ಮಂಗಳವಾರ, ಮಾರ್ಚ್ 17, 2026
ಮಾ.18 ರಂದು ಬಳ್ಳಾರಿಗೆ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಭೇಟಿ
'ನಶಾಮುಕ್ತ ಭಾರತ' ಅಭಿಯಾನ ಉದ್ಘಾಟನೆ
ಬಳ್ಳಾರಿ,ಮಾ.17(ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಮಾರ್ಚ್ 18 ರಂದು ಬಳ್ಳಾರಿ ಜಿಲ್ಲೆಗೆ ಪ್ರವಾಸ ಹಮ್ಮಿಕೊಂಡಿದ್ದಾರೆ.
ಮಾ.18 ರಂದು ಬೆಳಿಗ್ಗೆ ಬೆಂಗಳೂರಿನ ಲೋಕ ಭವನದಿಂದ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿ, ವಿಶೇಷ ವಿಮಾನದ ಮೂಲಕ ಬಳ್ಳಾರಿಯ ತೋರಣಗಲ್ಲು ಜಿಂದಾಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವರು.
ನಂತರ ಬೆಳಿಗ್ಗೆ 07.30 ಗಂಟೆಗೆ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ (ಬಿಎಂಸಿಆರ್ ಸಿ) ಮೈದಾನದಲ್ಲಿ ಹಮ್ಮಿಕೊಂಡಿರುವ 'ನಶಾಮುಕ್ತ ಭಾರತ-ಯುವ ಶುದ್ಧಿ ಅಭಿಯಾನ' ಕಾರ್ಯಕ್ರಮ ಉದ್ಘಾಟನೆ ನೆರವೇರಿಸುವರು.
ಬಳಿಕ ತೋರಣಗಲ್ಲು ಜಿಂದಾಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಮರಳಿ ಬೆಂಗಳೂರಿಗೆ ಪ್ರಯಾಣಿಸುವರು.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ