ಶನಿವಾರ, ಮಾರ್ಚ್ 7, 2026

ರಾಮಕೃಷ್ಣ ವಿದ್ಯಾಶಾಲೆಯಲ್ಲಿ 8ನೇ ತರಗತಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ,ಮಾ.07(ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಸಾಲಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಅನೈರ್ಮಲ್ಯಕರ ವೃತ್ತಿಯಲ್ಲಿ ತೊಡಗಿರುವ ಪೋಷಕರ ಪ್ರತಿಭಾವಂತ ಗಂಡು ಮಕ್ಕಳಿಗೆ ಮೈಸೂರಿನ ರಾಮಕೃಷ್ಣ ವಿದ್ಯಾಶಾಲೆಯಲ್ಲಿ 8ನೇ ತರಗತಿ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಿಂದ ಅರ್ಹ 06 ವಿದ್ಯಾರ್ಥಿಗಳಿಗೆ ಸೌಲಭ್ಯವಿದ್ದು, ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಪರಿಶಿಷ್ಟ ಜಾತಿಯ ಅನೈರ್ಮಲ್ಯಕರ ವೃತ್ತಿಗಳಲ್ಲಿ ತೊಡಗಿರುವ ಪೋಷಕರ ವರ್ಗದಡಿ-03 ಮತ್ತು ಪರಿಶಿಷ್ಟ ವರ್ಗದ (ಅಲೆಮಾರಿ, ಅರೆ ಅಲೆಮಾರಿ, ಸೂಕ್ಷö್ಮ ಹಾಗೂ ಅತಿ ಸೂಕ್ಷö್ಮ ಸಮುದಾಯ) 03 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿಗಳನ್ನು ನಗರದ ಕೌಲ್ ಬಜಾರ್ ನ 1ನೇ ಗೇಟ್ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿ ಅರ್ಜಿಯೊಂದಿಗೆ 6 ಮತ್ತು 7 ನೇ ತರಗತಿಯ ಅಂಕಪಟ್ಟಿ ಹಾಗೂ ಇತರೆ ದಾಖಲೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮಾ.24 ಕೊನೆಯ ದಿನವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ