ಮಂಗಳವಾರ, ಮಾರ್ಚ್ 24, 2026
ವಿವಿಧೆಡೆ ದಾಳಿ: ಓರ್ವ ಬಾಲಕಾರ್ಮಿಕನ ರಕ್ಷಣೆ
ಬಳ್ಳಾರಿ,ಮಾ.24(ಕರ್ನಾಟಕ ವಾರ್ತೆ):
ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನೆ ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಮಂಗಳವಾರ ನಗರದ ವಿವಿಧೆಡೆ ದಾಳಿ ನಡೆಸಿ ಓರ್ವ ಬಾಲ ಕಾರ್ಮಿಕನನ್ನು ರಕ್ಷಿಸಲಾಗಿದೆ.
ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ಹಾಗೂ ಪ್ಯಾನ್-ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ಅಂಗವಾಗಿ ಉಪತಹಶೀಲ್ದಾರ ಮಂಜುನಾಥ ಅವರ ಅಧ್ಯಕ್ಷತೆಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಟಾಸ್ಕ್ಪೋರ್ಸ್ ಸಮಿತಿ ಸಭೆ ನಡೆಸಿ ಈ ದಾಳಿ ಕೈಗೊಳ್ಳಲಾಗಿದೆ.
ನಗರದ ಬೆಂಗಳೂರು ರಸ್ತೆ, ಬಾಪೂಜಿ ನಗರ, ಎ.ಪಿ.ಎಂ.ಸಿ ಹತ್ತಿರದ ವಿವಿಧ ಸ್ಥಳಗಳಲ್ಲಿರುವ ಗ್ಯಾರೇಜ್, ಮೆಕ್ಯಾನಿಕ್ ಶಾಪ್, ಬೇಕರಿ, ಜೀನ್ಸ್ ಹೊಲಿಗೆ ಘಟಕಗಳ ಮೇಲೆ ಟಾಸ್ಕ್ ಪೋರ್ಸ್ ಸಮಿತಿ ಮೂಲಕ ಭೇಟಿ ನೀಡಿದ ಸಂದರ್ಭದಲ್ಲಿ ಮಕ್ಕಳು ಕೆಲಸ ಮಾಡುತ್ತಿರುವುದನ್ನು ಗಮನಿಸಲಾಯಿತು. ತಕ್ಷಣ ಅಲ್ಲಿ ಕೆಲಸ ನಿರ್ವಹಿಸುತ್ತಿದ್ದ 01 ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ವಶಕ್ಕೆ ಪಡೆದು ಮಕ್ಕಳ ಹೇಳಿಕೆಗಳನ್ನು ಸ್ಥಳದಲ್ಲಿಯೇ ಪಡೆದುಕೊಂಡು ಪೋಷಕರ ವಶಕ್ಕೆ ಒಪ್ಪಿಸಲಾಯಿತು.
ಇದೇ ವೇಳೆ ಎಲ್ಲಾ ಉದ್ದಿಮೆಗಳ ಮಾಲೀಕರಿಗೆ ಕರಪತ್ರ ಹಾಗೂ ಪೋಸ್ಟರ್‌ಗಳನ್ನು ನೀಡಿ ಜಾಗೃತಿ ಮೂಡಿಸಲಾಯಿತು.
ಈ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಬಳ್ಳಾರಿಯ 1ನೇ ವೃತ್ತದ ಕಾರ್ಮಿಕ ನಿರೀಕ್ಷಕ ರಮೇಶ್, 2ನೇ ವೃತ್ತದ ಕಾರ್ಮಿಕ ನಿರೀಕ್ಷಕ ಪರಶುರಾಮ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್, ಆರೋಗ್ಯ ಇಲಾಖೆಯ ಮುಸ್ತಾಕ್ ಅಹಮದ್, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಹೊನ್ನೂರಪ್ಪ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಕಾರ್ತಿಕ್ ಮತ್ತು ರೀಚ್ ಸಂಸ್ಥೆಯ ಸಂಯೋಜಿಕಿ ಲಕ್ಷಿö್ಮÃ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
-----------
--
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ