ಬುಧವಾರ, ಫೆಬ್ರವರಿ 4, 2026
ಕಂಪ್ಲಿ ಪುರಸಭೆ: ಅರ್ಜಿ ಆಹ್ವಾನ
ಬಳ್ಳಾರಿ,ಫೆ.04(ಕರ್ನಾಟಕ ವಾರ್ತೆ):
ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿನ ಸೋಮಪ್ಪ ಪಾರ್ಕ್ ನ್ನು ನಿರ್ವಹಣೆ ಮಾಡಲು ಡೇ-ನಲ್ಮ್ ಅಭಿಯಾನದಡಿ ರಚಿತವಾದ ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳಿAದ ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರ ಪುರಸ್ಕೃತ ಯೋಜನೆಯಾದ ಅಮೃತ 2.0 ಅಭಿಯಾನದ ಅಮೃತ್ ಮಿತ್ರ ಕಾರ್ಯಕ್ರಮದ ತಾಂತ್ರಿಕೇತರ ಚಟುವಟಿಕೆ ಕಾರ್ಯಕ್ರಮದಡಿ ನಿರ್ವಹಣೆ ಮಾಡಲು ಉದ್ದೇಶಿಸಲಾಗಿದ್ದು, ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆ ಹಾಗೂ ಅವಶ್ಯಕ ದಾಖಲೆಗಳನ್ನು ಫೆ.16 ರ ಸಂಜೆ 05.30 ರೊಳಗಾಗಿ ಮುಚ್ಚಿದ ಲಕೋಟೆಯಲ್ಲಿ ಕಂಪ್ಲಿ ಪುರಸಭೆ ಕಚೇರಿಗೆ ಸಲ್ಲಿಸಬೇಕು ಎಂದು ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ