ಶನಿವಾರ, ಮಾರ್ಚ್ 7, 2026

ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಮಾ.07(ಕರ್ನಾಟಕ ವಾರ್ತೆ): ಸಿರುಗುಪ್ಪ ತಾಲ್ಲೂಕಿನ ಇಬ್ರಾಹಿಂಪುರ ಗ್ರಾಮದ ಚಾರ್‌ಮಿನಾರ್ ಡಾಬಾ ಎದುರುಗಡೆಯ ಸಿರುಗುಪ್ಪ-ಸಿಂಧನೂರು ರಸ್ತೆಯ ಪಕ್ಕದಲ್ಲಿನ ಗದ್ದೆಯೊಂದರಲ್ಲಿ ಸುಮಾರು 50-55 ವರ್ಷದ ಅನಾಮಧೇಯ ವ್ಯಕ್ತಿಯು ಯಾವುದೋ ಕ್ರಿಮಿನಾಷಕ ವಿಷ ಸೇವಿಸಿ ಫೆ.28 ರಂದು ಮೃತಪಟ್ಟಿರುವುದಾಗಿ ಕಂಡುಬAದಿದ್ದು, ವ್ಯಕ್ತಿಯ ವಾರಸುದಾರರ ಬಗ್ಗೆ ಯಾವುದೇ ಮಾಹಿತಿ ಇರುವುದಿಲ್ಲ. ಈ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕರು ವಾರುಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಸಬ್‌ಇನ್ಸ್ ಪಕ್ಟರ್ ಮನವಿ ಮಾಡಿದ್ದಾರೆ. ವ್ಯಕ್ತಿಯ ಚಹರೆ: ಎತ್ತರ 5.7 ಅಡಿ, ದುಂಡು ಮುಖ, ದೃಢವಾದ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದು, ಬಿಳಿ ಬಣ್ಣದ ಕಟ್ ಬನಿಯನ್, ಸಿಮೆಂಟ್ ಕಲರ್ ಒಳ ಉಡುಪು, ಆಕಾಶ್ ನೀಲಿ ಬಣ್ಣದ ಲುಂಗಿ ಧರಿಸಿರುತ್ತಾನೆ. ಮೃತ ವಾರುಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಸಿರುಗುಪ್ಪ ಪೊಲೀಸ್ ಠಾಣೆ ಪಿಎಸ್‌ಐ ದೂ.08396-220333, ಸಿ.ಪಿ.ಐ ದೂ.08396-220003, ಸಿರುಗುಪ್ಪ ಉಪ-ವಿಭಾಗ ಡಿ.ಎಸ್.ಪಿ ದೂ.08392276000, ಬಳ್ಳಾರಿ ಎಸ್.ಪಿ ಕಚೇರಿ ದೂ.08932258400, ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ