ಸೋಮವಾರ, ಫೆಬ್ರವರಿ 2, 2026
ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಚಾಲನೆ
ಬಳ್ಳಾರಿ,ಫೆ.02(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯಾಭಿವದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಇವರ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀ ಕೋಟೆ ಮಲ್ಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಅಂಗವಾಗಿ ದೇವಸ್ಥಾನ ಆವರಣದಲ್ಲಿ ಆಯೋಜಿಸಲಾಗಿದ್ದ ಮೂರು ದಿನಗಳ (ಫೆ.01 ರಿಂದ 03 ರವರೆಗೆ) ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಭಾನುವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರು ತಯಾರಿಸಿದ ಉತ್ಪನ್ನಗಳನ್ನು ಮಾರಾಟ ಮಾಡಲು, ಅವರಿಗೆ ಬೆಂಬಲ ಮತ್ತು ಪ್ರೋತ್ಸಾಹ ನೀಡಲಾಗುತ್ತಿದೆ. ಸಾರ್ವಜನಿಕರು ಭೇಟಿ ನೀಡಿ ಇದರ ಸದುಪಯೋಗಪಡೆದುಕೊಳ್ಳಬೇಕು ಎಂದರು.
ಮೇಳದಲ್ಲಿ ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರು ತಯಾರಿಸಿದ ವಿವಿಧ ಬಗೆಯ ಉತ್ಪನ್ನಗಳನ್ನು ಪ್ರದರ್ಶನಕ್ಕಿರಿಸಲಾಗಿತ್ತು.
ಈ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಪಿ.ರವಿಕುಮಾರ್, ಜಿಲ್ಲಾ ಪಂಚಾಯತ್ ನ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ, ಜಿಪಂ ಯೋಜನಾ ನಿರ್ದೇಶಕ ಬಸವರಾಜ ಹಿರೇಮಠ, ಜಿಪಂ ಮುಖ್ಯ ಲೆಕ್ಕಾಧಿಕಾರಿ ವಿನೋದ್ ಕುಮಾರ್ ಸೇರಿದಂತೆ ಎನ್‌ಆರ್‌ಎಲ್‌ಎಂ ಯೋಜನೆಯ ಸಿಬ್ಬಂದಿಗಳು, ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರುಗಳು ಇದ್ದರು.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)



ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ