ಬುಧವಾರ, ಮಾರ್ಚ್ 11, 2026
ಮಾ.13 ರಂದು ನೇರ ಸಂದರ್ಶನ
ಬಳ್ಳಾರಿ,ಮಾ.11(ಕರ್ನಾಟಕ ವಾರ್ತೆ):
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.13 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ನಗರದ ಹಳೆಯ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.
ಸಂದರ್ಶನದಲ್ಲಿ ರೀಡ್ಸ್, ಟೋಯೋಟಾ, ಕಿಯಾ, ಫೋಕ್ಸ್ಕಾನ್, ಐ ಫೋನ್ ಮತ್ತು ಎಲ್‌ಐಸಿ ಕಂಪನಿಗಳು ಭಾಗವಹಿಸಲಿದ್ದು, ಇವರು ತಮ್ಮಲ್ಲಿರುವ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳುವರು.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ, ಸ್ವ-ವಿವರ ಪ್ರತಿಗಳೊಂದಿಗೆ ಭಾಗವಹಿಸಬೇಕು.
ಈ ಸಂದರ್ಶನದಲ್ಲಿ ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದಾಗಿದ್ದು, ಯಾವುದೇ ಶುಲ್ಕ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ 7619207762, 9663263086, 7676774293, 6360408094 ಗೆ ಕರೆಮಾಡಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ