ಬುಧವಾರ, ಫೆಬ್ರವರಿ 25, 2026
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂಸದ ಈ.ತುಕಾರಾಮ್
ಬಳ್ಳಾರಿ,ಫೆ.25(ಕರ್ನಾಟಕ ವಾರ್ತೆ):
ಬಳ್ಳಾರಿ ಲೋಕಸಭೆ ಕ್ಷೇತ್ರದ ಸಂಸದ ಈ.ತುಕಾರಾಮ್ ಅವರು ಬುಧವಾರ ನಗರದ ಜಿಪಂ ಹಳೆಯ ನಜೀರ್ ಸಾಬ್ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಶಾಲೆ, ಶಿಕ್ಷಣ, ಆರೋಗ್ಯ, ವಸತಿ, ಕಂದಾಯ ಹಾಗೂ ವಿವಿಧ ಇಲಾಖೆಗಳಿಗೆ ಸಂಬAಧಿಸಿದAತೆ ಸಾರ್ವಜನಿಕರು ಅಹವಾಲು ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅವರು ಸಕಾಲದಲ್ಲಿ ಅಹವಾಲುಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ಹೇಳಿದರು.
ಇದಕ್ಕೂ ಮುನ್ನ ಸಂಸದರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಫಲಾನುಭವಿಗಳಿಗೆ ಬ್ಯಾಟರಿ ಚಾಲಿತ ವೀಲ್ ಚೇರ್, ತೋಟಗಾರಿಕೆ ಇಲಾಖೆಯಿಂದ ಎನ್‌ಹೆಚ್‌ಎಂ, ಪಿಎಂಕೆಎಸ್‌ವೈ ಯೋಜನೆಯಡಿ ಫಲಾನುಭವಿಗಳಿಗೆ ಟ್ರಾö್ಯಕ್ಟರ್, ಟ್ರಾö್ಯಕ್ಟರ್ ಟ್ರಾö್ಯಲಿ, ಟ್ರಾö್ಯಕ್ಟರ್ ಚಾಲಿತ ಸ್ಪೇಯರ್, ಹನಿ ನೀರಾವರಿ, ಸೋಲಾರ್ ಪಂಪ್ ಸೆಟ್ ವಿತರಣೆಯ ಆದೇಶ ಪ್ರತಿ ವಿತರಿಸಿದರು.
ಬಳಿಕ ಸುಕನ್ಯಾ ಸಮೃದ್ಧಿ ಯೋಜನೆಯಡಿ ಫಲಾನುಭವಿಗಳಿಗೆ ಭಾಗ್ಯಲಕ್ಷಿö್ಮ ಬಾಂಡ್ ಆದೇಶ ಪ್ರತಿ, ಸಂಡೂರು ತಾಲ್ಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ನೇಮಕಗೊಂಡವರಿಗೆ ಆದೇಶ ಪ್ರತಿ, ಆಯುಷ್ ಇಲಾಖೆಯಿಂದ ಕಿಟ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್. ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ ಪೆನ್ನೇಕರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ- ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)










ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ