ಬುಧವಾರ, ಫೆಬ್ರವರಿ 4, 2026
ಬಳ್ಳಾರಿ: ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಭೇಟಿ-ಪ್ರಶಂಸೆ
ಬಳ್ಳಾರಿ,ಫೆ.03(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯಾಭಿವದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಇವರ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀ ಕೋಟೆ ಮಲ್ಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಅಂಗವಾಗಿ ದೇವಸ್ಥಾನ ಆವರಣದಲ್ಲಿ ಆಯೋಜಿಸಲಾಗಿದ್ದ ಮೂರು ದಿನಗಳ (ಫೆ.01 ರಿಂದ 03 ರವರೆಗೆ) ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಮಂಗಳವಾರ ಭೇಟಿ ನೀಡಿ ವೀಕ್ಷಿಸಿದರು.
ಜಿಲ್ಲೆಯ ಗ್ರಾಮೀಣ ಭಾಗದ ಮಹಿಳೆಯರಿಂದ ಉತ್ಪಾದಿಸಿದ ಉತ್ಪನ್ನಗಳ ವಿವಿಧ ಬಗೆಯ ತಿಂಡಿ-ದಿನಿಸುಗಳ ಸ್ಟಾಲ್ ಗಳ ವೀಕ್ಷಣೆ ಮಾಡಿ ಸ್ವ-ಸಹಾಯ ಸಂಘದ ಮಹಿಳೆಯರೊಂದಿಗೆ ಕುಶಲೋಪರಿ ನಡೆಸಿ ಮಾಹಿತಿ ಪಡೆದುಕೊಂಡರು.
ಮುಖ್ಯವಾಗಿ ಕನ್ನಡಿಗಳು, ಮಣಿಗಳು, ಚಿಪ್ಪುಗಳು ಮತ್ತು ವರ್ಣರಂಜಿತ ದಾರಗಳನ್ನು ಬಳಸಿ, ಪ್ಯಾಚ್‌ವರ್ಕ್ ಮತ್ತು ಕ್ವಿಲ್ಟಿಂಗ್ ತಂತ್ರಗಳ ಮೂಲಕ ತಯಾರಿಸಿದ ಲಂಬಾಣಿ ಕಸೂತಿಗಳನ್ನು ನೋಡಿ ಪ್ರಶಂಸಿದ ಅವರು ಬಹಳ ಅದ್ಭುತ ಹಾಗೂ ಆಕರ್ಷಕವಾಗಿವೆ ಎಂದರು.
ರಾಜ್ಯ ಮಟ್ಟದ ಅಧಿಕಾರಿಗಳಿಗೆ ಕೊಡುಗೆಯಾಗಿ ನೀಡಲು ಆರ್ಡರ್ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ವಿವಿಧೆಡೆ ಆಯೋಜಿಸುವ ಸಭೆ-ಸಮಾರಂಭಗಳಿಗೆ ಸ್ವ ಸಹಾಯ ಮಹಿಳಾ ಗುಂಪುಗಳಿAದ ತಯಾರಿಸಿದ ಆಹಾರ ಉತ್ಪನ್ನಗಳನ್ನು ನೀಡಲು ತಿಳಿಸಿದರು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಜಿಪಂ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ಜಿಪಂ ಸಹಾಯಕ ನಿರ್ದೇಶಕ ಬಸವರಾಜ್ ಹಿರೇಮಠ, ಓಖಐಒ ಯೋಜನೆಯ ಆPಒ ರಾಜೇಂದ್ರ, ಜಿಲ್ಲಾ ವ್ಯವಸ್ಥಾಪಕರಾದ ವಿಜಯಕುಮಾರ್, ರಘುವರ್ಮ, ಅಪೂರ್ವ ಸೇರಿದಂತೆ ಜಿಲ್ಲಾ ತಾಲ್ಲೂಕು ಅಭಿಯಾನ ನಿರ್ವಹಣಾ ಘಟಕಗಳ ಸಿಬ್ಬಂದಿಗಳು, ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟದ ಸಿಬ್ಬಂದಿಗಳು ಹಾಗೂ ಜಿಲ್ಲೆಯ ಮಹಿಳಾ ಸ್ವ-ಸಹಾಯ ಗುಂಪಿನ ಸದಸ್ಯರುಗಳು ಇದ್ದರು.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)





ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ