ಮಂಗಳವಾರ, ಮಾರ್ಚ್ 3, 2026

ಸಾರ್ವಜನಿಕ ಗ್ರಂಥಾಲಯ: 2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ- ಆಕ್ಷೇಪಣೆ ಸಲ್ಲಿಸಲು ಅವಕಾಶ

ಸಾರ್ವಜನಿಕ ಗ್ರಂಥಾಲಯ: 2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ- ಆಕ್ಷೇಪಣೆ ಸಲ್ಲಿಸಲು ಅವಕಾಶ ಬಳ್ಳಾರಿ,ಮಾ.03,(ಕರ್ನಾಟಕ ವಾರ್ತೆ): 2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪಟ್ಟಿಯನ್ನು ರಾಜ್ಯದ ಎಲ್ಲಾ ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳ ಕಚೇರಿಗಳಲ್ಲಿ ಹಾಗೂ ಇಲಾಖೆಯ ಅಧಿಕೃತ ವೆಬ್‌ಸೈಟ್ www.dpl.karnataka.gov.in ನಲ್ಲಿ 2026 ನೇ ಮಾರ್ಚ್ 02 ರಂದು ಪ್ರಕಟಿಸಲಾಗಿದೆ. *ಆಕ್ಷೇಪಣೆ ಸಲ್ಲಿಸಲು ಅವಕಾಶ:* ಆಯ್ಕೆಯಾದ ಪುಸ್ತಕಗಳ ಪಟ್ಟಿಯಲ್ಲಿರುವ ಲೇಖಕರು, ಲೇಖಕ - ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ತಮ್ಮ ಪುಸ್ತಕಗಳಿಗೆ ಸಂಬAಧಿಸಿದ ಪುಸ್ತಕದ ಶೀರ್ಷಿಕೆ, ಲೇಖಕರ / ಪ್ರಕಾಶಕರ ಹೆಸರು, ಮುಖ ಬೆಲೆ (ನಿಗದಿತ ಬೆಲೆಯಲ್ಲಿ ವ್ಯತ್ಯಾಸವಿದ್ದಲ್ಲಿ), ಪುಸ್ತಕದ ಅಳತೆ ಮತ್ತು ಪುಟಗಳ ಸಂಖ್ಯೆ ಅಥವಾ ಇತರ ಯಾವುದೇ ತಾಂತ್ರಿಕ ವ್ಯತ್ಯಾಸಗಳಿದ್ದಲ್ಲಿ ತಮ್ಮ ಆಕ್ಷೇಪಣೆ ಅಥವಾ ತಿದ್ದುಪಡಿಗಳನ್ನು ಅಧಿಕೃತ ಮಾಹಿತಿ / ದಾಖಲೆಗಳೊಂದಿಗೆ 2026 ನೇ ಮಾರ್ಚ್ 16ರ ಸಂಜೆ 5.30ರ ಒಳಗಾಗಿ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ.ಅಂಬೇಡ್ಕರ್ ವೀದಿ, ಬೆಂಗಳೂರು – 560001 ಇಲ್ಲಿಗೆ ಲಿಖಿತವಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ನಿಗದಿತ ಅವಧಿಯ ನಂತರ ಬರುವ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಮತ್ತು ಏಕಪಕ್ಷೀಯವಾಗಿ ನಿರ್ಣಯವನ್ನು ಕೈಗೊಳ್ಳಲಾಗುವುದು ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತರಾದ ಬಸವರಾಜೇಂದ್ರ.ಹೆಚ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ