ಗುರುವಾರ, ಫೆಬ್ರವರಿ 19, 2026
ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳಾರಿ,ಫೆ.19(ಕರ್ನಾಟಕ ವಾರ್ತೆ):
ನಗರದÀ ಬ್ರೂಸ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾರೆಣ್ಣ ಎನ್ನುವ 50 ವರ್ಷದ ವ್ಯಕ್ತಿ 2025ರ ಅ.06 ರಂದು ಮನೆಯಿಂದ ಹೊರಗಡೆ ಹೋದವರು ಮರಳಿ ಬಾರದೇ ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ವ್ಯಕ್ತಿಯ ಚಹರೆ:
ಎತ್ತರ 5.8 ಅಡಿ, ದುಂಡು ಮುಖ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಎಡಗೈ ಮೇಲೆ ‘ಸೋಮ’ ಎಂದು ಹೆಸರನ್ನು ಹಚ್ಚೆ ಹಾಕಿಸಿಕೊಂಡಿರುತ್ತಾನೆ. ಕೊರಳಲ್ಲಿ ರುದ್ರಾಕ್ಷಿ ಸರ ಧರಿಸಿರುತ್ತಾನೆ.
ಕಾಣೆಯಾದ ಸಂದರ್ಭದಲ್ಲಿ ಅರ್ಧತೋಳಿನ ಸಿಮೆಂಟ್ ಬಣ್ಣದ ಅಂಗಿ, ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಭಾಷೆ ಮಾತನಾಡುತ್ತಾನೆ. ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬ್ರೂಸ್‌ಪೇಟೆ ಪೊಲೀಸ್ ಠಾಣೆ ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ಸಂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ