ಮಂಗಳವಾರ, ಮಾರ್ಚ್ 10, 2026
ಸಮಾಜ ಕಲ್ಯಾಣ ಇಲಾಖೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬಳ್ಳಾರಿ,ಮಾ.10(ಕರ್ನಾಟಕ ವಾರ್ತೆ):
ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2026-27 ನೇ ಸಾಲಿಗೆ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳಿಂದ ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮಾ.15 ರ ವರೆಗೆ ವಿಸ್ತರಿಸಲಾಗಿದೆ.
ಏ.05 ರಂದು ಡಾ.ಬಾಬು ಜಗಜೀವನರಾಂ ಅವರ 119ನೇ ಹಾಗೂ ಏ.14 ರಂದು ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಮೇಲ್ಕಂಡ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಗಳನ್ನು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.08392-267932 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ