ಸೋಮವಾರ, ಫೆಬ್ರವರಿ 9, 2026
ವ್ಯಕ್ತಿ ನಾಪತ್ತೆ: ಪತ್ತೆಗೆ ಮನವಿ
ಬಳ್ಳಾರಿ,ಫೆ.09(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸಿರಿವಾರ ಗ್ರಾಮದ ಒಂದನೇ ವಾರ್ಡ್ ನ ನಿವಾಸಿ ಬಸವರಾಜ್.ಹೆಚ್ ಎನ್ನುವ 35 ವರ್ಷದ ವ್ಯಕ್ತಿಯು ಫೆ.05 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ಸ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.
ಚಹರೆ ಗುರುತು: ಎತ್ತರ 5.8 ಅಡಿ, ದುಂಡು ಮುಖ, ಕಪ್ಪು ಮೈ ಬಣ್ಣ, ಕಪ್ಪು ಕೂದಲು ಹೊಂದಿದ್ದು, ಬಲಗೈ ಗೆ ಅಚ್ಛೆ ಹಾಕಿಸಿಕೊಂಡಿರುತ್ತಾನೆ. ಬಲಗಡೆಯ ಹಣೆಗೆ ಪುಲ್‌ಪುರೆ ಇರುತ್ತದೆ.
ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಅಂಗಿ, ಸಿಮೆಂಟ್ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಮತ್ತು ತೆಲುಗು ಭಾಷೆ ಮಾತಾನಾಡುತ್ತಾನೆ.
ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ