ಸೋಮವಾರ, ಮಾರ್ಚ್ 23, 2026

40 ಗಂಟೆಗಳ ಮಧ್ಯಸ್ಥಿಕೆ ತರಬೇತಿ ಶಿಬಿರ

ಬಳ್ಳಾರಿ,ಮಾ.23(ಕರ್ನಾಟಕ ವಾರ್ತೆ): ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಮಧ್ಯಸ್ಥಿಕೆದಾರರಿಗೆ ಮಾ.25 ರಿಂದ 29 ರ ವರೆಗೆ 40 ಗಂಟೆಗಳ ಮಧ್ಯಸ್ಥಿಕೆ ತರಬೇತಿ ಶಿಬಿರ ಆಯೋಜಿಸಲಾಗಿದೆ. ಮಾ.25 ರಂದು ಬೆಳಿಗ್ಗೆ 10 ಗಂಟೆಗೆ ನಗರದ ತಾಳೂರು ರಸ್ತೆಯ ಹೊಸ ನ್ಯಾಯಾಲಯ ಸಭಾಂಗಣದಲ್ಲಿ ಉದ್ಘಾಟನಾ ಕಾರ್ಯಕ್ರಮ ಜರುಗಲಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಅಧ್ಯಕ್ಷತೆ ವಹಿಸುವರು. ಹಿರಿಯ ತರಬೇತುದಾರರಾದ ಬೀನಾ ದೇವರಾಜ್, ಬ್ರಿಂದಾ ನಂದಕುಮರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಮ್ ಬ್ರಹ್ಮಂ ಅವರು ಉಪಸ್ಥಿತರಿರುವರು. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ತ್ರೀವೇಣಿ ಪತ್ತಾರ್ ಅವರು ಕಾರ್ಯಕ್ರಮ ನಿರೂಪಿಸುವರು ಎಂದು ಜಿಲ್ಲಾ ನ್ಯಾಯಾಲಯ ಪ್ರಕಟಣೆ ತಿಳಿಸಿದೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ