ಬುಧವಾರ, ಫೆಬ್ರವರಿ 18, 2026

ಬಾಲಕ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಫೆ.18(ಕರ್ನಾಟಕ ವಾರ್ತೆ): ನಗರದಲ್ಲಿ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿ.ಪ್ರವೀಣ್ ಕುಮಾರ್ ಎನ್ನುವ 16 ವರ್ಷದ ಬಾಲಕ ಫೆ.12 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಚಹರೆ ಗುರುತು: ಎತ್ತರ 5 ಅಡಿ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಗದ್ದ ಕೆಳಗೆ ಹಳೆ ಗಾಯದ ಗುರುತು ಇರುತ್ತದೆ. ಕನ್ನಡ, ತೆಲುಗು, ಹಿಂದಿ ಮತ್ತು ಇಂಗ್ಲೀಷ್ ಭಾಷೆ ಮಾತನಾಡುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಮೆರುನ್ ಬಣ್ಣದ ಟಿ-ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಬಾಲಕನ ಬಗ್ಗೆ ಮಾಹಿತಿ ದೊರೆತಲ್ಲಿ ಗಾಂಧಿನಗರ ಪೊಲೀಸ್ ಠಾಣೆಯ ದೂ.08392-272192, ಪಿಐ ಮೊ.9480803046, ಪಿಎಸ್‌ಐ ಮೊ.9480803082 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ