ಬುಧವಾರ, ಫೆಬ್ರವರಿ 25, 2026
ಅನಾಮಧೇಯ ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಫೆ.25(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಹೊನ್ನಳ್ಳಿ ಗ್ರಾಮದ ಹೊಸ ಬೈಪಾಸ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಂದಾಜು 65-70 ವರ್ಷದ ಅನಾಮಧೇಯ ವ್ಯಕ್ತಿಗೆ ಹಿಂದಿನಿAದ ಯಾವುದೋ ಒಂದು ವಾಹನದ ಚಾಲಕನ ಅತಿವೇಗದಿಂದ ಡಿಕ್ಕಿ ಹೊಡೆದ ಪರಿಣಾಮ ಫೆ.24 ರಂದು ವ್ಯಕ್ತಿಯು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಪ್ರಕರಣ ದಾಖಲಾಗಿರುತ್ತದೆ. ಮೃತನ ವಾರಸುದಾರರ ಬಗ್ಗೆ ಮಾಹಿತಿ ಇರುವುದಿಲ್ಲ. ಸಾರ್ವಜನಿಕರು ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
ಮೃತ ವ್ಯಕ್ತಿಯ ಚಹರೆ: ಎತ್ತರ 5.6 ಅಡಿ, ಕೋಲು ಮುಖ, ಕಪ್ಪು ಮೈಬಣ್ಣ, ತೆಳ್ಳನೆಯ ಮೈ ಕಟ್ಟು ಹೊಂದಿದ್ದು, ತಲೆಯಲ್ಲಿ 2 ರಿಂದ 3 ಇಂಚು ಉದ್ದದ ಬಿಳಿ ಮಿಶ್ರಿತ ಕೂದಲು, ಕುರುಚಲು ಗಡ್ಡ ಹೊಂದಿರುತ್ತಾನೆ.
ತಿಳಿ ನೀಲಿ ಬಣ್ಣದ ತುಂಬು ತೋಳಿನ ಅಂಗಿ, ಹಸಿರು ಬಣ್ಣದ ಒಳ ಉಡುಪು, ನೀಲಿ ಬಣ್ಣದ ಚೆಕ್ಸ್ ಲುಂಗಿ ಧರಿಸಿರುತ್ತಾನೆ.
ಮೃತನ ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಪಿಐ ಮೊ.9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ