ಶುಕ್ರವಾರ, ಫೆಬ್ರವರಿ 20, 2026

ಸರ್ವೋತ್ತಮ ಸೇವಾ ಪ್ರಶಸ್ತಿ: ನಾಮನಿರ್ದೇಶನಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಫೆ.20(ಕರ್ನಾಟಕ ವಾರ್ತೆ): 2025-26ನೇ ಸಾಲಿನಲ್ಲಿ ರಾಜ್ಯ ಸರ್ಕಾರವು ಅತ್ಯುನ್ನತ ಸೇವೆ ಸಲ್ಲಿಸಿದ ಹಾಗೂ ಸಾಧನೆ ಮಾಡಿರುವ ರಾಜ್ಯ ಸರ್ಕಾರಿ ನೌಕರರಿಗೆ ಜಿಲ್ಲಾವಾರು, ಇಲಾಖಾವಾರು ಹಾಗೂ ರಾಜ್ಯವಾರು “ಸರ್ವೋತ್ತಮ ಸೇವಾ ಪ್ರಶಸ್ತಿ” ನೀಡುವ ಯೋಜನೆ ಜಾರಿಗೆ ತರಲಾಗಿದ್ದು, ಪ್ರಶಸ್ತಿಗಳಿಗೆ ನಾಮ ನಿರ್ದೇಶನ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಫೆ.25 ರೊಳಗಾಗಿ ಪೂರ್ಣಗೊಳಿಸಿ ನಾಮನಿರ್ದೇಶನಗಳನ್ನು ಜಿಲ್ಲಾಡಳಿತ ಕಚೇರಿಗೆ ಸಲ್ಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ