ಸೋಮವಾರ, ಮಾರ್ಚ್ 2, 2026

ಮಧ್ಯಪ್ರಾಚ್ಯ ದೇಶಗಳಲ್ಲಿನ ಬಿಕ್ಕಟ್ಟು – ಬಳ್ಳಾರಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

ಬಳ್ಳಾರಿ,ಮಾ.01(ಕರ್ನಾಟಕ ವಾರ್ತೆ): ​ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಈ ಕೆಳಗಿನ ಮಾಹಿತಿಯನ್ನು ಹಂಚಿಕೊಂಡಿದೆ: ​ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ ​ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು (Airspace) ಮಾರ್ಚ್ 2ರವರೆಗೆ ಮುಚ್ಚಲಾಗಿದೆ. ​ಈ ಅನಿರೀಕ್ಷಿತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ. ​ಜಿಲ್ಲಾಡಳಿತದ ಕ್ರಮಗಳು : ​ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ, ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 24x7 ಕಾರ್ಯನಿರ್ವಹಿಸುತ್ತಿವೆ. ​ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿಗಳು ನೀಡುವ ಸೂಚನೆಗಳನ್ನು ಜಿಲ್ಲಾಡಳಿತವು ನಿರಂತರವಾಗಿ ಗಮನಿಸುತ್ತಿದೆ. ​ಸಹಾಯವಾಣಿ ಸಂಖ್ಯೆಗಳಿಗೆ ​ಬಳ್ಳಾರಿ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಮತ್ತು ಸಹಾಯಕ್ಕಾಗಿ ಸಂಪರ್ಕಿಸಬಹುದು: ​ಬಳ್ಳಾರಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 08392-277100, 1077 ಟೋಲ್ ಫ್ರೀ ಸಂಖ್ಯೆ, ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ 080-22340676, 080-22253707, ಟೋಲ್ ಫ್ರೀ ಸಂಖ್ಯೆ: 1070 ಗೆ ಕರೆ ಮಾಡಿ ಮಾಹಿತಿ ಹಾಗೂ ಸಹಾಯ ಪಡೆಯಬಹುದು. ​ಸಾರ್ವಜನಿಕರಿಗೆ ಪ್ರಮುಖ ಸೂಚನೆಗಳು: ​ಮಧ್ಯಪ್ರಾಚ್ಯ ದೇಶಗಳಲ್ಲಿರುವ ಕರ್ನಾಟಕದ ನಿವಾಸಿಗಳು ಹಾಗೂ ಜಿಲ್ಲೆಯವರಿದ್ದಲ್ಲಿ ಅಲ್ಲಿನ ಸ್ಥಳೀಯ ಸರ್ಕಾರಗಳು ನೀಡುವ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ​ಸಂಕಷ್ಟದಲ್ಲಿರುವವರು ಆಯಾ ದೇಶದ ಭಾರತೀಯ ರಾಯಭಾರಿ ಕಚೇರಿಯ ಸಹಾಯವಾಣಿಗೆ ಕರೆ ಮಾಡಬೇಕು ಅಥವಾ 'ಸಾರಥಿ ಸಹಾಯತಾ' (Sarthi Sahayata) ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ​ವಿಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್.ಆರ್.ಆರ್.ಒ (FRRO) ಕಚೇರಿಯನ್ನು ಸಂಪರ್ಕಿಸಬೇಕೆಂದು ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್ ಅವರು ತಿಳಿಸಿದ್ದಾರೆ. ======

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ