ಸೋಮವಾರ, ಫೆಬ್ರವರಿ 16, 2026
ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬಳ್ಳಾರಿ,ಫೆ.16(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾಧ್ಯಮ) ಶಾಲೆ, ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ (ಸಿ.ಬಿ.ಎಸ್.ಇ) ಶಾಲೆಗಳ 2026-27ನೇ ಶೈಕ್ಷಣಿಕ ವರ್ಷಕ್ಕೆ 6ನೇ ತರಗತಿಗೆ ದಾಖಲಾತಿಗೆ ಉಚಿತ ಪ್ರವೇಶಕ್ಕಾಗಿ ಆನ್‌ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಫೆ.28 ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ(ದೂ.08392-200125/224) ಹಾಗೂ ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರಗಳಲ್ಲಿ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ