ಶನಿವಾರ, ಮಾರ್ಚ್ 7, 2026
ಸರ್ಕಾರಿ ಐಟಿಐ: ಖಾಸಗಿ ಅಭ್ಯರ್ಥಿಗಳಿಂದ ಪ್ರವೇಶಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಮಾ.07(ಕರ್ನಾಟಕ ವಾರ್ತೆ):
ಜಿಲ್ಲೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ (ಐಟಿಐ) 2026-27 ನೇ ಸಾಲಿಗೆ ಅರ್ಹ ಖಾಸಗಿ ಅಭ್ಯರ್ಥಿಗಳಿಂದ ಪ್ರವೇಶಾತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಡಿ.ಜಿ.ಟಿ ಮಾರ್ಗಸೂಚಿಗಳ ಪ್ರಕಾರ ಕನಿಷ್ಟ ಅರ್ಹತೆ ಅನುಭವ ಮತ್ತು ಇತರೆ ಅರ್ಹತಾ ಮಾನದಂಡಗಳನ್ನು ಪೂರೈಸುವ ಖಾಸಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
4.0 ಮತ್ತು ಅದಕ್ಕಿಂತ ಹೆಚ್ಚಿನ ಶ್ರೇಣಿಯನ್ನು (ಐಟಿಐ ಗ್ರೇಡಿಂಗ್) ಹೊಂದಿರುವ ಬಳ್ಳಾರಿ ಜಿಲ್ಲೆಯ ಸರ್ಕಾರಿ ಐ.ಟಿ.ಐ. ಗಳು ಡಿ.ಜಿ.ಟಿ ಮಾರ್ಗಸೂಚಿಗಳ ಪ್ರಕಾರ ಖಾಸಗಿ ಅಭ್ಯರ್ಥಿಗಳ ಪ್ರವೇಶಕ್ಕೆ ಅರ್ಹವಾಗಿರುತ್ತವೆ ಮತ್ತು ಸರ್ಕಾರಿ ಐ.ಟಿ.ಐ.ಗಳಲ್ಲಿ ಅರ್ಹ ಅಭ್ಯರ್ಥಿಯ ಪ್ರವೇಶವನ್ನು ಡಿ.ಜಿ.ಟಿ ಮಾರ್ಗಸೂಚಿಗಳ ಪ್ರಕಾರ ಕೈಗೊಳ್ಳಲಾಗುತ್ತದೆ.
ಖಾಸಗಿ ಅರ್ಭ್ಯರ್ಥಿಗಳು ಪ್ರವೇಶ ಪಡೆಯಲು ಮಾ.20 ಕೊನೆಯ ದಿನವಾಗಿರುತ್ತದೆ.
ಅರ್ಹ ಅಭ್ಯರ್ಥಿಗಳು ಅರ್ಭ್ಯಥಿಯ ಅರ್ಹತೆ, ಭಾಗವಹಿಸುವ ಐ.ಟಿ.ಐ ಗಳ ಅರ್ಹತೆ ಪ್ರವೇಶ ಪ್ರಕ್ರಿಯೆ ಮತ್ತು ಪರೀಕ್ಷೆಗಳು ಹಾಗು ಇತರೆ ವಿಷಯಗಳಿಗೆ ಸಂಬAಧಿಸಿದAತೆ ಹತ್ತಿರದ ಸರ್ಕಾರಿ ಐ.ಟಿ.ಐ ಕಾಲೇಜುಗಳಿಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ಮೊ.9448472538, 7975112905 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ