ಮಂಗಳವಾರ, ಫೆಬ್ರವರಿ 10, 2026

ಯುವಕ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಫೆ.10(ಕರ್ನಾಟಕ ವಾರ್ತೆ): ತಾಲ್ಲೂಕಿನ ಸಂಜೀವರಾಯಕೋಟೆ ಗ್ರಾಮದ 1ನೇ ವಾರ್ಡ್ನ ನಿವಾಸಿ ರಂಗಸ್ವಾಮಿ ಎನ್ನುವ 26 ವರ್ಷದ ಯುವಕ ಫೆ.07 ರಂದು ಕಾಣೆಯಾಗಿರುವ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಚಹರೆ ಗುರುತು: ಎತ್ತರ 5.5 ಅಡಿ, ಕೋಲುಮುಖ, ಕಪ್ಪು ಮೈಬಣ್ಣ, ದೃಢವಾದ ಮೈಕಟ್ಟು, ಕಪ್ಪು ಕೂದಲು, ಎಡಗೈಗೆ ಅಮ್ಮ ಎಂದು ಹಚ್ಚೆ ಹಾಕಿಸಿಕೊಂಡಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಕಪ್ಪು ಬಣ್ಣದ ಆಫ್ ಟಿ-ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್, ಧರಿಸಿರುತ್ತಾನೆ. ಕನ್ನಡ, ತೆಲುಗು ಭಾಷೆ ಮಾತನಾಡುತ್ತಾನೆ. ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ