ಬುಧವಾರ, ಮಾರ್ಚ್ 11, 2026
ಮಾ.12 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ
ಬಳ್ಳಾರಿ,ಮಾ.11(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪ-ವಿಭಾಗ-1 ಹಾಗು 2ರÀÀ ವ್ಯಾಪ್ತಿಯ ವಿದ್ಯುತ್ ಗೆ ಸಂಬAಧಿಸಿದAತೆ ವಿದ್ಯುತ್ ಗ್ರಾಹಕರಿಗಿರುವ ಕುಂದು-ಕೊರತೆಗಳನ್ನು ಆಲಿಸಿ ಪರಿಹರಿಸಲು ಮಾ.12 ರಂದು ಮಧ್ಯಾಹ್ನ 03 ಗಂಟೆಗೆ ವಲಯ ಕಚೇರಿ ಮೊದಲ ಮಹಡಿಯಲ್ಲಿನ ಸಭಾಂಗಣದಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಆಯೋಜಿಸಲಾಗಿದೆ.
ಬಳ್ಳಾರಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವೃತ್ತದ ಅಧೀಕ್ಷಕ ಅಭಿಯಂತರರು ಸಭೆಯ ಅಧ್ಯಕ್ಷತೆ ವಹಿಸುವರು. ಹಾಗಾಗಿ ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ತಮ್ಮ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ