ಸೋಮವಾರ, ಫೆಬ್ರವರಿ 9, 2026

ತಾಯಿ, ಮಗ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಫೆ.09(ಕರ್ನಾಟಕ ವಾರ್ತೆ): ಸಂಡೂರು ತಾಲ್ಲೂಕಿನ ಬಂಡ್ರಿ ಗ್ರಾಮದ ನಿವಾಸಿ ಸುಶ್ಮಿತಾ ಎನ್ನುವ 28 ವರ್ಷದ ಮಹಿಳೆಯು ಸಂಜಯ್ ಎನ್ನುವ 2 ವರ್ಷದ ತನ್ನ ಮಗುವಿನೊಂದಿಗೆ ಜ.22 ರಂದು ಕಾಣೆಯಾಗಿದ್ದು, ಈ ಕುರಿತು ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ತನಿಖಾಧಿಕಾರಿ ಮನವಿ ಮಾಡಿದ್ದಾರೆ. ಸುಶ್ಮಿತಾ ಚಹರೆ ಗುರುತು: ಸುಮಾರು 5.5 ಅಡಿ ಎತ್ತರ, ಕೋಲುಮುಖ, ಗೋಧಿ ಮೈ ಬಣ್ಣ, ತೆಳ್ಳನೇಯ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಪಿಂಕ್ ಬಣ್ಣದ ಕುಪ್ಪಸ, ಆಕಾಶ ನೀಲಿ ಬಣ್ಣದ ಸೀರೆ ಧರಿಸಿರುತ್ತಾಳೆ. ಮಹಿಳೆಯು ಕನ್ನಡ, ತೆಲುಗು ಭಾಷೆ ಮಾತನಾಡುತ್ತಾಳೆ. ಸಂಜಯ್ ಚಹರೆ ಗುರುತು: ಸುಮಾರು 2 ಅಡಿ ಎತ್ತರ, ದುಂಡು ಮುಖ, ಗೋಧಿ ಮೈ ಬಣ್ಣ, ತೆಳ್ಳನೇಯ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಟಿ-ಶರ್ಟ್, ಚಡ್ಡಿ ಧರಿಸಿರುತ್ತಾನೆ. ಮೇಲ್ಕಂಡ ಚಹರೆಯುಳ್ಳ ತಾಯಿ ಮತ್ತು ಮಗುವಿನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಚೋರನೂರು ಪೊಲೀಸ್ ಠಾಣೆಯ ಪಿಎಸ್‌ಐ ಮೊ.9480803063, ಸಂಡೂರು ಸಿಪಿಐ ಮೊ.9480803036, ತೋರಣಗಲ್ಲು ಡಿಎಸ್‌ಪಿ ಮೊ.9480803010, ಬಳ್ಳಾರಿ ಎಸ್‌ಪಿ ಮೊ.9480803000 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ