ಶುಕ್ರವಾರ, ಮಾರ್ಚ್ 13, 2026

ಮಾ.15 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಮಾ.13(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ವ್ಯಾಪ್ತಿಯ 11 ಕೆವಿ ಎಫ್-7 ಫೀಡರ್ ಮಾರ್ಗದ ವಿದ್ಯುತ್ ಕಂಬಗಳ ಸ್ಥಳಾಂತರಿಸುವ ಕಾರ್ಯ ಕೈಗೊಳ್ಳುತ್ತಿರುವುದರಿಂದ ಮಾ.15 ರಂದು ಬೆಳಿಗ್ಗೆ 09 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ನಗರದ ರಾಘವ ಕಲಾಮಂದಿರ, ಅನಂತಪುರ ರಸ್ತೆ, ವಡ್ಡರ ಬಂಡೆ, ಅಗಡಿ ಮಾರೆಪ್ಪ ಕಾಂಪೌAಡ್, ರೂಪನಗುಡಿ ರಸ್ತೆ, ಮುಬರಕ್ ಟಾಕೀಶ್, ಬಾಲಾಜಿರಾವ್ ರಸ್ತೆ, ಕೆಸಿ ರೋಡ್, ಮೀನಾಕ್ಷಿ ವೃತ್ತ, ಬೆಂಗಳೂರು ರಸ್ತೆ, ದುಗ್ಗಪ್ಪ ಬೀದಿ, ರೆಡ್ಡಿ ಬೀದಿ, ಅಲ್ಲಂ ಬೀದಿ, ಮುಲ್ಲಂಗಿ ಸಂಜೀವಪ್ಪ ಬೀದಿ, ರೂಪನಗುಡಿ ನರಪ್ಪ ಬೀದಿ ಮತ್ತು ತಾಯಮ್ಮ ಕಟ್ಟೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ