರತಿಯೊಂದು ಮಗುವಿಗೂ ಕುಟುಂಬದ ವಾತಾವರಣದಲ್ಲಿ ಬೆಳೆಯುವ ಹಕ್ಕಿರುತ್ತದೆ. ಆದರೆ ಕಾರಣಾಂತರಗಳಿAದ ಕೆಲವು ಮಕ್ಕಳನ್ನು ಸರ್ಕಾರಿ, ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿರುವ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ದಾಖಲು ಮಾಡುವ ಅನಿವಾರ್ಯತೆ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮಗುವನ್ನು ಮಗುವಿನ ಸ್ವಂತ ಕುಟುಂಬದಲ್ಲಿ ಇರಿಸಲು ಸಾಧ್ಯವಾಗದಿದ್ದಾಗ ಅಂತಹ ಮಕ್ಕಳಿಗೆ ಪೋಷಕತ್ವ ಯೋಜನೆಯಡಿ ಇತರೆ ಕುಟುಂಬದಲ್ಲಿ ಬೆಳೆಯಲು ಮಗುವಿನ ಹಿತದೃಷ್ಟಿಯಿಂದ ಮಕ್ಕಳ ಕಲ್ಯಾಣ ಸಮಿತಿಯು ತೀರ್ಮಾನವನ್ನು ತೆಗೆದುಕೊಳ್ಳುತ್ತದೆ.
ಈ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಬಾಲನ್ಯಾಯ ಕಾಯ್ದೆಯಡಿ ನೋಂದಣಿಯಾಗಿರುವ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ವಿವಿಧ ರೀತಿಯ ಸಂಕಷ್ಟಕ್ಕೆ ಒಳಗಾಗಿ ದಾಖಲಾಗಿರುವ 06 ರಿಂದ 18 ವರ್ಷದ ಒಳಗಿನ ಮಕ್ಕÀಳನ್ನು ಪೋಷಕತ್ವ ಯೋಜನೆಯಡಿಯಲ್ಲಿ ನೋಡಿಕೊಳ್ಳಲು ಆಸಕ್ತಿ ಇರುವ ಪೋಷಕರು ನಿಗಧಿತ ನಮೂನೆಯಲ್ಲಿ ಅರ್ಜಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಂತಿಧಾಮ ಆವರಣ, ಕಂಟೋನ್ ಮೆಂಟ್, ಬಳ್ಳಾರಿ, ಇ-ಮೇಲ್ ಐ.ಡಿ: dcpuballari@gamil.com ಅಥವಾ ದೂ.08392-241373 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರದೇವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ