ಶುಕ್ರವಾರ, ಮಾರ್ಚ್ 27, 2026
ಮಾ.28 ರಂದು ಅಂತರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮ
ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ):
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಾ.28 ರಂದು ಬೆಳಿಗ್ಗೆ 10 ಗಂಟೆಗೆ ನಗರದ ತಾಳೂರು ರಸ್ತೆಯ ಜಿಲ್ಲಾ ನ್ಯಾಯಾಲಯದ 1ನೇ ಮಹಡಿಯ ಸಭಾಂಗಣದಲ್ಲಿ ಅಂತರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಾಗೂ ಜಿಲ್ಲಾ ನ್ಯಾಯಾಂಗ ಇಲಾಖೆಯ ನೌಕರರಿಗೆ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ತೋರಣಗಲ್ಲು: ನಾಲ್ವರು ಬಾಲಕಾರ್ಮಿಕ ಮಕ್ಕಳ ರಕ್ಷಣೆ
ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ):
ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ಹಾಗೂ ‘ಪ್ಯಾನ್-ಇಂಡಿಯಾ ರೆಸ್ಕೂö್ಯ ಮತ್ತು ರಿಹ್ಯಾಬಿಲಿಟೇಶನ್' ಅಭಿಯಾನದ ಅಂಗವಾಗಿ, ಸಂಡೂರು ತಾಲೂಕಿನ ತೋರಣಗಲ್ಲು ಗ್ರಾಮದಲ್ಲಿ ಶುಕ್ರವಾರ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ತಾಲೂಕು ಟಾಸ್ಕ್ ಫೋರ್ಸ್ ಸಮಿತಿಯು ದಿಢೀರ್ ದಾಳಿ ನಡೆಸಿ ನಾಲ್ವರು ಮಕ್ಕಳನ್ನು ರಕ್ಷಿಸಿದೆ.
ಸಂಡೂರು ಗ್ರೇಡ್-2 ತಹಶೀಲ್ದಾರ್ ಸುಧಾರಾಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತೋರಣಗಲ್ಲು ವ್ಯಾಪ್ತಿಯ ಹೊಸಪೇಟೆ ಮುಖ್ಯ ರಸ್ತೆ, ಬೈಪಾಸ್ ರಸ್ತೆ ಹಾಗೂ ರೈಲ್ವೇ ನಿಲ್ದಾಣದ ಸುತ್ತಮುತ್ತಲಿನ ವಿವಿಧ ಉದ್ದಿಮೆಗಳಾದ ಗ್ಯಾರೇಜ್, ಮೆಕ್ಯಾನಿಕ್ ಶಾಪ್, ಬೇಕರಿ, ಫಾಸ್ಟ್ ಫುಡ್ ಸೆಂಟರ್ ಗಳು ಸೇರಿದಂತೆ ಮನೆ ನಿರ್ಮಾಣ ನಡೆಯುತ್ತಿದ್ದ ಸ್ಥಳಗಳಲ್ಲಿ ದಾಳಿ ನಡೆಸಿ ತಪಾಸಣೆ ಕೈಗೊಳ್ಳಲಾಯಿತು.
ಈ ವೇಳೆ ಕೆಲಸ ಮಾಡುತ್ತಿರುವುದು ಕಂಡುಬAದ 04 ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಸಮಿತಿಯು ವಶಕ್ಕೆ ಪಡೆದು, ಅಧಿಕಾರಿಗಳು ಸ್ಥಳದಲ್ಲಿಯೇ ಮಕ್ಕಳ ಹೇಳಿಕೆಗಳನ್ನು ದಾಖಲಿಸಿಕೊಂಡು ನಂತರ ಅವರನ್ನು ಸುರಕ್ಷಿತವಾಗಿ ಪೋಷಕರ ವಶಕ್ಕೆ ಒಪ್ಪಿಸಲಾಯಿತು.
ದಾಳಿಯ ಸಂದರ್ಭದಲ್ಲಿ ಉದ್ದಿಮೆಗಳ ಮಾಲೀಕರಿಗೆ ಬಾಲಕಾರ್ಮಿಕ ಪದ್ಧತಿಯ ದುಷ್ಟರಿಣಾಮ ಹಾಗೂ ಕಾನೂನು ಕ್ರಮಗಳ ಬಗ್ಗೆ ಎಚ್ಚರಿಕೆ ನೀಡಲಾಯಿತು. ಬಳಿಕ ಕರಪತ್ರ ಮತ್ತು ಪೋಸ್ಟರ್ಗಳನ್ನು ಹಂಚುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಈ ಕಾರ್ಯಾಚರಣೆಯಲ್ಲಿ ಸಂಡೂರು ಕಾರ್ಮಿಕ ನಿರೀಕ್ಷಕ ಮಂಜುನಾಥ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್, ತೋರಣಗಲ್ಲು ಕಂದಾಯ ನಿರೀಕ್ಷಕರು, ಮಕ್ಕಳ ರಕ್ಷಣಾ ಘಟಕದ ಅರುಳ್, ಸಹಾಯವಾಣಿ ಸಿಬ್ಬಂದಿ ಕಾರ್ತಿಕ್, ರೀಚ್ ಸಂಸ್ಥೆಯ ಹನುಮಂತಪ್ಪ, ರೀಡ್ಸ್ ಸಂಸ್ಥೆಯ ಸಂಯೋಜಕ ತಿಪ್ಪೇಸ್ವಾಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
-----------
ಹೆಚ್ಚುತ್ತಿರುವ ಬಿಸಿಲಿನ ತಾಪ: ಸಾರ್ವಜನಿಕರು ಜಾಗೃತಿ ವಹಿಸಲು ಡಿಹೆಚ್ಓ ಡಾ.ಯಲ್ಲಾ ರಮೇಶ್ ಬಾಬು ಮನವಿ
ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ):
ಪ್ರಸಕ್ತ ವರ್ಷ ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಭಾರತೀಯ ಹವಮಾನ ಇಲಾಖೆಯ ಮುನ್ಸೂಚನೆಯಂತೆ ಸಾರ್ವಜನಿಕರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ಮನವಿ ಮಾಡಿದ್ದಾರೆ.
ಶಾಖಾಘಾತ ಹಾಗೂ ನಿರ್ಜಲೀಕರಣದಿಂದ ರಕ್ಷಿಸಿಕೊಳ್ಳಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸುವಂತೆ ಅವರು ತಿಳಿಸಿದ್ದಾರೆ.
*ಏನು ಮಾಡಬೇಕು?:*
ಮನೆಯಿಂದ ಹೊರಬರುವಾಗ ಸಡಿಲವಾದ, ತಿಳಿ ಬಣ್ಣದ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಗಾಳಿಯಾಡುವ ಪಾದರಕ್ಷೆಗಳನ್ನು ಬಳಸಬೇಕು. ಸದಾ ಕುಡಿಯುವ ನೀರನ್ನು ಜೊತೆಯಲ್ಲಿಟ್ಟುಕೊಳ್ಳಿ. ಬಾಯಾರಿಕೆಯಾಗದಿದ್ದರೂ ನಿಯಮಿತವಾಗಿ ನೀರು, ಮಜ್ಜಿಗೆ, ಎಳೆನೀರು ಅಥವಾ ಹಣ್ಣಿನ ರಸ ಸೇವಿಸಿ. ಓಆರ್ಎಸ್ ದ್ರಾವಣ ಬಳಸುವುದು ಉತ್ತಮ.
ಶುದ್ಧ ಹಾಗೂ ಮಸಾಲೆ ರಹಿತ ಆಹಾರಕ್ಕೆ ಆದ್ಯತೆ ನೀಡಿ. ಬೆರವನನ್ನು ಒರೆಸಲು ಮೆತ್ತನೆಯ ಕರವಸ್ತç ಅಥವಾ ಟಿಶ್ಯೂ ಬಳಸಬಹುದು ಎಂದು ಅವರು ತಿಳಿಸಿದ್ದಾರೆ.
*ಏನು ಮಾಡಬಾರದು?:*
ಅತಿಯಾದ ಕಾಫಿ, ಟೀ, ಕಾರ್ಬೋನೇಟೆಡ್ ಸಾಫ್ಟ್ ಡ್ರಿಂಕ್ಸ್ ಹಾಗೂ ಮದ್ಯಪಾನ ತ್ಯಜಿಸಬೇಕು. ಇವು ದೇಹದಲ್ಲಿನ ನೀರಿನಂಶವನ್ನು ಕಡಿಮೆ ಮಾಡುತ್ತವೆ. ರಸ್ತೆಬದಿಯ ತೆರೆದಿಟ್ಟ ಆಹಾರ, ಮಾಂಸಾಹಾರ ಹಾಗೂ ಅತಿಯಾದ ಮಸಾಲೆ ಪದಾರ್ಥಗಳನ್ನು ಸೇವಿಸಬಾರದು.
ಬಿಸಿಲಿನಿಂದ ಸುಸ್ತಾದಾಗ ತಕ್ಷಣವೇ ಅತಿ ತಣ್ಣಗಿನ ಐಸ್ ನೀರನ್ನು ಮೈಗೆ ಹಾಕಿಕೊಳ್ಳಬೇಡಿ. ಇದರಿಂದ ರಕ್ತನಾಳಗಳು ಸಂಕುಚಿತಗೊAಡು ದೇಹದ ಒಳಗಿನ ಉಷ್ಣತೆ ಏರಿಕೆಯಾಗಿ ಅಂಗಾAಗಗಳಿಗೆ ಹಾನಿಯಾಗುವ ಸಾಧ್ಯತೆ ಇರುತ್ತದೆ.
*ಶಾಖಾಘಾತದ ಲಕ್ಷಣಗಳು ಮತ್ತು ಚಿಕಿತ್ಸೆ:*
ತೊದಲು ಮಾತು, ಅರೆಪ್ರಜ್ಞೆ, ಅತಿಯಾದ ದೇಹದ ಉಷ್ಣತೆ ಮತ್ತು ಉಸಿರಾಟದ ತೊಂದರೆ ಕಂಡುಬAದರೆ ಅದು ಶಾಖಾಘಾತದ ಲಕ್ಷಣಗಳಾಗಿವೆ. ಇಂತಹ ಸಂದರ್ಭದಲ್ಲಿ ತಕ್ಷಣ ವ್ಯಕ್ತಿಯನ್ನು ನೆರಳಿನ ಪ್ರದೇಶಕ್ಕೆ ಸ್ಥಳಾಂತರಿಸಬೇಕು. ಕಾಲುಗಳನ್ನು ಸ್ವಲ್ಪ ಮೇಲಕ್ಕೆ ಎತ್ತಿ ಮಲಗಿಸಿ, ಬಟ್ಟೆಗಳನ್ನು ಸಡಿಲಗೊಳಿಸಬೇಕು. ಸಾಮಾನ್ಯ ನೀರಿನಿಂದ (ಐಸ್ ನೀರಲ್ಲ) ದೇಹವನ್ನು ಒರೆಸಿ ತಂಪು ಮಾಡಬೇಕು. ಸ್ಥಿತಿ ಗಂಭೀರವಾಗಿದ್ದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ಅವರು ಹೇಳಿದ್ದಾರೆ.
*ವಾಂತಿ-ಬೇಧಿ ತಡೆಗಟ್ಟಲು ಕ್ರಮಗಳು:*
ಬೇಸಿಗೆಯಲ್ಲಿ ಕಲುಷಿತ ನೀರಿನಿಂದ ವಾಂತಿ-ಬೇಧಿ ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಸಾರ್ವಜನಿಕರು ಶುದ್ಧೀಕರಿಸಿದ ನೀರನ್ನೇ ಕುಡಿಯಬೇಕು. ಆಹಾರ ಸೇವಿಸುವ ಮುನ್ನ ಹಾಗೂ ಶೌಚದ ನಂತರ ಕೈಗಳನ್ನು ಸಾಬೂನಿನಿಂದ ಕನಿಷ್ಠ 45 ಸೆಕೆಂಡ್ಗಳ ಕಾಲ ತೊಳೆಯಬೇಕು. ಮನೆಯಲ್ಲಿ ತಯಾರಿಸಿದ ತಾಜಾ ಆಹಾರವನ್ನೇ ಸೇವಿಸಬೇಕು. ತುರ್ತು ಸಂದರ್ಭದಲ್ಲಿ ನೆರವಿಗಾಗಿ ಉಚಿತ ಆರೋಗ್ಯ ಸಹಾಯವಾಣಿ 108 ಕ್ಕೆ ಕರೆ ಮಾಡಬಹುದು ಎಂದು ಡಾ.ರಮೇಶ್ ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಒಂದು ದಿನದ ರಾಷ್ಟಿçÃಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ರಂಗನಿರ್ದೇಶಕ ಡಾ.ಸಿ.ಬಸಲಿಂಗಯ್ಯ ಅಭಿಪ್ರಾಯ | ರಂಗಭೂಮಿ ಕಲೆ ಆಳವಾದ ಪ್ರಭಾವ ಬೀರುವಂತಹದ್ದು
ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ):
ರಂಗಭೂಮಿ ಒಂದು ಮುಕ್ತ ವಿಶ್ವವಿದ್ಯಾಲಯವಾಗಿದ್ದು, ರಂಗಭೂಮಿಗೆ ಅಳಿವಿಲ್ಲ. ಅದು ಕಲೆಗಳ ಸಾರವನ್ನು ಹೊಂದಿದೆ. ಜೀವನದ ಮೇಲೆ ಆಳವಾದ ಪ್ರಭಾವ ಬೀರುವಂತಹದ್ದಾಗಿದೆ ಎಂದು ಮೈಸೂರಿನ ರಂಗನಿರ್ದೇಶಕ ಡಾ.ಸಿ.ಬಸಲಿಂಗಯ್ಯ ಅವರು ಹೇಳಿದರು.
ಶುಕ್ರವಾರ ವಿವಿಯ ಡಾ.ಬಿ.ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ವಿವಿಯ ಪ್ರದರ್ಶನ ಕಲೆ ಮತ್ತು ನಾಟಕ ವಿಭಾಗದ ವತಿಯಿಂದ ವಿಶ್ವ ರಂಗಭೂಮಿ ದಿನಾಚರಣೆ-2026 ಪ್ರಯುಕ್ತ ಆಯೋಜಿಸಿದ್ದ “ಕೃತಕ ಬುದ್ಧಿಮತ್ತೆಯ ಯುಗದಲ್ಲಿ ರಂಗಭೂಮಿಯ ಉಳಿವಿನ ಸವಾಲುಗಳು” ಒಂದು ದಿನದ ರಾಷ್ಟಿçÃಯ ವಿಚಾರ ಸಂಕೀರ್ಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವದೆಲ್ಲೆಡೆ ಶಾಂತಿ ಬಯಸುವುದು ರಂಗಭೂಮಿಯ ಮುಖ್ಯ ಧ್ಯೇಯವಾಗಿದೆ ಎಂದು ತಿಳಿಸಿದರು.
ಜೀವನದಲ್ಲಿ ಫೇಲಾದವರೆ ಮಹಾನ್ ವ್ಯಕ್ತಿಗಳಾಗಿದ್ದಾರೆ. ಪ್ರಶ್ನಿಸದೆ ಯಾವುದನ್ನು ಒಪ್ಪಿಕೊಳ್ಳಬೇಡಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಆದಿ ಕವಿ ಪಂಪ, ಅಲ್ಲಮಪ್ರಭು, ಬುದ್ಧ, ರಾಮ- ಸೀತೆ, ಅಕ್ಕಮಹಾದೇವಿ, ಬಸವಣ್ಣನವರ ಕುರಿತಾದ ವಿಚಾರಗಳನ್ನು ವ್ಯಕ್ತಪಡಿಸಿದರು.
ಧಾರವಾಡದ ಹಿರಿಯ ರಂಗಕರ್ಮಿ ಡಾ.ಶಶಿಧರ್ ನರೇಂದ್ರ ಅವರು ದಿಕ್ಸೂಚಿ ಭಾಷಣಕಾರರಾಗಿ ಮಾತನಾಡಿ, ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನ ಬಳಕೆಗೆ ಪ್ರತಿಯೊಂದಕ್ಕೆ ಆಜ್ಞೆ ನೀಡಬೇಕಾಗುತ್ತದೆ. ಕೃತಕ ಬುದ್ಧಿಮತ್ತೆಯ ಯುಗದಲ್ಲಿ ರಂಗ ಪರಂಪರೆಯನ್ನು ಆಧುನಿಕತೆಗೆ ಒಳಪಡಿಸುವ ಕ್ರಮವಾಗಿದೆ ಎಂದು ಹೇಳಿದರು.
ಎಐ ಬರವಣಿಗೆಯ ಹಕ್ಕುಗಳಿಗೆ ಸಾಮ್ಯತೆ ಕೊಡುವುದು ಪ್ರಶ್ನೆಯಾಗಿ ಉಳಿದಿದೆ. ಎಐ ತಂತ್ರಜ್ಞಾನ ಬಳಸುವಲ್ಲಿ ಉಪಾಯ ಅಪಾಯಗಳೆರಡು ಇವೆ ಎಂದು ತಿಳಿಸಿದ ಅವರು, ‘ಗೌಹರ್ ಜಾನ್’ ಕೃತಿಯನ್ನು ಎಐ ನಿಂದ ಭಾಷಾಂತರವಾಗಿದ್ದನ್ನು ಇದೇ ಸಂದರ್ಭದಲ್ಲಿ ಸ್ಮರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವಿ ಕುಲಪತಿ ಪ್ರೊ.ಎಂ ಮುನಿರಾಜು ಅವರು ಮಾತನಾಡಿ, ಒತ್ತಡದ ಜೀವನದಲ್ಲಿ ನಾಟಕಗಳು ತುಂಬಾ ಪ್ರಭಾವ ಬೀರುತ್ತವೆ. ಕಲಾವಿದರು ಹಲವಾರು ವರ್ಷಗಳ ಶ್ರಮದಿಂದ ಪ್ರತಿಭೆಗೆ ಪಾತ್ರರಾಗುತ್ತಾರೆ. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳನ್ನು ಹೊರತುಪಡಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಒತ್ತಡವನ್ನು ಹೋಗಲಾಡಿಸಬಹುದು ಎಂದು ಒತ್ತಿ ಹೇಳಿದರು.
ಈ ಸಂದರ್ಭದಲ್ಲಿ ಸಂಶೋಧನಾ ಲೇಖನಗಳ ಸಾರಾಂಶಗಳ ಪುಸ್ತಕವನ್ನು ಗಣ್ಯರು ಬಿಡುಗಡೆಗೊಳಿಸಿದರು. ವಿಶ್ವ ರಂಗಭೂಮಿ ಸಂದೇಶವನ್ನು ಡಾ.ಅಣ್ಣಾಜಿ ಕೃಷ್ಣಾರೆಡ್ಡಿ ಓದಿದರು.
ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಎನ್.ಎಂ ಸಾಲಿ, ಕಲಾ ನಿಕಾಯದ ಡೀನ್ ಪ್ರೊ.ರಾಬರ್ಟ್ ಜೋಸ್, ಕಿರುತೆರೆ ಮತ್ತು ಹಿರಿತರೆ ಕಲಾವಿದರಾದ ಲಕ್ಷಿö್ಮÃ ನಾಡಗೌಡ್ ವೇದಿಕೆಯಲ್ಲಿದ್ದರು.
ಒಂದು ದಿನದ ರಾಷ್ಟಿçÃಯ ವಿಚಾರ ಸಂಕಿರಣದಲ್ಲಿ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಸಂಶೋಧನಾರ್ಥಿಗಳು ಸೇರಿದಂತೆ 100ಕ್ಕೂ ಹೆಚ್ಚು ಪ್ರತಿನಿಧಿಗಳು ಹಾಜರಿದ್ದರು.
ವಿಚಾರ ಸಂಕಿರಣದ ಸಂಚಾಲಕ ಪ್ರೊ.ಎನ್.ಶಾಂತನಾಯ್ಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ಡಾ.ಕೆ.ಎಸ್ ಶಿವಪ್ರಕಾಶ ನಿರೂಪಿಸಿದರು. ಕನ್ನಡ ಅಧ್ಯಯನ ವಿಭಾಗದ ಸಂಯೋಜಕ ಡಾ.ಸಂತೋಷ ಜಿ.ಕೆ ವಂದಿಸಿದರು.
ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ, ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
------------
ಕುರೇಕುಪ್ಪ ಪುರಸಭೆ: ಶೇ.03 ರಷ್ಟು ಆಸ್ತಿ ತೆರಿಗೆ ಹೆಚ್ಚಳ
ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ):
ಪೌರಾಡಳಿತ ನಿರ್ದೇಶನಾಲಯದ ಆದೇಶ ಹಾಗೂ ಕುರೇಕುಪ್ಪ ಪುರಸಭೆಯ ಸಾಮಾನ್ಯ ಸಭೆಯ ತೀರ್ಮಾನದಂತೆ ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ 2026-27ನೇ ಸಾಲಿಗೆ ಅನ್ವಯವಾಗುವಂತೆ ಆಸ್ತಿ ತೆರಿಗೆಯನ್ನು ಶೇ.03 ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಕುರೇಕುಪ್ಪ ಪುರಸಭೆಯ ಮುಖ್ಯಾಧಿಕಾರಿಯವರು ತಿಳಿಸಿದ್ದಾರೆ.
2025-27ನೇ ಆರ್ಥಿಕ ಸಾಲಿನಲ್ಲಿ ಮಾರುಕಟ್ಟೆ ದರಸೂಚಿಗಳು ಪರಿಷ್ಕರಣೆಯಾಗದಿದ್ದ ಪಕ್ಷದಲ್ಲಿ, ಆಸ್ತಿ ತೆರಿಗೆಯನ್ನು ಕನಿಷ್ಠ ಶೇ.03 ರಿಂದ ಶೇ.05 ರಷ್ಟು ಹೆಚ್ಚಿಸಲು ಸೂಚಿಸಲಾಗಿತ್ತು.
ಕುರೇಕುಪ್ಪ ಪುರಸಭೆಯ ಮಾನ್ಯ ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಸಾರ್ವಜನಿಕರ ಹಿತದೃಷ್ಟಿಯಿಂದ ಕನಿಷ್ಠ ಪ್ರಮಾಣದ ಹೆಚ್ಚಳಕ್ಕೆ ಅಂದರೆ, ಶೇ.03 ರಷ್ಟು ತೆರಿಗೆಯನ್ನು ಹೆಚ್ಚುವರಿ ಮಾಡಲು ಸಭೆಯು ಅನುಮೋದನೆ ನೀಡಿದೆ.
ಹಾಗಾಗಿ 2026-27ನೇ ಸಾಲಿನಿಂದ ಜಾರಿಗೆ ಬರುವಂತೆ ಆಸ್ತಿ ತೆರಿಗೆ ದರದಲ್ಲಿ ಶೇ.03 ರಷ್ಟು ಪರಿಷ್ಕರಣೆ ಮಾಡಲಾಗಿದ್ದು, ಪುರಸಭೆ ವ್ಯಾಪ್ತಿಯ ಸಾರ್ವಜನಿಕರು ಹಾಗೂ ಆಸ್ತಿ ಮಾಲೀಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
-----------
ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ):
ಕಂಪ್ಲಿ ತಾಲ್ಲೂಕಿನ ಅರಳ್ಳಿಹಳ್ಳಿ ತಾಂಡದ ಬಸ್ ನಿಲ್ದಾಣದ ಹತ್ತಿರದ ಅನಾರೋಗ್ಯದಿಂದ ಬಳಲುತ್ತಿದ್ದ ಸುಮಾರು 55-60 ವರ್ಷದ ಅನಾಮಧೇಯ ವ್ಯಕ್ತಿಯನ್ನು ಕಂಪ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ಬಿಎಂಸಿಆರ್ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದು, ಚಿಕಿತ್ಸೆಯಿಂದ ಗುಣಮುಖನಾಗದೇ ಮಾ.11 ರಂದು ಮೃತಪಟ್ಟಿದ್ದು, ಅನಾಮದೇಯ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಯಾವುದೇ ಮಾಹಿತಿ ಇರುವುದಿಲ್ಲ, ಈ ಕುರಿತು ಕಂಪ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕರು ವಾರುಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ವ್ಯಕ್ತಿಯ ಚಹರೆ:
ಎತ್ತರ 4.3 ಅಡಿ, ತೆಳುವಾದ ಮೈಕಟ್ಟು ಮತ್ತು ಕಪ್ಪು ಮೈಬಣ್ಣ ಹೊಂದಿದ್ದು, ತಲೆಯಲ್ಲಿ ಕಪ್ಪು ಬಿಳಿ ಮಿಶ್ರಿತ ಕೂದಲು, ಬಿಳಿ ಮೀಸೆ ಮತ್ತು ಗಡ್ಡ ಬಿಟ್ಟಿರುತ್ತಾನೆ.
ಕಡು ನೀಲಿ ಬಣ್ಣದ ಅರ್ಧ ತೋಳಿನ ಟಿ-ಶರ್ಟ್ ಮತ್ತು ಕಡು ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಮೃತ ವಾರಸುದಾರನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕಂಪ್ಲಿ ಪೊಲೀಸ್ ಠಾಣೆ ಪಿ.ಐ ಮೊ.8277977722, 9480803038, ತೋರಣಗಲ್ ಡಿ.ಎಸ್.ಪಿ ಮೊ.9480803010, ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
-------------
ಮಾ.31 ರಂದು ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮ
ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಮಾ.31 ರಂದು ಬೆಳಿಗ್ಗೆ 11 ಗಂಟೆಗೆ ನಗರದ ತೇರು ಬೀದಿಯ ಶ್ರೀ ಪಾರ್ಶ್ವನಾಥ್ ಭವನದಲ್ಲಿ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್ಲೂಮ್ಸ್)ದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನ್ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷö್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ಜೈನ್ ಸಂಘದ ಅಧ್ಯಕ್ಷ ಸುರಜ್ ಮಲ್ ಜೈನ್ ಸೇರಿದಂತೆ ಇತರರು ಭಾಗವಹಿಸುವರು.
ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಪ್ರಾಧ್ಯಾಪಕ ಆಲಂಭಾಷ ಅವರು ಜಯಂತಿ ಕುರಿತು ವಿಶೇಷ ಉಪಪನ್ಯಾಸ ನೀಡುವರು. ಶ್ರೀ ಶಿರಡಿ ಸಾಯಿ ಸೇವಾ ಸತ್ಸಂಗ ಟ್ರಸ್ಟ್ ವತಿಯಿಂದ ಭಕ್ತಿ ಸಂಗೀತ ಕಾರ್ಯಕ್ರಮ ಇರಲಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್ ಮಂಜುನಾಥ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
------------
ಗುರುವಾರ, ಮಾರ್ಚ್ 26, 2026
ಮೂರು ಕರಡಿಗಳ ಯಶಸ್ವಿ ಸೆರೆ
ಬಳ್ಳಾರಿ,ಮಾ.26(ಕರ್ನಾಟಕ ವಾರ್ತೆ):
ಸಂಡೂರು ತಾಲ್ಲೂಕಿನ ತೋರಣಗಲ್ಲಿನ ಜಿಂದಾಲ್ ವಿದ್ಯಾನಗರ ಟೌನ್ಶಿಪ್ ವ್ಯಾಪ್ತಿಯಲ್ಲಿ ಕಳೆದ ಹತ್ತು ತಿಂಗಳಿನಿAದ ಬೀಡುಬಿಟ್ಟಿದ್ದ ತಾಯಿ ಕರಡಿ ಹಾಗೂ ಎರಡು ಮರಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಮೊದಲ ಬಾರಿಗೆ ಅತ್ಯಾಧುನಿಕ ‘ಆಟೋಮ್ಯಾಟಿಕ್ ಮೊಬೈಲ್ ಆಪ್ ಆಧಾರಿತ ಕೇಜ್ ಲಾಕಿಂಗ್ ಸಿಸ್ಟಮ್' ಬಳಸುವ ಮೂಲಕ ಮೂರೂ ಕರಡಿಗಳನ್ನು ಏಕಕಾಲಕ್ಕೆ ಬಂಧಿಸಿರುವುದು ವಿಶೇಷವಾಗಿದೆ.
ಕಳೆದ ಸುಮಾರು 10 ತಿಂಗಳಿನಿAದ ಈ ಕರಡಿಗಳ ಕುಟುಂಬ ಜಿಂದಾಲ್ ವಿದ್ಯಾನಗರ ಟೌನ್ಶಿಪ್ನಲ್ಲಿ ಕಾಣಿಸಿಕೊಳ್ಳುತ್ತಿತ್ತು. ಇದರಿಂದ ನಿವಾಸಿಗಳಲ್ಲಿ ಭೀತಿ ಉಂಟಾಗಿದ್ದರೂ, ಅರಣ್ಯ ಇಲಾಖೆಯ ಮುನ್ನೆಚ್ಚರಿಕೆಯಿಂದಾಗಿ ಯಾವುದೇ ಅಹಿತಕರ ಘಟನೆ ಸಂಭವಿಸಿರಲಿಲ್ಲ. ವನ್ಯಜೀವಿ ವಿಭಾಗದ ಪಿಸಿಸಿಎಫ್ ಅವರ ಆದೇಶದನ್ವಯ, ಬಳ್ಳಾರಿ ಡಿಸಿಎಫ್ ಕೆ.ಎನ್.ಬಸವರಾಜ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು.
ಎಸಿಎಫ್ ಶರಣ್ ಕುಮಾರ್, ಆರ್ಎಫ್ಒಗಳಾದ ಸಯ್ಯದ್ ದಾದಾ ಖಲಂದರ್ ಮತ್ತು ಮಂಜುನಾಥ್, ಡಿಆರ್ಎಫ್ಒಗಳಾದ ಮೋಹನ್ ಹಾಗೂ ಗುರುಸ್ವಾಮಿ, ಬಿಎಫ್ಒಗಳಾದ ವೆಂಕಟೇಶ್ ಮತ್ತು ಶ್ರೀಧರ್ ಅವರ ತಂಡ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು. ಇವರಿಗೆ ಪಶುವೈದ್ಯರಾದ ಡಾ. ಪ್ರಕೃತಿ ಹಾಗೂ ವೈಲ್ಡ್ ಲೈಫ್ ಎಸ್ಒಎಸ್ ಎನ್ಜಿಒ ಸಂಸ್ಥೆಯವರು ಸಾಥ್ ನೀಡಿದ್ದರು.
ಸೆರೆಹಿಡಿದ ತಾಯಿ ಕರಡಿಗೆ ಮುಂದಿನ ದಿನಗಳಲ್ಲಿ ಅದರ ಚಲನವಲನದ ಮೇಲೆ ನಿಗಾ ಇಡಲು ‘ರೇಡಿಯೋ ಕಾಲರ್' ಅಳವಡಿಸಲಾಗಿದೆ. ನಂತರ ಮೇಲಾಧಿಕಾರಿಗಳ ಸೂಚನೆಯಂತೆ, ಸುರಕ್ಷಿತ ಅರಣ್ಯ ಪ್ರದೇಶದಲ್ಲಿ ತಾಯಿ ಹಾಗೂ ಮರಿಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ಬಳ್ಳಾರಿ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎನ್.ಬಸವರಾಜ್ ಅವರು ತಿಳಿಸಿದ್ದಾರೆ.
------------
ಮಾ.27 ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ
ಬಳ್ಳಾರಿ,ಮಾ.26(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಉಪ-ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಸ್ಯೆಗಳನ್ನು ಆಲಿಸಲು ಮತ್ತು ಇತ್ಯರ್ಥಗೊಳಿಸಲು ಮಾ.27 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬಳ್ಳಾರಿ ಜೆಸ್ಕಾಂ ಗ್ರಾಮೀಣ ಉಪ-ವಿಭಾಗ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ.
ಗ್ರಾಹಕರು ತಮ್ಮ ವಿದ್ಯುತ್ ಸಂಪರ್ಕ, ಬಿಲ್ಲಿಂಗ್ ಸಮಸ್ಯೆಗಳು, ವೋಲ್ಟೇಜ್ ಏರುಪೇರು ಸೇರಿದಂತೆ ಇತರೆ ಯಾವುದೇ ದೂರು ಅಥವಾ ಸಲಹೆಗಳಿದ್ದಲ್ಲಿ ಸಭೆಯಲ್ಲಿ ಭಾಗವಹಿಸಿ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಬಳ್ಳಾರಿ ಜೆಸ್ಕಾಂ ಗ್ರಾಮೀಣ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮೋಹನಬಾಬು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
-----------
ಮಾ.27 ರಂದು ಜೆಸ್ಕಾಂ ಗ್ರಾಹಕರ ಕುಂದುಕೊರತೆ ಸಭೆ
ಬಳ್ಳಾರಿ,ಮಾ.26(ಕರ್ನಾಟಕ ವಾರ್ತೆ):
ಬಳ್ಳಾರಿ ನಗರದ ಜೆಸ್ಕಾಂ ಉಪ-ವಿಭಾಗ 1 ಮತ್ತು 2ರ ವಿದ್ಯುತ್ ಗ್ರಾಹಕರ ಕುಂದುಕೊರತೆಗಳ ಸಭೆಯನ್ನು ಮಾ.27 ರಂದು ಮಧ್ಯಾಹ್ನ 03.30 ಗಂಟೆಗೆ ನಗರದ ಹೆಚ್.ಆರ್. ಗವಿಯಪ್ಪ ವೃತ್ತದ ಬಳಿಯಿರುವ ಜೆಸ್ಕಾಂ ವಲಯ ಕಚೇರಿಯ ಮೊದಲ ಮಹಡಿಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಜೆಸ್ಕಾಂ ನಗರ ವಿಭಾಗದ (ಕಾರ್ಯ ಮತ್ತು ಪಾಲನೆ) ಕಾರ್ಯನಿರ್ವಾಹಕ ಅಭಿಯಂತರರು (ಇಇ) ಅಧ್ಯಕ್ಷತೆ ವಹಿಸುವರು.
ಬಳ್ಳಾರಿ ನಗರದ ಜೆಸ್ಕಾಂ ವ್ಯಾಪ್ತಿಯ ವಿದ್ಯುತ್ ಗ್ರಾಹಕರು ಈ ಸಭೆಯಲ್ಲಿ ಭಾಗವಹಿಸಿ ವಿದ್ಯುತ್ ಬಿಲ್, ಸಂಪರ್ಕ ಹಾಗೂ ಇತರೆ ತಾಂತ್ರಿಕ ಸಮಸ್ಯೆಗಳಿಗೆ ಸಂಬAಧಿಸಿದ ತಮ್ಮ ಕುಂದುಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಬಳ್ಳಾರಿ: ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಮಾ.26(ಕರ್ನಾಟಕ ವಾರ್ತೆ):
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ-ಯುವತಿಯರು ಸ್ವಯಂ ಉದ್ಯೋಗದ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ವಿವಿಧ ವೃತ್ತಿಪರ ತರಬೇತಿಗಳಿಗೆ ಅರ್ಜಿ ಆಹ್ವಾನಿಸಿದೆ.
ಗ್ರಾಮೀಣ ಪ್ರದೇಶದ 19 ರಿಂದ 45 ವರ್ಷ ವಯೋಮಿತಿಯ ಆಸಕ್ತ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ತರಬೇತಿಗಳನ್ನು ಆಯೋಜಿಸಲಾಗಿದೆ.
*ತರಬೇತಿಗಳ ವಿವರ:*
ಏ.06 ರಿಂದ ಮೊಬೈಲ್ ಸರ್ವಿಸಿಂಗ್ ತರಬೇತಿ (30 ದಿನ).
ಏ.09 ರಿಂದ ಕೃತಕ ಆಭರಣ ತಯಾರಿಕೆ ತರಬೇತಿ (14 ದಿನ).
ಏ.15 ರಿಂದ ಕೃಷಿ ಉದ್ಯಮಿ ತರಬೇತಿ (13 ದಿನ).
ಏ.14 ರಿಂದ ಅಗರಬತ್ತಿ ತಯಾರಿಕೆ ತರಬೇತಿ (12 ದಿನ).
ಮೇ 04 ರಿಂದ ಮೋಟಾರ್ ರಿವೈಂಡಿAಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿ (30 ದಿನ).
ಮೇ 18 ರಿಂದ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ (30 ದಿನ).
ಮೇ 25 ರಿಂದ ಫಾಸ್ಟ್ ಫುಡ್ ತಯಾರಿಕೆ ತರಬೇತಿ (14 ದಿನ).
ಜೂ.04 ರಿಂದ ಬ್ಯೂಟಿ ಪಾರ್ಲರ್ ತರಬೇತಿ (35 ದಿನ).
ತರಬೇತಿಗೆ ಸೇರಬಯಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ತೇರ್ಗಡೆಯಾಗಿರಬೇಕು. ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್ ಪ್ರತಿ, ಉದ್ಯೋಗ ಖಾತ್ರಿ ಕಾರ್ಡ್, 3 ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಡಿ.ಐ.ಸಿ ಕಾಂಪೌAಡ್, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹತ್ತಿರ, ಹೊಸಪೇಟೆ ರಸ್ತೆ, ಬಳ್ಳಾರಿ. ದೂ.08392-299117, ಮೊ.9449860659, 9008464120, 9980123603 ಗೆ ಸಂಪರ್ಕಿಸಬಹುದು.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಉಚಿತ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಮಿಲಿಟರಿ ಬಾಲಕಿಯರ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ,ಮಾ.26(ಕರ್ನಾಟಕ ವಾರ್ತೆ):
ಧಾರವಾಡ ನಗರದ ಸಪ್ತಾಪುರ ರಸ್ತೆಯಲ್ಲಿರುವ ಮಿಲಿಟರಿ ಬಾಲಕಿಯರ ವಸತಿ ನಿಲಯದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಧಾರವಾಡ, ಗದಗ, ಹಾವೇರಿ ಮತ್ತು ಬಳ್ಳಾರಿ ಜಿಲ್ಲೆಗಳ ಗ್ರಾಮೀಣ ಪ್ರದೇಶದ ಹಾಗೂ ರಾಜ್ಯದ ಇತರ ಜಿಲ್ಲೆಗಳ ಯುದ್ಧದಲ್ಲಿ ಮಡಿದ ಯೋಧರ ಮತ್ತು ಮಾಜಿ ಸೈನಿಕರ ಹೆಣ್ಣು ಮಕ್ಕಳಿಗೆ ಆದ್ಯತೆ ನೀಡಲಾಗುತ್ತದೆ.
5ನೇ ತರಗತಿಯಿಂದ ಪಿಯುಸಿ - 2ನೇ ವರ್ಷದವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು. ವಸತಿ ನಿಲಯದಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿನಿಯರು ಕಡ್ಡಾಯವಾಗಿ ಧಾರವಾಡ ನಗರದ ಶಾಲಾ-ಕಾಲೇಜುಗಳಲ್ಲಿಯೇ ಪ್ರವೇಶ ಪಡೆದಿರಬೇಕು.
ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು. ಅರ್ಜಿ ಸಲ್ಲಿಸಲು ಏ.30 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಉದಯ ಹಾಸ್ಟೆಲ್ ಸರ್ಕಲ್, ಸೈನಿಕ ವಿಶ್ರಾಂತಿ ಗೃಹ ಆವರಣ, ಧಾರವಾಡ (ದೂ.0836-2440176) ಇಲ್ಲಿಗೆ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ: ಏ.12 ರಂದು ಪ್ರವೇಶ ಪರೀಕ್ಷೆ
ಬಳ್ಳಾರಿ,ಮಾ.26(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾಧ್ಯಮ) ಶಾಲೆಗಳ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ (ಸಿ.ಬಿ.ಎಸ್.ಇ) ಶಾಲೆಯ ದಾಖಲಾತಿಗಾಗಿ 2026-27ನೇ ಶೈಕ್ಷಣಿಕ ವರ್ಷಕ್ಕೆ 6ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಏ.12 ರಂದು ಪ್ರವೇಶ ಪರೀಕ್ಷೆ ನಡೆಸಲು ನಿಗದಿಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನ ಅಜಾದ ಭವನದ ಜಿಲ್ಲಾ ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯ ಅಥವಾ ದೂ.08392-200125/224, ಸಹಾಯವಾಣಿ ಕೇಂದ್ರ (24*7) – 8277799990 ಗೆ ಸಂಪರ್ಕಿಸಬಹುದು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಬುಧವಾರ, ಮಾರ್ಚ್ 25, 2026
ಬಳ್ಳಾರಿ: ಹಜ್ ಯಾತ್ರಿಕರಿಗೆ ಆರೋಗ್ಯ ಜಾಗೃತಿ ಹಾಗೂ ಲಸಿಕಾ ಶಿಬಿರ
ಬಳ್ಳಾರಿ,ಮಾ.25(ಕರ್ನಾಟಕ ವಾರ್ತೆ):
ನಗರದ ಮಹಮ್ಮದಿಯ ಕಾಲೇಜಿನಲ್ಲಿ ಹಜ್ ಯಾತ್ರೆಗೆ ತೆರಳಲಿರುವ ಮುಸ್ಲಿಂ ಸಮುದಾಯದ ಯಾತ್ರಿಕರಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಬುಧವಾರ ಆರೋಗ್ಯ ಜಾಗೃತಿ ಹಾಗೂ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ಭೇಟಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಮಾತನಾಡಿ, ವಿದೇಶ ಪ್ರಯಾಣದ ಸಂದರ್ಭದಲ್ಲಿ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.
ಇದೇ ವೇಳೆ ಹೆಣ್ಣು ಮಕ್ಕಳಲ್ಲಿ ಕಾಣಿಸಿಕೊಳ್ಳುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಹೆಚ್ಪಿವಿ (ಹ್ಯೂಮನ್ ಪ್ಯಾಪಿಲೋಮಾ ವೈರಸ್) ಲಸಿಕೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿ ಹಾಗೂ ವದಂತಿಗಳಿಗೆ ಸಾರ್ವಜನಿಕರು ಕಿವಿಕೊಡಬಾರದು. 14 ವರ್ಷದ ಹೆಣ್ಣು ಮಕ್ಕಳಿಗೆ ಈ ಲಸಿಕೆ ಹಾಕಿಸುವುದು ಅತ್ಯಂತ ಸುರಕ್ಷಿತ. ಗರ್ಭಕಂಠದ ಕ್ಯಾನ್ಸರ್ ಮುಕ್ತ ನಾಡಿಗಾಗಿ ಪ್ರತಿಯೊಬ್ಬ ಪೋಷಕರು ತಮ್ಮ ಹೆಣ್ಣು ಮಕ್ಕಳಿಗೆ ಲಸಿಕೆ ಕೊಡಿಸಬೇಕು ಎಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಯಾತ್ರಿಕರಿಗೆ ಖುದ್ದಾಗಿ ಮೆನಿಂಗೊಕೊಕಲ್ ಮೆನಿಂಜೈಟಿಸ್ ಲಸಿಕೆ ಹಾಗೂ 64 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಬಿ-ಒಪಿವಿ ಮತ್ತು ಇನ್ಫ್ಲೂö್ಯಯೆಂಜಾ ಲಸಿಕೆ ಹಾಗೂ ಇತರೆ ಅಗತ್ಯ ಲಸಿಕೆಗಳನ್ನು ಹಾಕಿಸಿದರು.
ಬಳ್ಳಾರಿಯ ದಾರುಲ್ ಸರ್ಕಾರಿ ಖಾಜಿಗಳಾದ ಗುಲಾಮ್ ಮೊಹಮ್ಮದ್ ಸಿದ್ದಿಖಿ ಅವರು ಮಾತನಾಡಿ, ಲಸಿಕೆಯ ಬಗ್ಗೆ ಸಮುದಾಯದಲ್ಲಿ ಯಾರು ಭಯ ಪಡುವ ಅಗತ್ಯವಿಲ್ಲ. ಹೆಣ್ಣು ಮಕ್ಕಳ ಆರೋಗ್ಯ ದೃಷ್ಟಿಯಿಂದ ಎಲ್ಲರೂ ಸಹಕರಿಸಬೇಕು ಎಂದು ಜಾಗೃತಿ ಮೂಡಿಸಿದರು.
ಡಿ.ಡಬ್ಲ್ಯೂ.ಎ.ಸಿ ಮಾಜಿ ಅಧ್ಯಕ್ಷ ಹುಮಾಯುನ್ ಖಾನ್ ಅವರು ಮಾತನಾಡಿ, ಈ ಲಸಿಕಾ ಕಾರ್ಯಕ್ರಮವು ಒಟ್ಟು 90 ದಿನಗಳ ಕಾಲ ನಡೆಯಲಿದೆ. 14 ವರ್ಷದ ಹೆಣ್ಣು ಮಕ್ಕಳು ಲಸಿಕೆ ಪಡೆಯಲು ಅರ್ಹರಿದ್ದು, ಇದರಿಂದ ಗರ್ಭಕಂಠದ ಕ್ಯಾನ್ಸರ್ ಅನ್ನು ಶೇ.99 ರಷ್ಟು ತಡೆಯಬಹುದಾಗಿದೆ. ಲಸಿಕೆ ಪಡೆಯಲು ಬರುವವರು ಕಡ್ಡಾಯವಾಗಿ ಪೋಷಕರನ್ನು ಹಾಗೂ ಜನ್ಮ ದಿನಾಂಕವಿರುವ ಗುರುತಿನ ಚೀಟಿಯನ್ನು ತರಬೇಕು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಹನುಮಂತಪ್ಪ, ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶಾಂತಮ್ಮ, ಹಿರಿಯ ಪ್ರಾಥಮಿಕ ಸುರಕ್ಷಾಧಿಕಾರಿ ಗಂಗಮ್ಮ ಹಾಗೂ ಡಿ.ಡಬ್ಲ್ಯೂ.ಎ.ಸಿ ಮಾಜಿ ಅಧ್ಯಕ್ಷರುಗಳಾದ ಹುಸೇನ್ ಪೀರ್, ಮೊಹಮ್ಮದ್ ಗೌಸ್, ಅಯಾಜ್ ಅಹಮ್ಮದ್, ಅಲ್ಲಾ ಭಕ್ಷಿ ಮತ್ತು ತೌಹಿದ್ ಸಾಬ್, ಸಾದತ್ತ್ ಸಾಬ್ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
-----------
ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ
ಬಳ್ಳಾರಿ,ಮಾ.25(ಕರ್ನಾಟಕ ವಾರ್ತೆ):
ನಗರದ ಕೌಲ್ ಬಜಾರ್ ನ ತಿಲಕ್ ನಗರದ ಸಾಯಿಬಾಬಾ ದೇವಸ್ಥಾನದ ಹತ್ತಿರ ನಿವಾಸಿ ಯುವರಾಜ್ ಎನ್ನುವ 26 ವರ್ಷದ ವ್ಯಕ್ತಿ ಮಾ.23 ರಂದು ಮನೆಯಿಂದ ಹೋದವನು ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಕೌಲ್ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
ಚಹರೆ:
ಎತ್ತರ ಅಂದಾಜು 5 ಅಡಿ, ದುಂಡು ಮುಖ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈ ಬಣ್ಣ ಹೊಂದಿದ್ದು, ಕುರುಚಲು ಗಡ್ಡ ಮತ್ತು ಮೀಸೆ ಹೊಂದಿರುತ್ತಾನೆ.
ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ತುಂಬು ತೋಳಿನ ಅಂಗಿ ಮತ್ತು ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್ಬಜಾರ್ ಪೊಲೀಸ್ ಠಾಣೆಯ ದೂ.08392240731, 08392244145, ಪಿ.ಐ ಮೊ.9480803047, ಪಿಎಸ್ಐ 94808203084, 9480803085 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
-----------
ಮಾ.27 ರಂದು ಮಹಿಳಾ ನೌಕರರ ಪ್ರಾತಿನಿಧ್ಯ ಕುರಿತು ‘ವಿಚಾರ ಸಂಕಿರಣ’
ಬಳ್ಳಾರಿ,ಮಾ.25(ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬಳ್ಳಾರಿ ಜಿಲ್ಲಾ ಶಾಖೆ ವತಿಯಿಂದ ಅಂತರಾಷ್ಟಿçÃಯ ಮಹಿಳಾ ದಿನಾಚರಣೆ ಅಂಗವಾಗಿ ಸರ್ಕಾರಿ ಸೇವೆಯಲ್ಲಿ ಮಹಿಳಾ ನೌಕರರ ಪ್ರಾತಿನಿಧ್ಯ ಕುರಿತು ಮಾ.27 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಆಸ್ಪತ್ರೆ ಆವರಣದ ಡಿ.ಎನ್.ಬಿ. ಸಭಾಂಗಣದಲ್ಲಿ “ವಿಚಾರ ಸಂಕೀರಣ” ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆಂಗಳೂರು ಅಪರ ಸಾರಿಗೆ ಆಯುಕ್ತ ಮಲ್ಲಿಕಾರ್ಜುನ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಘನ ಉಪಸ್ಥಿತಿ ಇರುವರು.
ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಶ್ರೀದೇವಿ ಆಲೂರು ಅವರು ಕಾರ್ಯಕ್ರಮದ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಸೇರಿದಂತೆ ಜಿಲ್ಲಾ ಮಟ್ಟದ ಮಹಿಳಾ ಅಧಿಕಾರಿಗಳು ಭಾಗವಹಿಸುವರು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರು ಹಾಗೂ ಬಳ್ಳಾರಿ ಜಿಲ್ಲಾ ಶಾಖೆ ಜಿಲ್ಲಾಧ್ಯಕ್ಷ ಸದಾನಂದ ನೆಲ್ಕುದ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಪ್ರಾಯ | ಗ್ರಾಹಕರ ಜಾಗೃತಿಯೇ ಪ್ರಗತಿಯ ಹಾದಿ
ಬಳ್ಳಾರಿ,ಮಾ.25(ಕರ್ನಾಟಕ ವಾರ್ತೆ):
ಗ್ರಾಹಕರು ತಮಗಿರುವ ಹಕ್ಕುಗಳ ಬಗ್ಗೆ ಜಾಗೃತಿ ಹೊಂದಿದಾಗ ಮಾತ್ರ ಸದೃಢ ದೇಶದ ಪ್ರಗತಿಯ ಹಾದಿ ಕಾಣಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆಹಾರ ಸುರಕ್ಷತಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ‘ಸುರಕ್ಷಿತ ಉತ್ಪನ್ನಗಳು ಆತ್ಮ ವಿಶ್ವಾಸದ ಗ್ರಾಹಕರು’ ಎಂಬ ಘೋಷವಾಕ್ಯದಡಿ ನಗರದ ಕೋಟೆ ಮುಖ್ಯ ರಸ್ತೆಯ ಮೇದಾ ಪದವಿ ಪೂರ್ವ ವಿದ್ಯಾಲಯದ ಮೇದಾ ಆಡಿಟೋರಿಯಮ್ ಹಾಲ್ ನಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಿಂದೆ ‘ಖರೀದಿದಾರರೇ ಎಚ್ಚರ' ಎಂಬ ನಿಯಮವಿತ್ತು. ಆದರೆ ಇಂದು ಕಾಲ ಬದಲಾಗಿದ್ದು, ‘ಮಾರಾಟಗಾರರೇ ಎಚ್ಚರ' ಎಂಬ ಸಿದ್ಧಾಂತ ಜಾರಿಯಲ್ಲಿದೆ. ಗ್ರಾಹಕರಿಗೆ ತಾವು ಪಡೆಯುವ ವಸ್ತು ಅಥವಾ ಸೇವೆಯಲ್ಲಿ ಯಾವುದೇ ಲೋಪ ಕಂಡುಬAದಲ್ಲಿ ಅದನ್ನು ಪ್ರಶ್ನಿಸುವ ಮತ್ತು ಪರಿಹಾರ ಪಡೆಯುವ ಸಂಪೂರ್ಣ ಹಕ್ಕಿದೆ ಎಂದು ತಿಳಿಸಿದರು.
ಇಂದಿನ ದಿನಗಳಲ್ಲಿ ಆನ್ಲೈನ್ ಶಾಪಿಂಗ್ ಹೆಚ್ಚಾಗುತ್ತಿದ್ದು, ಇ-ಕಾಮರ್ಸ್ ಸಂಸ್ಥೆಗಳ ಮೂಲಕ ನಡೆಯುವ ವಂಚನೆಗಳ ಬಗ್ಗೆಯೂ ಪ್ರತಿಯೊಬ್ಬರೂ ತಿಳುವಳಿಕೆ ಹೊಂದಬೇಕು. ಗ್ರಾಹಕರು ತಮ್ಮ ದೈನಂದಿನ ಜೀವನದಲ್ಲಿ ಗ್ರಾಹಕ ಹಕ್ಕುಗಳನ್ನು ಚಲಾಯಿಸಬೇಕು. ಯಾವುದೇ ವಸ್ತುವಿನ ಗುಣಮಟ್ಟದಲ್ಲಿ ಕೊರತೆ ಇದ್ದರೆ ಅಥವಾ ಸೇವೆಯಲ್ಲಿ ವ್ಯತ್ಯಯವಾದರೆ ಗ್ರಾಹಕರು ನೇರವಾಗಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ನೀಡಬಹುದು ಎಂದು ತಿಳಿಸಿದರು.
ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ತಿಪ್ಪೇಸ್ವಾಮಿ.ಎನ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಯೊಬ್ಬ ಹಣ ಪಾವತಿಸಿ ಸೇವೆ ಅಥವಾ ವಸ್ತುವನ್ನು ಪಡೆಯುವ ವ್ಯಕ್ತಿಯೂ ಗ್ರಾಹಕನೇ. ನಾವು ಜಾಗೃತರಾದಾಗ ಮಾತ್ರ ಮೋಸವನ್ನು ತಡೆಯಲು ಸಾಧ್ಯ. ಗ್ರಾಹಕರಿಗೆ ಆಗುವ ಅನ್ಯಾಯ, ಮೋಸ ಅಥವಾ ಗುಣಮಟ್ಟದ ಸೇವೆಯಲ್ಲಿನ ಲೋಪಗಳ ವಿರುದ್ಧ ಧ್ವನಿ ಎತ್ತಲು ಪ್ರತಿ ಜಿಲ್ಲೆಯಲ್ಲೂ ಗ್ರಾಹಕ ವೇದಿಕೆ ಅಥವಾ ಆಯೋಗಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.
1962 ರಲ್ಲಿ ಅಮೆರಿಕದ ಅಧ್ಯಕ್ಷರಾಗಿದ್ದ ಜಾನ್ ಎಫ್ ಕೆನಡಿ ಅವರು ಮೊದಲ ಬಾರಿಗೆ ಗ್ರಾಹಕರ ಹಕ್ಕುಗಳ ಬಗ್ಗೆ ಪ್ರಸ್ತಾಪಿಸಿದ್ದರು. ಭಾರತದಲ್ಲಿ ಗ್ರಾಹಕರ ರಕ್ಷಣಾ ಕಾಯ್ದೆಯನ್ನು 1986 ರಲ್ಲಿ ಜಾರಿಗೆ ತರಲಾಯಿತು. ಹಾಗಾಗಿ ಪ್ರತಿವರ್ಷ ಮಾರ್ಚ್ 15 ರಂದು ವಿಶ್ವ ಗ್ರಾಹಕರ ಹಕ್ಕುಗಳ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ತಿಳಿಸಿದರು.
ರಕ್ಷಣೆಯ ಹಕ್ಕು, ಮಾಹಿತಿ ಪಡೆಯುವ ಹಕ್ಕು, ಆಯ್ಕೆಯ ಹಕ್ಕು, ಆಲಿಸುವ ಹಕ್ಕು, ಪರಿಹಾರ ಪಡೆಯುವ ಹಕ್ಕು, ಗ್ರಾಹಕ ಶಿಕ್ಷಣದ ಹಕ್ಕು ಸೇರಿದಂತೆ ಈ ಆರು ಹಕ್ಕುಗಳು ಗ್ರಾಹಕರಿಗೆ ಸಂವಿಧಾನಾತ್ಮಕವಾಗಿ ಒದಗಿಸಲಾಗಿದೆ ಎಂದು ತಿಳಿಸಿದರು.
ಹಿರಿಯ ವಕೀಲ ಅಂಕಲಯ್ಯ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಗ್ರಾಹಕರು ತಾವು ಬಳಸುವ ಉತ್ಪನ್ನಗಳ ಗುಣಮಟ್ಟ ಮತ್ತು ಸುರಕ್ಷತೆಯ ಬಗ್ಗೆ ಹೆಚ್ಚಿನ ನಿಗಾ ವಹಿಸುವುದು ಅತ್ಯಗತ್ಯವಾಗಿದೆ ಎಂದರು.
ಇನ್ನೋರ್ವ ಹಿರಿಯ ವಕೀಲ ಎನ್.ಪ್ರಕಾಶ್ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಮಾರುಕಟ್ಟೆಯಲ್ಲಿ ಗ್ರಾಹಕನೇ ಅಧಿಪತಿ. ಯಾವುದೇ ವಸ್ತುವನ್ನು ಖರೀದಿ ಮಾಡುವಾಗ ಅದರ ಗುಣಮಟ್ಟ ಮತ್ತು ಸುರಕ್ಷತೆಯ ಬಗ್ಗೆ ಪ್ರಶ್ನಿಸುವ ಹಕ್ಕು ಗ್ರಾಹಕನಿಗಿದೆ. ವಸ್ತುಗಳನ್ನು ಖರೀದಿಸುವಾಗ ಉತ್ಪಾದನಾ ದಿನಾಂಕ, ಮುಕ್ತಾಯದ ದಿನಾಂಕ, ವಾರಂಟಿ ಮತ್ತು ಗ್ಯಾರಂಟಿ ವಿವರಗಳನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ಗ್ರಾಹಕರಿಗೆ ಮೋಸವಾದಲ್ಲಿ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ನೀಡಬಹುದು. ಇಲ್ಲಿ ಆರು ತಿಂಗಳ ಒಳಗಾಗಿ ಪ್ರಕರಣಗಳ ವಿಲೇವಾರಿ ಮಾಡಲಾಗುತ್ತದೆ ಎಂದು ವಿವರವಾಗಿ ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ದೇವರಾಜ್ ಕೆ.ಆರ್., ಶ್ರೀ ಮೇದಾ ಪದವಿ ಪೂರ್ವ ಶಿಕ್ಷಣ ಸಂಸ್ಥೆಯ ವಾಣಿಜ್ಯ ಶಾಸ್ತç ವಿಭಾಗದ ಮುಖ್ಯಸ್ಥ ಖುಷ್ವಂತ್, ಕಾನೂನು ಮಾಪನ ಶಾಸ್ತç ಇಲಾಖೆಯ ಸಹಾಯಕ ನಿಯಂತ್ರಕ ಮನೋಜ್ ಕುಮಾರ್ ಸೇರಿದಂತೆ ಅಧಿಕಾರಿ- ಸಿಬ್ಬಂದಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳು, ನ್ಯಾಯಬೆಲೆ ಅಂಗಡಿ ವಿತರಕರು, ಗ್ಯಾಸ್ ವಿತರಕ ಏಜೆನ್ಸಿದಾರರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
---------------
ಪ್ರಯೋಗಾತ್ಮಕ ಸಂಶೋಧನೆಗಳಿಗೆ ತಂತ್ರಜ್ಞಾನ ಬಳಸಿರಿ: ಪ್ರೊ.ಎಂ.ಸಿ ಎರಿಸ್ವಾಮಿ
ಬಳ್ಳಾರಿ,ಮಾ.25(ಕರ್ನಾಟಕ ವಾರ್ತೆ):
ಎಐ ಮತ್ತು ಮಷಿನ್ ಲರ್ನಿಂಗ್ ನಂತಹ ತಂತ್ರಜ್ಞಾನಗಳನ್ನು ಎಲ್ಲದಕ್ಕೂ ಬಳಕೆ ಮಾಡದೆ ಉತ್ತಮ ಸಾಮಾಜಿಕ ಸಂಶೋಧನೆಗಳು ಹೊರತರಲು ಪ್ರಯೋಗಾತ್ಮಕವಾಗಿ ಬಳಸಬೇಕು ಎಂದು ಬೆಂಗಳೂರು ವಿಶ್ವವಿದ್ಯಾಲಯ ಶಿಕ್ಷಣ ನಿಕಾಯದ ಡೀನರು ಮತ್ತು ಪ್ರ್ರಾಧ್ಯಾಪಕರಾದ ಪ್ರೊ.ಎಂ.ಸಿ ಎರಿಸ್ವಾಮಿ ಅವರು ಅಭಿಪ್ರಾಯಪಟ್ಟರು.
ಇಲ್ಲಿನ ವಿವಿಯ ಡಾ.ಬಿ.ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ಬುಧವಾರ ಶಿಕ್ಷಣ ಅಧ್ಯಯನ ವಿಭಾಗವು ಆಯೋಜಿಸಿದ್ದ ಒಂದು ದಿನದ “ಮುಂದಿನ ಪೀಳಿಗೆಯ ಉದಯೋನ್ಮುಖ ಸಂಶೋಧನಾ ಕೌಶಲ್ಯಗಳ ತಂತ್ರಜ್ಞಾನದೊAದಿಗೆ ಡೇಟಾ ವಿಶ್ಲೇಷಣೆ” ಎಂಬ ವಿಷಯ ಕುರಿತು ರಾಷ್ಟಿçÃಯ ಕಾರ್ಯಾಗಾರದ ಉದ್ಘಾಟನಾ ಭಾಷಣಕಾರರಾಗಿ ಭಾಗವಹಿಸಿ ಅವರು ಮಾತನಾಡಿದರು.
ಇಂದು ತಂತ್ರಜ್ಞಾನದ ಅತಿಯಾದ ಬಳಕೆಯಿಂದಾಗಿ ಅವುಗಳು ನಮ್ಮನ್ನು ಆವರಿಸಿಕೊಂಡಿವೆ. ಇದರಿಂದಾಗಿ ನಮ್ಮಲ್ಲಿರುವಂತ ವೈಚಾರಿಕ ಸ್ವಂತಿಕೆಯನ್ನು ಕಳೆದುಕೊಳ್ಳುತ್ತಿದ್ದೇವೆ ಎಂಬ ವಿಷಾದವಿದೆ. ಆದರೆ ಎಐ ನಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ಪರಿಣಾಮಕಾರಿ ಬೋಧನೆ ಸಾಧ್ಯವಾಗಿದೆ ಎಂದು ಹೇಳಿದರು.
ತಾಂತ್ರಿಕ ಕೌಶಲ್ಯಗಳಿಂದ ದತ್ತಾಂಶಗಳನ್ನು ಹೆÀಚ್ಚು ಕಲೆಹಾಕುವ ಮೂಲಕ ಸಂಶೋಧನೆಯಲ್ಲಿ ಒಳ್ಳೆಯ ಫಲಿತಾಂಶವನ್ನು ಪಡೆಯಬಹುದು. ಸಮೀಕ್ಷೆ, ಸಂಶೋಧನೆಯ ಅಂತರಗಳ ವಿಸ್ತರಣೆಯ ಮೂಲಕ ಸಾಮಾಜಿಕ ಸಂಬAಧಗಳನ್ನು ಸುಧಾರಿಸಲು ತಂತ್ರಜ್ಞಾನ ಆಧಾರಿತ ಅಧ್ಯಯನಗಳಿಂದ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು ಅವರು ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನ ಎಷ್ಟೇ ಮುಂದುವರೆದಿದ್ದರೂ ಶಿಕ್ಷಕನಿಗೆ ಸಮನಾಗಿ ಯಾವುದು ಇಲ್ಲ. ತಂತ್ರಜ್ಞಾನಗಳ ಬಳಕೆಯಿಂದಾಗಿ ತರಗತಿಗಳು ಇಂದು ಆಧುನಿಕ ಸ್ವರೂಪ ಪಡೆದುಕೊಂಡಿವೆ. ತಂತ್ರಜ್ಞಾನದ ಅತಿಯಾದ ಬಳಕೆಯಿಂದಾಗಿ ಸಂಬAಧಗಳಲ್ಲಿ ಸಾಮರಸ್ಯಗಳ ಕೊರತೆ ಉಂಟಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ರಾಷ್ಟಿçÃಯ ಕಾರ್ಯಾಗಾರದ ಸಂಚಾಲಕರಾದ ಡಾ.ಸುಷ್ಮಾ ಎನ್ ಜೋಗನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಯ ಕುಲಸಚಿವರಾದ ಪ್ರೊ.ಎನ್.ಎಂ ಸಾಲಿ, ಕೇಂದ್ರೀಯ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕರಾದ ಡಾ.ಕೆ.ತಿಯಾಗು, ಆಂಧ್ರಪ್ರದೇಶದ ಪ್ರಾದೇಶಿಕ ಎನ್ಸಿಇಆರ್ಟಿ ಕೇಂದ್ರ ನೆಲ್ಲೂರಿನ ಸಹ ಪ್ರಾಧ್ಯಾಪಕರಾದ ಡಾ.ಪ್ರಕಾಶ ಬಡಿಗೇರ್, ಕಾರ್ಯಾಗಾರದ ಸಹ ಸಂಚಾಲಕರಾದ ಡಾ.ಗೋಪಾಲ್ ಎನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಒಂದು ದಿನದ ರಾಷ್ಟಿçÃಯ ಕಾರ್ಯಾಗಾರದಲ್ಲಿ ವಿವಿಧ ಬಿ.ಇಡಿ ಕಾಲೇಜುಗಳ ಅಧ್ಯಾಪಕರುಗಳು, ಸಂಶೋಧನಾರ್ಥಿಗಳು ಸೇರಿದಂತೆ 200ಕ್ಕೂ ಹೆಚ್ಚು ಪ್ರತಿನಿಧಿಗಳು ಹಾಜರಿದ್ದರು. ಪಾಂಡುರAಗ ನಿರೂಪಿಸಿದರು. ವಿವಿಯ ಶಿಕ್ಷಣ ನಿಕಾಯದ ಡೀನರು ಮತ್ತು ವಿಭಾಗದ ಮುಖ್ಯಸ್ಥರಾದ ಡಾ ಸಾಹೇಬ್ ಅಲಿ ಹೆಚ್ ನಿರಗುಡಿ ಅತಿಥಿಗಳನ್ನು ಸ್ವಾಗತಿಸಿದರು. ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ ಪ್ರಶಾಂತ ಕುಮಾರ ಟಿ ಎಂ ವಂದಿಸಿದರು.
ವಿವಿಯ ಎಲ್ಲ ನಿಕಾಯದ ಡೀನರು, ಎಲ್ಲ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಬೋಧಕ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.
------------
ಬಳ್ಳಾರಿ: 40 ಗಂಟೆಗಳ ಮಧ್ಯಸ್ಥಿಕೆ ತರಬೇತಿ ಶಿಬಿರಕ್ಕೆ ನ್ಯಾ.ಕೆ.ಜಿ ಶಾಂತಿ ಚಾಲನೆ | ನ್ಯಾಯಾಂಗ ವ್ಯವಸ್ಥೆಯಲ್ಲಿ ಮಧ್ಯಸ್ಥಿಕೆದಾರರ ಪಾತ್ರ ಮಹತ್ತರ
ಬಳ್ಳಾರಿ,ಮಾ.25(ಕರ್ನಾಟಕ ವಾರ್ತೆ):
ನ್ಯಾಯಾಲಯಗಳಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಪ್ರಕರಣಗಳ ಹೊರೆ ತಗ್ಗಿಸಲು ಮತ್ತು ಸಾರ್ವಜನಿಕರಿಗೆ ತ್ವರಿತ ನ್ಯಾಯ ಒದಗಿಸಲು ‘ಮಧ್ಯಸ್ಥಿಕೆ' ಪ್ರಕ್ರಿಯೆಯು ಅತ್ಯಂತ ಪರಿಣಾಮಕಾರಿ ಮಾರ್ಗವಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಹೇಳಿದರು.
ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಮಧ್ಯಸ್ಥಿಕೆದಾರರಿಗೆ ಮಾ.25 ರಿಂದ 29 ರ ವರೆಗೆ ನಗರದ ತಾಳೂರು ರಸ್ತೆಯ ಹೊಸ ನ್ಯಾಯಾಲಯ ಸಭಾಂಗಣದಲ್ಲಿ ಏರ್ಪಡಿಸಿದ್ದ 40 ಗಂಟೆಗಳ ಮಧ್ಯಸ್ಥಿಕೆ ತರಬೇತಿ ಶಿಬಿರಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.
ಸಾಂಪ್ರದಾಯಿಕ ನ್ಯಾಯಾಲಯದ ಪ್ರಕ್ರಿಯೆಗಿಂತ ಮಧ್ಯಸ್ಥಿಕೆಯು ಭಿನ್ನವಾಗಿದೆ. ಇಲ್ಲಿ ಮಧ್ಯಸ್ಥಿಕೆದಾರರು ಕೇವಲ ಸಮಸ್ಯೆಯನ್ನು ಆಲಿಸದೆ, ಉಭಯ ಪಕ್ಷಗಳ ನಡುವೆ ಸೌಹಾರ್ದಯುತ ವಾತಾವರಣ ನಿರ್ಮಿಸಿ ಸಮಸ್ಯೆ ಇತ್ಯರ್ಥಕ್ಕೆ ಅನುವು ಮಾಡಿಕೊಡುತ್ತಾರೆ. ಈ 5 ದಿನಗಳ ತರಬೇತಿಯು ಕೇವಲ ಕಾನೂನು ತಿಳುವಳಿಕೆಯನ್ನಷ್ಟೇ ನೀಡದೆ, ಮಧ್ಯಸ್ಥಿಕೆದಾರರ ಶಾಂತಿಯುತ ಚಿಂತನೆಯನ್ನು ವೃದ್ಧಿಸಿ ಅವರ ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮಧ್ಯಸ್ಥಿಕೆಯಿಂದ ಪ್ರಕರಣಗಳು ಶಾಶ್ವತವಾಗಿ ಇತ್ಯರ್ಥಗೊಳ್ಳುತ್ತವೆ ಮತ್ತು ಮೇಲ್ಮನವಿ ಸಲ್ಲಿಸುವ ಅಗತ್ಯವಿರುವುದಿಲ್ಲ. ‘ನಾನು’ ಎಂಬ ಅಹಂಕಾರದಿAದಲೇ ಸಮಾಜದಲ್ಲಿ ಹೆಚ್ಚಿನ ವಿವಾದಗಳು ಹುಟ್ಟಿಕೊಳ್ಳುತ್ತವೆ. ಈ ಅಹಂಕಾರವನ್ನು ಬಿಟ್ಟು ‘ನಾವು’ ಎಂಬ ಭಾವನೆಯೊಂದಿಗೆ ಕೆಲಸ ಮಾಡಿದರೆ ನ್ಯಾಯಾಂಗ ವ್ಯವಸ್ಥೆಯ ಮೇಲಿನ ಒತ್ತಡ ಕಡಿಮೆಯಾಗಿ ಸಮಾಜದಲ್ಲಿ ನೆಮ್ಮದಿ ನೆಲೆಸಲು ಸಾಧ್ಯ ಎಂದು ನ್ಯಾಯಾಧೀಶರು ಕಿವಿಮಾತು ಹೇಳಿದರು.
ಹಿರಿಯ ತರಬೇತುದಾರರಾದ ಬ್ರಿಂದಾ ನಂದಕುಮಾರ್ ಅವರು ಮಾತನಾಡಿ, ಇಂದಿನ ವೇಗದ ಯುಗದಲ್ಲಿ ನ್ಯಾಯಾಂಗ ವ್ಯವಸ್ಥೆಯ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಮತ್ತು ಸೌಹಾರ್ದಯುತವಾಗಿ ವಿವಾದಗಳನ್ನು ಬಗೆಹರಿಸಿಕೊಳ್ಳಲು ‘ಮಧ್ಯಸ್ಥಿಕೆ' ಅತ್ಯಂತ ಅವಶ್ಯಕ. ಮಧ್ಯಸ್ಥಿಕೆ ಎಂಬುದು ಕೇವಲ ವಕೀಲರಿಗೆ ಅಥವಾ ಮಧ್ಯಸ್ಥಿಕೆದಾರರಿಗೆ ಸೀಮಿತವಾದ ತಾಂತ್ರಿಕ ಪ್ರಕ್ರಿಯೆಯಲ್ಲ. ಇದೊಂದು ಜೀವನ ಕೌಶಲ್ಯ. ಇದನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಮನಸ್ಸಿಗೆ ಶಾಂತಿ ಸಿಗುತ್ತದೆ ಮತ್ತು ಉತ್ತಮ ಬಾಂಧವ್ಯ ವೃದ್ಧಿಯಾಗುತ್ತದೆ ಎಂದು ಹೇಳಿದರು.
ಹಳೆಯ ಕಾಲದಂತೆ ದಶಕಗಳ ಕಾಲ ನ್ಯಾಯಾಲಯದ ಮೊರೆ ಹೋಗಿ ಕಾಯುವ ತಾಳ್ಮೆ ಇಂದಿನ ಪೀಳಿಗೆಗೆ ಇಲ್ಲ. ಹಾಗಾಗಿ, ಕಾಲಕ್ಕೆ ತಕ್ಕಂತೆ ನಾವು ಬದಲಾಗಬೇಕಿದೆ ಮತ್ತು ಮಧ್ಯಸ್ಥಿಕೆಯಂತಹ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕಿದೆ. ಬಳ್ಳಾರಿಗೆ ಇದು ತಮ್ಮ ಮೊದಲ ಭೇಟಿಯಾಗಿದ್ದು, ಇಲ್ಲಿನ ಕಾನೂನು ಆಸಕ್ತರೊಂದಿಗೆ ಸಂವಹನ ನಡೆಸುತ್ತಿರುವುದು ಸಂತಸ ತಂದಿದೆ ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಮ್ ಬ್ರಹ್ಮಂ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ನ್ಯಾಯಾಲಯಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ, ‘ಮಧ್ಯಸ್ಥಿಕೆ' ಪ್ರಕ್ರಿಯೆಯು ವಿವಾದಗಳನ್ನು ಶಾಂತಿಯುತವಾಗಿ ಬಗೆಹರಿಸುವಲ್ಲಿ ಪ್ರಬಲ ಅಸ್ತçವಾಗಿ ಹೊರಹೊಮ್ಮುತ್ತಿದೆ ಎಂದು ಹೇಳಿದರು.
ಪ್ರಪಂಚದ ದೊಡ್ಡ ದೊಡ್ಡ ಯುದ್ಧಗಳನ್ನೇ ಮಧ್ಯಸ್ಥಿಕೆಯ ಮೂಲಕ ನಿಲ್ಲಿಸಲು ಸಾಧ್ಯವಿರುವಾಗ, ಇಬ್ಬರು ಕಕ್ಷಿದಾರರ ನಡುವಿನ ವಿವಾದಗಳನ್ನು ಬಗೆಹರಿಸುವುದು ಅಸಾಧ್ಯವಲ್ಲ. ಪ್ರಸ್ತುತ ನ್ಯಾಯಾಲಯಗಳಿಂದ ಮಧ್ಯಸ್ಥಿಕೆಗೆ ಬರುವ ಪ್ರಕರಣಗಳಲ್ಲಿ ಸುಮಾರು ಶೇ.95 ಪ್ರಕರಣಗಳು ಸರಿಯಾದ ಸಂಧಾನವಾಗದೆ ವಾಪಸ್ ಹೋಗುತ್ತಿವೆ. ಈ ಸ್ಥಿತಿಯನ್ನು ಬದಲಾಯಿಸಿ, ತರಬೇತಿಯ ನಂತರ ವಕೀಲರು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕಿದೆ ಎಂದರು.
ಈ ತರಬೇತಿ ಕಾರ್ಯಾಗಾರವು ವಕೀಲರಿಗೆ ಹೊಸ ದೃಷ್ಟಿಕೋನವನ್ನು ನೀಡಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಕರಣಗಳು ನ್ಯಾಯಾಲಯದ ಹೊರಗಡೆಯೇ ಸುಗಮವಾಗಿ ಇತ್ಯರ್ಥವಾಗಲಿವೆ ಎಂಬ ಆಶಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಸೇರಿದಂತೆ ಬಳ್ಳಾರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ನೂತನವಾಗಿ ಆಯ್ಕೆಯಾದ ಮಧ್ಯಸ್ಥಿಕೆದಾರರು, ವಕೀಲರು ಮತ್ತು ನ್ಯಾಯಾಂಗ ಅಧಿಕಾರಿಗಳು ಉಪಸ್ಥಿತರಿದ್ದರು.
ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ತ್ರೀವೇಣಿ ಪತ್ತಾರ್ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
-------------
ಮಂಗಳವಾರ, ಮಾರ್ಚ್ 24, 2026
ವಿವಿಧೆಡೆ ದಾಳಿ: ಓರ್ವ ಬಾಲಕಾರ್ಮಿಕನ ರಕ್ಷಣೆ
ಬಳ್ಳಾರಿ,ಮಾ.24(ಕರ್ನಾಟಕ ವಾರ್ತೆ):
ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನೆ ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಮಂಗಳವಾರ ನಗರದ ವಿವಿಧೆಡೆ ದಾಳಿ ನಡೆಸಿ ಓರ್ವ ಬಾಲ ಕಾರ್ಮಿಕನನ್ನು ರಕ್ಷಿಸಲಾಗಿದೆ.
ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ಹಾಗೂ ಪ್ಯಾನ್-ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ಅಂಗವಾಗಿ ಉಪತಹಶೀಲ್ದಾರ ಮಂಜುನಾಥ ಅವರ ಅಧ್ಯಕ್ಷತೆಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಟಾಸ್ಕ್ಪೋರ್ಸ್ ಸಮಿತಿ ಸಭೆ ನಡೆಸಿ ಈ ದಾಳಿ ಕೈಗೊಳ್ಳಲಾಗಿದೆ.
ನಗರದ ಬೆಂಗಳೂರು ರಸ್ತೆ, ಬಾಪೂಜಿ ನಗರ, ಎ.ಪಿ.ಎಂ.ಸಿ ಹತ್ತಿರದ ವಿವಿಧ ಸ್ಥಳಗಳಲ್ಲಿರುವ ಗ್ಯಾರೇಜ್, ಮೆಕ್ಯಾನಿಕ್ ಶಾಪ್, ಬೇಕರಿ, ಜೀನ್ಸ್ ಹೊಲಿಗೆ ಘಟಕಗಳ ಮೇಲೆ ಟಾಸ್ಕ್ ಪೋರ್ಸ್ ಸಮಿತಿ ಮೂಲಕ ಭೇಟಿ ನೀಡಿದ ಸಂದರ್ಭದಲ್ಲಿ ಮಕ್ಕಳು ಕೆಲಸ ಮಾಡುತ್ತಿರುವುದನ್ನು ಗಮನಿಸಲಾಯಿತು. ತಕ್ಷಣ ಅಲ್ಲಿ ಕೆಲಸ ನಿರ್ವಹಿಸುತ್ತಿದ್ದ 01 ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ವಶಕ್ಕೆ ಪಡೆದು ಮಕ್ಕಳ ಹೇಳಿಕೆಗಳನ್ನು ಸ್ಥಳದಲ್ಲಿಯೇ ಪಡೆದುಕೊಂಡು ಪೋಷಕರ ವಶಕ್ಕೆ ಒಪ್ಪಿಸಲಾಯಿತು.
ಇದೇ ವೇಳೆ ಎಲ್ಲಾ ಉದ್ದಿಮೆಗಳ ಮಾಲೀಕರಿಗೆ ಕರಪತ್ರ ಹಾಗೂ ಪೋಸ್ಟರ್ಗಳನ್ನು ನೀಡಿ ಜಾಗೃತಿ ಮೂಡಿಸಲಾಯಿತು.
ಈ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಬಳ್ಳಾರಿಯ 1ನೇ ವೃತ್ತದ ಕಾರ್ಮಿಕ ನಿರೀಕ್ಷಕ ರಮೇಶ್, 2ನೇ ವೃತ್ತದ ಕಾರ್ಮಿಕ ನಿರೀಕ್ಷಕ ಪರಶುರಾಮ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್, ಆರೋಗ್ಯ ಇಲಾಖೆಯ ಮುಸ್ತಾಕ್ ಅಹಮದ್, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಹೊನ್ನೂರಪ್ಪ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಕಾರ್ತಿಕ್ ಮತ್ತು ರೀಚ್ ಸಂಸ್ಥೆಯ ಸಂಯೋಜಿಕಿ ಲಕ್ಷಿö್ಮÃ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
-----------
--
ಮಾ.26 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಮಾ.24(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ವಿದ್ಯುತ್ ಲೈನ್ ಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ 11 ಕೆ.ವಿ ಫೀಡರ್ ಗಳಾದ ಎಫ್-33, ಎಫ್-73 ವ್ಯಾಪ್ತಿಯ ವಿವಿಧೆಡೆ ಮಾ.26 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಎಫ್-33 ರ ವ್ಯಾಪ್ತಿಯ ಕೆ.ಚ್.ಬಿ. ಕಾಲೋನಿ, ನೇತಾಜಿ ನಗರ, ಇನ್ನಾರೆಡ್ಡಿ ಲೇಔಟ್, ಇನ್ ಫ್ಯಾಂಟರಿ ರಸ್ತೆ, ವಾಸವಿ ಶಾಲೆ, ಕೊಳಗಲ್ ರಸ್ತೆ, ವಿದ್ಯಾನಗರ, ಕಲ್ಯಾಣಿ ಕಾಲೋನಿ, ಭತ್ರಿ ರಸ್ತೆ, ಭತ್ರಿ, ಗುರು ಕಾಲೋನಿ, ಸತ್ಯವಾಣಿ ನಗರ, ಸಿದ್ಧಾರ್ಥ ನಗರ, ವಿಯಾನಿ ಶಾಲೆ.
ಎಫ್-73 ರ ವ್ಯಾಪ್ತಿಯ ಬಸವನಕುಂಟೆ, ಕೋಟೆ ಪ್ರದೇಶ, 1 ನೇ ಗೇಟ್, 2 ನೇ ಗೇಟ್, ಸಿದ್ದಾರ್ಥ ನಗರ, ಸುಧಾಕ್ರಾಸ್, ಒ.ಪಿ.ಡಿ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಹಾಗಾಗಿ ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------------
ಯುವಕರು ಕೌಶಲ್ಯಕ್ಕೆ ಒತ್ತು ನೀಡಿ: ಪಿ.ಎಸ್.ಹಟ್ಟಪ್ಪ
ಬಳ್ಳಾರಿ,ಮಾ.24(ಕರ್ನಾಟಕ ವಾರ್ತೆ):
ಇಂದಿನ ಯುವಕರು ಕೌಶಲ್ಯಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪಿ.ಎಸ್ ಹಟ್ಟಪ್ಪ ಅವರು ಹೇಳಿದರು.
ಕೇಂದ್ರ ಸರ್ಕಾರದ ಮೇರಾ ಯುವ ಭಾರತ ಬಳ್ಳಾರಿ ಹಾಗೂ ಬಿಡಿಡಿಎಸ್ ಸಹಯೋಗದಲ್ಲಿ ಬಿಡಿಡಿಎಸ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತರ ಜಿಲ್ಲಾ ಯುವ ವಿನಿಮಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯುವ ಪೀಳಿಗೆ ಕೌಶಲ್ಯ ಚಟುವಟಿಕೆಗಳನ್ನು ಅಳವಡಿಸಿಕೊಂಡಾಗ ಮಾತ್ರ ದೇಶಕ್ಕೆ ಅಮೂಲ್ಯವಾದ ತಮ್ಮ ಕೊಡುಗೆ ನೀಡಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಮೇರಾ ಯುವ ಭಾರತ ಕೇಂದ್ರದ ಯುವ ಅಧಿಕಾರಿ ಬುಕ್ಕ ಸಂಜೀವ್ ಅವರು ಮಾತನಾಡಿ, ಭಾರತದಲ್ಲಿ ಪ್ರತಿ 50 ಕಿಲೋಮೀಟರ್ ಗೆ ಭಾಷೆ, ಸಂಸ್ಕೃತಿ, ಆಹಾರ ಪದ್ಧತಿ ಬದಲಾವಣೆ ಕಾಣಬಹುದು. ಈಗಿನ ಯುವಕರಿಗೆ ಇವುಗಳ ಪರಿಚಯ ಉತ್ತಮ ಮನೋಭಾವನೆ ಬೆಳೆಸಿಕೊಳ್ಳಲು ಸಹಕಾರಿ ಎಂದು ತಿಳಿಸಿದರು.
ಸಿಇಡಿಒಕೆ ವಿನೋದ್ ಕುಮಾರ್ ಅವರು ಮಾತನಾಡಿ ಬಳ್ಳಾರಿ ಜಿಲ್ಲೆಯಲ್ಲಿರುವ ವಿಶೇಷತೆಗಳ ಕುರಿತು ವಿವರಣೆ ನೀಡಿದರು.
ಎಸ್ಜಿಆರ್ಸಿಎಂ ಕಾಲೇಜಿನ ಪ್ರಾಂಶುಪಾಲ ಡಿ.ರಾಮಕೃಷ್ಣ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಬಳ್ಳಾರಿಯ ಸಂಸ್ಕೃತಿ, ಬಿಸಿಲಿನ ಗಮ್ಮತ್ತು ಹಾಗೂ ಇಲ್ಲಿನ ಆಹಾರ ಪದ್ಧತಿ ಬಗ್ಗೆ ತಿಳಿಸಿಕೊಟ್ಟರು.
ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮರಿ ಗಾದಿಲಿಂಗಪ್ಪ ಅವರು ಮಾತನಾಡಿ, ಯುವ ಜನತೆ ದೇಶದ ಶಕ್ತಿ ಎಂದು ಹೇಳುವ ಮೂಲಕ ಅಂತರ ಜಿಲ್ಲಾ ಯುವ ವಿನಿಮಯದ ಮಹತ್ವದ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಟಿ.ಎನ್ ಮಾರುತಿ ಪ್ರಸನ್ನ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.
-----------
ಮಾ.25 ರಂದು ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ
ಬಳ್ಳಾರಿ,ಮಾ.25(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಕಾನೂನು ಮಾಪನ ಶಾಸ್ತç ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆಹಾರ ಸುರಕ್ಷತಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ‘ಸುರಕ್ಷಿತ ಉತ್ಪನ್ನಗಳು ಆತ್ಮ ವಿಶ್ವಾಸದ ಗ್ರಾಹಕರು’ ಎಂಬ ಘೋಷವಾಕ್ಯದಡಿ ಮಾ.25 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೋಟೆ ಮುಖ್ಯ ರಸ್ತೆಯ ಮೇದಾ ಪದವಿ ಪೂರ್ವ ವಿದ್ಯಾಲಯದ ಮೇದಾ ಆಡಿಟೋರಿಯಮ್ ಹಾಲ್ ನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ. ಶಾಂತಿ ಅವರು ಉದ್ಘಾಟಿಸುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಘನ ಉಪಸ್ಥಿತಿ ಇರುವರು. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ತಿಪ್ಪೇಸ್ವಾಮಿ.ಎನ್ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅಥಿತಿಗಳಾಗಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯೆ ಮಾರ್ಲಾ ಶಶಿಕಲಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಮಬ್ರಹ್ಮಂ, ಶ್ರೀ ಮೇದಾ ಪದವಿ ಪೂರ್ವ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ರಾಮ್ ಕಿರಣ್, ಕಾನೂನು ಮಾಪನ ಶಾಸ್ತç ಇಲಾಖೆಯ ಸಹಾಯಕ ನಿಯಂತ್ರಕ ಮನೋಜ್ ಕುಮಾರ್ ಸೇರಿದಂತೆ ಇತರರು ಭಾಗವಹಿಸುವರು.
ಜಿಲ್ಲಾ ಹಿರಿಯ ವಕೀಲರಾದ ಅಂಕಲಯ್ಯ ಮತ್ತು ಎನ್.ಪ್ರಕಾಶ್ ಅವರು ‘ಸುರಕ್ಷಿತ ಉತ್ಪನ್ನಗಳು ಆತ್ಮ ವಿಶ್ವಾಸದ ಗ್ರಾಹಕರು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡುವರು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಉ ಉಪನಿರ್ದೇಶಕ ದೇವರಾಜ್ ಕೆ.ಆರ್ ಅವರು ತಿಳಿಸಿದ್ದಾರೆ.
------------
ಮಾ.27 ರಂದು ಮಿನಿ ಉದ್ಯೋಗ ಮೇಳ
ಬಳ್ಳಾರಿ,ಮಾ.24(ಕರ್ನಾಟಕ ವಾರ್ತೆ):
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.27 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಜೀಟಾ, ಪಿಟ್ಟಿ (ಇಂಡಸ್ಟಿçÃಸ್ ಪ್ರೆöÊ.ಲಿ.), ಟೊಯೋಟಾ, ಫಾಕ್ಸ್ಕಾನ್, ಶ್ರೀ ವರ್ಧನ್ ಎಫ್ಎಂಸಿಜಿ ಮತ್ತು ಶ್ರೀರಾಮ್ ಫೈನಾನ್ಸ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು.
ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಂದರ್ಶನದಲ್ಲಿ ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದು. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಮತ್ತು ಎಂಜಿನಿಯರಿAಗ್ ಪದವಿ ಹೊಂದಿರಬೇಕು.
ಸAದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ, ಸ್ವ-ವಿವರ ಪ್ರತಿಗಳೊಂದಿಗೆ ನಗರದ ಹಳೆಯ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಅಂದು ನಡೆಯುವ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.7619207762, 9663263086, 7676774293, 6360408094 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಅಂತರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ್ ಹೇಳಿಕೆ | ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ಪೂಜನೀಯ ಸ್ಥಾನ
ಬಳ್ಳಾರಿ,ಮಾ.24(ಕರ್ನಾಟಕ ವಾರ್ತೆ):
ಭಾರತೀಯ ಸಂಸ್ಕೃತಿಯಲ್ಲಿ ಹಿಂದಿನಿAದಲೂ ಮಹಿಳೆಯರಿಗೆ ಪೂಜನೀಯ ಸ್ಥಾನವಿದೆ ಎಂದು ಡಾ.ಬಾಬು ಜಗಜೀವನ್ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಇವರ ಸಂಯುಕ್ತಾಶ್ರಯದಲ್ಲಿ ನಗರದ ವಾಲ್ಮೀಕಿ ಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಅಂತರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಾತಂತ್ರö್ಯ ಪೂರ್ವದಲ್ಲಿ ಪೋರ್ಚುಗೀಸರ ವಿರುದ್ಧ ಹೋರಾಡಿದ್ದ ತುಳುನಾಡಿನ ರಾಣಿ ಅಬ್ಬಕ್ಕ, ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಝಾನ್ಸಿ ರಾಣಿ ಲಕ್ಷಿö್ಮಬಾಯಿ ಅಂತಹ ವೀರ ಮಹಿಳೆಯರ ಧೈರ್ಯದ ಕಥೆಗಳನ್ನು ಸ್ಮರಿಸಬೇಕು. ಮಹಿಳೆಯರು ಮತ್ತು ದಲಿತರಿಗೆ ಶಿಕ್ಷಣ ನಿರಾಕರಿಸಲ್ಪಟ್ಟ ಕಾಲದಲ್ಲಿ, ಪುಣೆಯಲ್ಲಿ ಮೊದಲ ಬಾರಿಗೆ ಹೆಣ್ಣುಮಕ್ಕಳಿಗಾಗಿ ಶಾಲೆ ತೆರೆದ ಸಾವಿತ್ರಿಬಾಯಿ ಫುಲೆ ಅವರ ಕೊಡುಗೆಯನ್ನು ಇಂದು ನಾವೆಲ್ಲರೂ ಗೌರವಿಸಬೇಕು ಎಂದರು.
ಡಾ.ಬಿ.ಆರ್. ಅಂಬೇಡ್ಕರ್ ಅವರು ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಒದಗಿಸಲು ಸಾಕಷ್ಟು ಶ್ರಮ ಪಟ್ಟಿದ್ದಾರೆ. ಮಹಿಳೆಯರಿಗೆ ಆಸ್ತಿಯಲ್ಲಿ ಸಮಾನ ಹಕ್ಕು ಮತ್ತು ಸ್ವಾತಂತ್ರö್ಯ ನೀಡಲು ಅಂಬೇಡ್ಕರ್ ಅವರು ಮಂಡಿಸಿದ ಹಿಂದೂ ಕೋಡ್ ಬಿಲ್ ಮಸೂದೆ ತಿರಸ್ಕಾರಗೊಂಡಾಗ ತಮ್ಮ ಮಂತ್ರಿ ಪದವಿಗೆ ರಾಜೀನಾಮೆ ನೀಡಿದ್ದರು ಎಂದು ಸ್ಮರಿಸಿದರು.
1910 ರಲ್ಲಿ ಡೆನ್ಮಾರ್ಕ್ ನಲ್ಲಿ ಕ್ಲಾರಾ ಜೆಟ್ಕಿನ್ ಅವರು ಮಹಿಳಾ ಹಕ್ಕುಗಳಿಗಾಗಿ ಆರಂಭಿಸಿದ ಹೋರಾಟದ ಫಲವಾಗಿ ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ ಅಸ್ತಿತ್ವಕ್ಕೆ ಬಂತು. 1975 ರಲ್ಲಿ ಭಾರತದಲ್ಲಿ ಆಚರಿಸಲಾಯಿತು ಎಂದು ತಿಳಿಸಿದರು.
ರಾಜ್ಯ ಸರ್ಕಾರವು ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರ ಸಬಲೀಕರಣಕ್ಕೆ ಪೂರಕವಾಗಿದ್ದು, ಈ ಕಾರ್ಯಕ್ರಮಗಳಿಗೆ ಹಲವು ಗಣ್ಯರಿಂದ ಶ್ಲಾಘನೆಗಳ ಮಹಾಪೂರವೇ ಹರಿದುಬಂದಿವೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಮಾತನಾಡಿ, ಈ ವರ್ಷದ ಮಹಿಳಾ ದಿನಾಚರಣೆಯನ್ನು ‘ಗಿವ್ ಟು ಗೇನ್' (ಪಡೆಯುವುದಕ್ಕಾಗಿ ಕೊಡಿ) ಎಂಬ ವಿಶೇಷ ಥೀಮ್ನೊಂದಿಗೆ ಆಚರಿಸಲಾಗುತ್ತಿದೆ. ಮಹಿಳೆಯರಿಗೆ ಅವಕಾಶ ಮತ್ತು ಸಮಯ ನೀಡಿದರೆ, ಅದು ಸಮೃದ್ಧ ಸಮಾಜವಾಗಿ ನಮಗೆ ಮರಳಿ ಸಿಗುತ್ತದೆ ಎಂಬುದು ಇದರ ಆಶಯ ಎಂದು ತಿಳಿಸಿಕೊಟ್ಟರು.
ಸರ್ಕಾರದ ಸೌಲಭ್ಯಗಳು ಫಲಾನುಭವಿಗಳಿಗೆ ತಲುಪುವಲ್ಲಿ ವಿಳಂಬವಾಗುತ್ತಿದೆ. ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಅರ್ಜಿಗಾಗಿ ಕಾಯುವ ಬದಲು ಅಧಿಕಾರಿಗಳೆ ಚುರುಕಾಗಿ ಕಾರ್ಯನಿರ್ವಹಿಸಿ ಮಹಿಳೆಯರು ಮತ್ತು ವಿಶೇಷ ಚೇತನರಿದ್ದ ಸ್ಥಳಕ್ಕೆ ಹೋಗಿ ಸೌಲಭ್ಯಗಳನ್ನು ತಲುಪಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಮಹಿಳೆಯರು ಕೇವಲ ಫಲಾನುಭವಿಗಳಾಗದೆ, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ನೇತೃತ್ವದ ಸ್ಥಾನಗಳನ್ನು ಅಲಂಕರಿಸುವ ಮೂಲಕ ಸಮಾಜವನ್ನು ಮುನ್ನಡೆಸುವಂತವರಾಗಬೇಕು ಎಂದು ಹೇಳಿದರು.
ಒಬ್ಬ ಹುಡುಗನಿಗೆ ಶಿಕ್ಷಣ ನೀಡಿದರೆ ಅದು ಅವನಿಗೆ ಮಾತ್ರ ಸೀಮಿತ, ಆದರೆ ಒಬ್ಬ ಹೆಣ್ಣು ಮಗುವಿಗೆ ಶಿಕ್ಷಣ ನೀಡಿದರೆ ಅದು ಇಡೀ ಕುಟುಂಬ ಮತ್ತು ಸಮಾಜಕ್ಕೆ ನೀಡಿದಂತೆ ಎಂಬ ಪ್ರಸಿದ್ಧ ಮಾತಿನಂತೆ, ಪೋಷಕರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಶಿಕ್ಷಣದ ಕೊರತೆ ಮತ್ತು ಶಾಲೆ ಬಿಡುವ ಪ್ರಮಾಣ ಹೆಚ್ಚಾದಾಗ ಬಾಲ್ಯ ವಿವಾಹದಂತಹ ಪ್ರಕರಣಗಳು ಹೆಚ್ಚುತ್ತವೆ. ಇದನ್ನು ತಡೆಯಲು ಹೆಣ್ಣು ಮಕ್ಕಳಿಗೆ ಕನಿಷ್ಠ ಪದವಿ ಅಥವಾ ಅವರ ಆಸಕ್ತಿಗೆ ಅನುಗುಣವಾಗಿ ಉನ್ನತ ಶಿಕ್ಷಣ ನೀಡಲು ಪೋಷಕರು ಪ್ರೋತ್ಸಾಹಿಸಬೇಕು. ಮಹಿಳೆಯರಿಗೆ ಸಮಾನ ಅವಕಾಶ ಮತ್ತು ಸುರಕ್ಷಿತ ವಾತಾವರಣ ಕಲ್ಪಿಸಿದರೆ ಮಾತ್ರ ದೇಶವು ಸುಸ್ಥಿರ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಅವರು ಮಾತನಾಡಿ, ಮಹಿಳೆಯರಲ್ಲಿರುವ ಸೌಮ್ಯತೆ, ಧೈರ್ಯ, ಪ್ರೀತಿ ಮತ್ತು ವಿಶ್ವಾಸ ಇಡೀ ಜಗತ್ತನ್ನೇ ಗೆಲ್ಲುವ ಶಕ್ತಿ ಹೊಂದಿದೆ. ಇಂದು ಪುರುಷರು ಪಡೆಯುತ್ತಿರುವ ಸ್ಥಾನಮಾನ, ಗೌರವ ಮತ್ತು ಅಧಿಕಾರದ ಹಿಂದೆ ತಾಯಿ ಮತ್ತು ಪತ್ನಿಯ ಸಹಕಾರ ಅಡಗಿದೆ. ಒಂದು ರಾಜ್ಯ, ಗ್ರಾಮ, ಶಾಲೆ ಅಥವಾ ದೇಶದಲ್ಲಿ ನಿಜವಾದ ಬದಲಾವಣೆ ಆಗಬೇಕಾದರೆ ಅದು ಮಹಿಳೆಯರಿಂದ ಮಾತ್ರ ಸಾಧ್ಯ. ಅವರು ಮನಸ್ಸು ಮಾಡಿದರೆ ಯಾವುದೇ ಬದಲಾವಣೆ ಅಸಾಧ್ಯವಲ್ಲ ಎಂದು ಹೇಳಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ನಮ್ಮನ್ನು ಸಾಕಿ ಬೆಳೆಸಿದ ತಾಯಂದಿರ ಋಣ ತೀರಿಸುವುದು ಅಸಾಧ್ಯ. ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕೇವಲ ಭರವಸೆಗಳಾಗಿ ಉಳಿಯದೆ, ಇಂದು ಪ್ರತಿಯೊಬ್ಬ ಮಹಿಳೆಯ ಬದುಕಿನಲ್ಲಿ ಹೊಸ ಸಂಚಲನ ಮೂಡಿಸಿವೆ. ಅವರ ಆರ್ಥಿಕ ಸ್ವಾತಂತ್ರö್ಯಕ್ಕಾಗಿ ಸಿದ್ದರಾಮಯ್ಯನವರ ಸರ್ಕಾರ ಈ ಯೋಜನೆಗಳನ್ನು ರೂಪಿಸಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳಾ ಸಾಧಕಿಯರನ್ನು ಗೌರವಿಸಿ ಸನ್ಮಾನಿಸಲಾಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಜಿಪಂ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ.ಎಂ., ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಆಶಾಲತಾ ಸೋಮಪ್ಪ, ಬಳ್ಳಾರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಗೋನಾಳ್ ಎಂ.ನಾಗಭೂಷಣ ಗೌಡ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ತ್ರಿವೇಣಿ ಪತ್ತಾರ್, ಕುರುಗೋಡು ತಾಪಂ ಇಓ ಕೆ.ವಿ ನಿರ್ಮಲಾ, ಜಿಪಂ ಲೆಕ್ಕಾಧಿಕಾರಿ ನಾಗಲಕ್ಷಿö್ಮ, ಡಿವೈಎಸ್ಪಿ ಗೋವಿಂದರಾಜ್, ಹಿರಿಯ ಸಾಹಿತಿ ಎನ್.ಡಿ. ವೆಂಕಮ್ಮ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು- ಸಹಾಯಕಿಯರು, ಸ್ವ- ಸಹಾಯ ಸಂಘದ ಮಹಿಳೆಯರು ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.
------------
ಸೋಮವಾರ, ಮಾರ್ಚ್ 23, 2026
ಯುವಕ ನಾಪತ್ತೆ: ಪತ್ತೆಗೆ ಮನವಿ
ಬಳ್ಳಾರಿ,ಮಾ.23(ಕರ್ನಾಟಕ ವಾರ್ತೆ):
ಕುಡತಿನಿ ಪೊಲೀಸ್ ಠಾಣೆ ವ್ಯಾಪ್ತಿಯ ತಿಮ್ಮಲಾಪುರ ಗ್ರಾಮದ ನಿವಾಸಿ ರೇವಣ್ಣ ಕುಮಾರ್ ಎನ್ನುವ 23 ವರ್ಷದ ಯುವಕ ಮಾ.15 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಉಪ ನಿರೀಕ್ಷಕರು ಮನವಿ ಮಾಡಿದ್ದಾರೆ.
ಚಹರೆ:
ಎತ್ತರ ಸುಮಾರು 5.7 ಅಡಿ, ಕೋಲುಮುಖ, ಗೋಧಿ ಮೈ ಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ಬಲಗೈ ಮೇಲೆ ಆ ಅಂತ ಇಂಗ್ಲೀಷ್ ನಲ್ಲಿ ಅಚ್ಚೆ ಹಾಕಿಸಿಕೊಂಡಿರುತ್ತಾನೆ.
ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಚೆಕ್ಸ್ ಲುಂಗಿ, ಗುಲಾಬಿ ಬಣ್ಣದ ಅಂಗಿ ಧರಿಸಿರುತ್ತಾನೆ.
ಕಾಣೆಯಾದ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕುಡತಿನಿ ಪೊಲೀಸ್ ಠಾಣೆಯ ಮೊ.8392248100 ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
-------------
40 ಗಂಟೆಗಳ ಮಧ್ಯಸ್ಥಿಕೆ ತರಬೇತಿ ಶಿಬಿರ
ಬಳ್ಳಾರಿ,ಮಾ.23(ಕರ್ನಾಟಕ ವಾರ್ತೆ):
ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಮಧ್ಯಸ್ಥಿಕೆದಾರರಿಗೆ ಮಾ.25 ರಿಂದ 29 ರ ವರೆಗೆ 40 ಗಂಟೆಗಳ ಮಧ್ಯಸ್ಥಿಕೆ ತರಬೇತಿ ಶಿಬಿರ ಆಯೋಜಿಸಲಾಗಿದೆ.
ಮಾ.25 ರಂದು ಬೆಳಿಗ್ಗೆ 10 ಗಂಟೆಗೆ ನಗರದ ತಾಳೂರು ರಸ್ತೆಯ ಹೊಸ ನ್ಯಾಯಾಲಯ ಸಭಾಂಗಣದಲ್ಲಿ ಉದ್ಘಾಟನಾ ಕಾರ್ಯಕ್ರಮ ಜರುಗಲಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಅಧ್ಯಕ್ಷತೆ ವಹಿಸುವರು.
ಹಿರಿಯ ತರಬೇತುದಾರರಾದ ಬೀನಾ ದೇವರಾಜ್, ಬ್ರಿಂದಾ ನಂದಕುಮರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಮ್ ಬ್ರಹ್ಮಂ ಅವರು ಉಪಸ್ಥಿತರಿರುವರು.
ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ತ್ರೀವೇಣಿ ಪತ್ತಾರ್ ಅವರು ಕಾರ್ಯಕ್ರಮ ನಿರೂಪಿಸುವರು ಎಂದು ಜಿಲ್ಲಾ ನ್ಯಾಯಾಲಯ ಪ್ರಕಟಣೆ ತಿಳಿಸಿದೆ.
-----------
ಮಾ.24 ರಂದು ಅಂತರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮ
ಬಳ್ಳಾರಿ,ಮಾ.23(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಇವರ ಸಂಯುಕ್ತಾಶ್ರಯದಲ್ಲಿ ಮಾ.24 ರಂದು ಬೆಳಿಗ್ಗೆ 10 ಗಂಟೆಗೆ ನಗರದ ವಾಲ್ಮೀಕಿ ಭವನದಲ್ಲಿ ಅಂತರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್ಲೂಮ್ಸ್)ದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನ್ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್, ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ್, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷö್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಭಾಗವಹಿಸುವರು.
ಕಲಬುರಗಿಯ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಝಹೀರಾ ನಸೀಮ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ವಿ. ತ್ರಿಲೋಕ ಚಂದ್ರ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಜಿಪಂ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್ ಮಂಜುನಾಥ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ.ಎಂ ಅವರು ತಿಳಿಸಿದ್ದಾರೆ.
------------
ಜಯಂತಿ ಕಾರ್ಯಕ್ರಮದಲ್ಲಿ ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಅಭಿಮತ ಲಿಂಗ ತಾರತಮ್ಯ ವಿರುದ್ಧ ಧ್ವನಿ ಎತ್ತಿದ ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯ
ಬಳ್ಳಾರಿ,ಮಾ.23(ಕರ್ನಾಟಕ ವಾರ್ತೆ):
ವಚನ ಸಾಹಿತ್ಯ ಕಾಲದಲ್ಲಿಯೇ ಲಿಂಗ ತಾರತಮ್ಯ ವಿರುದ್ಧ ಧ್ವನಿ ಎತ್ತಿದ ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು ಎಂಬುದಾಗಿ ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯದ ಹೊಂಗಿರಣ ಸಭಾಂಗಣದಲ್ಲಿ ಸೋಮವಾರ ಆಯೋಜಿದ್ದ ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
11 ನೇ ಶತಮಾನದಲ್ಲಿಯೇ ದೇವರ ದಾಸಿಮಯ್ಯರವರು ವಚನ ಸಾಹಿತ್ಯದ ಮೂಲಕ ಲಿಂಗ ತಾರತಮ್ಯ ಮಾಡುವುದು ತಪ್ಪು ಎಂದು ಪ್ರತಿಪಾದಿಸಿದ್ದರು. ಈ ಕುರಿತು ಶಿವನ ಆರಾಧನೆಯ ಮೂಲಕ ಜನರಿಕೆ ತಿಳಿವಳಿಕೆ ನೀಡುತ್ತಿದ್ದರು. ಹಾಗಾಗಿ ಪ್ರಸ್ತುತ ಸಮಾಜದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನ ಒದಗಿಸಿ ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಎಲ್ಲರು ಸಹಕರಿಸಬೇಕು ಎಂದು ಅಭಿಪ್ರಾಯಪಟ್ಟರು.
ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಮಾತನಾಡಿ, ವಚನಗಳಿಗೆ ಮನಃ ಪರಿವರ್ತನೆ ಮಾಡುವ ಶಕ್ತಿ ಹೊಂದಿವೆ. ಈ ನಿಟ್ಟಿನಲ್ಲಿ ದೇವರ ದಾಸಿಮ್ಯನವರ ವಚನಗಳ ಕುರಿತು ಎಲ್ಲರು ತಿಳಿದುಕೊಳ್ಳಬೇಕು ಎಂದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ದೇವರ ದಾಸಿಮ್ಯನವರ ಕನಸಿನಂತೆ ಸಮಾಜದಲ್ಲಿ ಯಾರು ಕೂಡ ಹಸಿವಿನಿಂದ ಬಳಲಬಾರದು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಹೇಳಿದರು.
ಬಳ್ಳಾರಿಯ ಅಮಾತಿ ಬಸವರಾಜ ಅವರು ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಮಾತನಾಡಿ, ವೃತ್ತಿಯಲ್ಲಿ ನೇಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದವರು. ಕಾಯಕವನ್ನೇ ಕೈಲಾಸವಾಗಿಸಿಕೊಂಡ ಸಾಧಕರಾಗಿದ್ದರು ಎಂದು ಹೇಳಿದರು.
ಆದ್ಯ ವಚನಕಾರ ದೇವರ ದಾಸಿಮಯ್ಯನವರು ಶಿವನಿಗೆ ತಮ್ಮನ್ನು ತಾವು ಒಪ್ಪಿಸಿಕೊಂಡು ದಾಸರಾದರು. ಸಮಾಜದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಬಾಳಬೇಕು ಎಂದು ಸಾರಿದವರು ದಾಸಿಮಯ್ಯ ಎಂದು ತಿಳಿಸಿದರು.
ವೇದಿಕೆ ಕಾರ್ಯಕ್ರಮ ಆರಂಭಕ್ಕೂ ಮುನ್ನ ಕು.ತಸ್ಮಯ್ ಅನ್ನಪೂರ್ಣ ಮತ್ತು ತಂಡದಿAದ ವಚನ ಸಂಗೀತ ಪ್ರಸ್ತುತಪಡಿಸಿದರು. ಬಳಿಕ ಸಂವಿಧಾನ ಪ್ರಸ್ತಾವನೆಯ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ನೇಕಾರರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಸಿ.ದೇವಾನಂದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಸಮಾಜದ ಮುಖಂಡರು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
-----------
ಬಳ್ಳಾರಿ,ಮಾ.23(ಕರ್ನಾಟಕ ವಾರ್ತೆ):
ವಚನ ಸಾಹಿತ್ಯ ಕಾಲದಲ್ಲಿಯೇ ಲಿಂಗ ತಾರತಮ್ಯ ವಿರುದ್ಧ ಧ್ವನಿ ಎತ್ತಿದ ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು ಎಂಬುದಾಗಿ ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯದ ಹೊಂಗಿರಣ ಸಭಾಂಗಣದಲ್ಲಿ ಸೋಮವಾರ ಆಯೋಜಿದ್ದ ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
11 ನೇ ಶತಮಾನದಲ್ಲಿಯೇ ದೇವರ ದಾಸಿಮಯ್ಯರವರು ವಚನ ಸಾಹಿತ್ಯದ ಮೂಲಕ ಲಿಂಗ ತಾರತಮ್ಯ ಮಾಡುವುದು ತಪ್ಪು ಎಂದು ಪ್ರತಿಪಾದಿಸಿದ್ದರು. ಈ ಕುರಿತು ಶಿವನ ಆರಾಧನೆಯ ಮೂಲಕ ಜನರಿಕೆ ತಿಳಿವಳಿಕೆ ನೀಡುತ್ತಿದ್ದರು. ಹಾಗಾಗಿ ಪ್ರಸ್ತುತ ಸಮಾಜದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನ ಒದಗಿಸಿ ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಎಲ್ಲರು ಸಹಕರಿಸಬೇಕು ಎಂದು ಅಭಿಪ್ರಾಯಪಟ್ಟರು.
ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಮಾತನಾಡಿ, ವಚನಗಳಿಗೆ ಮನಃ ಪರಿವರ್ತನೆ ಮಾಡುವ ಶಕ್ತಿ ಹೊಂದಿವೆ. ಈ ನಿಟ್ಟಿನಲ್ಲಿ ದೇವರ ದಾಸಿಮ್ಯನವರ ವಚನಗಳ ಕುರಿತು ಎಲ್ಲರು ತಿಳಿದುಕೊಳ್ಳಬೇಕು ಎಂದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ದೇವರ ದಾಸಿಮ್ಯನವರ ಕನಸಿನಂತೆ ಸಮಾಜದಲ್ಲಿ ಯಾರು ಕೂಡ ಹಸಿವಿನಿಂದ ಬಳಲಬಾರದು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಹೇಳಿದರು.
ಬಳ್ಳಾರಿಯ ಅಮಾತಿ ಬಸವರಾಜ ಅವರು ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಮಾತನಾಡಿ, ವೃತ್ತಿಯಲ್ಲಿ ನೇಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದವರು. ಕಾಯಕವನ್ನೇ ಕೈಲಾಸವಾಗಿಸಿಕೊಂಡ ಸಾಧಕರಾಗಿದ್ದರು ಎಂದು ಹೇಳಿದರು.
ಆದ್ಯ ವಚನಕಾರ ದೇವರ ದಾಸಿಮಯ್ಯನವರು ಶಿವನಿಗೆ ತಮ್ಮನ್ನು ತಾವು ಒಪ್ಪಿಸಿಕೊಂಡು ದಾಸರಾದರು. ಸಮಾಜದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಬಾಳಬೇಕು ಎಂದು ಸಾರಿದವರು ದಾಸಿಮಯ್ಯ ಎಂದು ತಿಳಿಸಿದರು.
ವೇದಿಕೆ ಕಾರ್ಯಕ್ರಮ ಆರಂಭಕ್ಕೂ ಮುನ್ನ ಕು.ತಸ್ಮಯ್ ಅನ್ನಪೂರ್ಣ ಮತ್ತು ತಂಡದಿAದ ವಚನ ಸಂಗೀತ ಪ್ರಸ್ತುತಪಡಿಸಿದರು. ಬಳಿಕ ಸಂವಿಧಾನ ಪ್ರಸ್ತಾವನೆಯ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ನೇಕಾರರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಸಿ.ದೇವಾನಂದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಸಮಾಜದ ಮುಖಂಡರು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)

















































