ಗುರುವಾರ, ಮಾರ್ಚ್ 5, 2026
ಸರ್ಕಾರಿ ಆದರ್ಶ ವಿದ್ಯಾಲಯ: ಮಾ.22 ರಂದು ಪ್ರವೇಶ ಪರೀಕ್ಷೆ
ಬಳ್ಳಾರಿ,ಮಾ.05(ಕರ್ನಾಟಕ ವಾರ್ತೆ):
ನಗರದ ಹಿರಾಳ್ ಕುಡಂ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ 2026-27ನೇ ಸಾಲಿನಲ್ಲಿ 6ನೇ ತರಗತಿ ದಾಖಲಾತಿಗಾಗಿ ವಿದ್ಯಾರ್ಥಿಗಳಿಂದ ಈಗಾಗಲೇ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದ್ದು, ಪ್ರವೇಶ ಪರೀಕ್ಷೆ ಮಾ.15 ರಂದು ನಿಗದಿಯಾಗಿತ್ತು. ಬದಲಾಗಿ ಮಾ.22 ರಂದು ಭಾನುವಾರ ನಡೆಸಲು ನಿಗದಿಪಡಿಸಲಾಗಿದೆ ಎಂದು ಪ್ರಾಚಾರ್ಯರು ತಿಳಿಸಿದ್ದಾರೆ.
*ಪರೀಕ್ಷಾ ಕೇಂದ್ರಗಳು:* ಸೆಂಟ್ ಜೋಸಫ್ ಬಾಲಕರ ಮತ್ತು ಬಾಲಕಿಯರ ಪ್ರೌಢಶಾಲೆ ಮತ್ತು ನಂದಿ ಪ್ರೌಢ ಶಾಲೆಗಳಲ್ಲಿ ಪ್ರವೇಶ ಪರೀಕ್ಷೆ ನಡೆಯಲಿವೆ. ಆನ್ ಲೈನ್‌ನಲ್ಲಿ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡು ಹಾಜರಾಗಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.9740738762 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ