ಬುಧವಾರ, ಫೆಬ್ರವರಿ 18, 2026

ಆಕ್ಷೇಪಣೆಗಳಿಗೆ ಆಹ್ವಾನ

ಬಳ್ಳಾರಿ,ಫೆ.18(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಆಯ್ಕೆಗಾಗಿ ತಾತ್ಕಾಲಿಕವಾಗಿ ಆಯ್ಕೆಗೊಂಡ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬAಧಿಸಿದAತೆ ಆಕ್ಷೇಪಣೆ ಇದ್ದಲ್ಲಿ ಮಾ.03 ರ ಸಂಜೆ 5.30 ರೊಳಗೆ ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸೂಕ್ತ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬಹುದು. ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬAಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಆಯಾ ಗ್ರಾಮ ಪಂಚಾಯತ್, ತಹಶೀಲ್ದಾರರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ಜಿಲ್ಲಾಧಿಕಾರಿಯವರ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಸಲಾಗಿದೆ ಎಂದು ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ