ಗುರುವಾರ, ಫೆಬ್ರವರಿ 26, 2026

ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಫೆ.26(ಕರ್ನಾಟಕ ವಾರ್ತೆ): ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಕುರಿ ಅಥವಾ ಮೇಕೆ (10+1) ಘಟಕ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಧನ ಪಡೆಯಲಿಚ್ಚಿಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿರುವವರು, 18 ರಿಂದ 60 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಮಹಿಳೆಯರಿಗೆ ಶೇ.33.3 ಮತ್ತು ವಿಶೇಷಚೇತನರಿಗೆ ಶೇ.3 ರಷ್ಟು ಮೀಸಲಾತಿ ಕಲ್ಪಿಸಲಾಗಿದ್ದು, ಬಳ್ಳಾರಿ ಜಿಲ್ಲೆಯ ತಾಲ್ಲೂಕು ಮತ್ತು ವಿಧಾನಸಭಾ ಕ್ಷೇತ್ರವಾರು ವಿಂಗಡಿಸಿ ಗುರಿ ನಿಗಧಿಪಡಿಸಿ ಅನುಷ್ಠಾನಗೊಳಿಸಲಾಗುವುದು. ಅರ್ಜಿ ಸಲ್ಲಿಸಬಯಸುವವರು ಹೊಸಪೇಟೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಬಳ್ಳಾರಿ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ತಾಲ್ಲೂಕು ಮಟ್ಟದ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 7 ರೊಳಗಾಗಿ ಜಿಲ್ಲಾ ಅನುಷ್ಠಾನಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಸಮೀಪದ ಪಶು ವೈದ್ಯ ಸೇವಾ ಸಂಸ್ಥೆಗಳ ಕಚೇರಿಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ