ಗುರುವಾರ, ಮಾರ್ಚ್ 12, 2026

ಮಾ.16 ರಂದು ಎಸ್‌ಸಿಎಸ್‌ಪಿ-ಟಿಎಸ್‌ಪಿ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆ

ಬಳ್ಳಾರಿ,ಮಾ.12(ಕರ್ನಾಟಕ ವಾರ್ತೆ): ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) ಅಧಿನಿಯಮ-2013ರ ಸೆಕ್ಷನ್-11ರ ಪ್ರಕಾರ ಜಿಲ್ಲಾ ಮೇಲ್ವಿಚಾರಣಾ ಸಮಿತಿ ರಚಿಸಿದ್ದು, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರ ಅಧ್ಯಕ್ಷತೆಯಲ್ಲಿ ಮಾ.16 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಎಸ್.ಸಿ.ಎಸ್.ಪಿ./ಟಿ.ಎಸ್.ಪಿ ಜಿಲ್ಲಾ ಮೇಲ್ವಿಚಾರಣಾ ಸಮಿತಿಯ ಸಭೆ ಏರ್ಪಡಿಸಲಾಗಿದೆ. ಸಂಬAಧಿಸಿದ ಇಲಾಖಾ ಅಧಿಕಾರಿಗಳು ಅಗತ್ಯ ಮಾಹಿತಿಗಳೊಂದಿಗೆ ಸಭೆಗೆ ಹಾಜರಾಗಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ