ಮಂಗಳವಾರ, ಮಾರ್ಚ್ 3, 2026

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಮಾ.03(ಕರ್ನಾಟಕ ವಾರ್ತೆ): ನಗರದ ಕೌಲ್ ಬಜಾರ್ ಪೊಲೀಸ್ ಠಾಣೆಯ ವ್ಯಾಪ್ತಿಯ ಭಟ್ಟಿ ಏರಿಯಾ ಕೌಲ್‌ಬಜಾರ್ ನಿವಾಸಿಯಾದ ಉಮೇಶ್ ಎನ್ನುವ 36 ವರ್ಷದ ವ್ಯಕ್ತಿ ಫೆ.26 ರಂದು ಲಾರಿ ಚಾಲಕ ಕೆಲಸ ನಿಮಿತ್ತ ಬೇರೆ ಊರಿಗೆ ಹೋಗಿ ಬರುತ್ತೇನೆ ಎಂದು ಹೇಳಿಹೋದವನು ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಬ್‌ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ. ವ್ಯಕ್ತಿಯ ಚಹರೆ: ಎತ್ತರ ಸುಮಾರು 5.2 ಅಡಿ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, ದುಂಡು ಮುಖ ಹೊಂದಿದ್ದು, ಮೂಗಿನ ಎಡಭಾಗದ ಹತ್ತಿರ ಕಣ್ಣಿನ ಬಳಿ ಹಳೆ ಗಾಯದ ಗುರುತು ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಖಾಕಿ ಬಣ್ಣದ ಅರ್ಧ ತೋಳಿನ ಅಂಗಿ ಮತ್ತು ಖಾಕಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731, 08392-244145, ಬಳ್ಳಾರಿ ಕಂಟ್ರೋಲ್ ರೂಂ ಸಂ.08392-258100, ಕೌಲ್‌ಬಜಾರ್ ಠಾಣೆ ಪಿಐ ಮೊ.9480803047, ಪಿಎಸ್‌ಐ ಮೊ.94808203084, 9480803085 ಗೆ ಕರೆಮಾಡಿ ಮಾಹಿತಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ