ಬುಧವಾರ, ಮಾರ್ಚ್ 4, 2026

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಮಾ.04(ಕರ್ನಾಟಕ ವಾರ್ತೆ): ನಗರದ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾರ್ಥ ಕಾಲೋನಿಯ ನಿವಾಸಿಯಾದ ಕೆ.ಶಿವಕುಮಾರ ಎನ್ನುವ 48 ವರ್ಷದ ವ್ಯಕ್ತಿಯು 2013ರ ಜೂ.12 ರಂದು ಮನೆಯಿಂದ ಹೋದವನು ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ. ವ್ಯಕ್ತಿಯ ಚಹರೆ: ಎತ್ತರ ಸುಮಾರು 5.3 ಅಡಿ, ಕಪ್ಪು ಮೈಬಣ್ಣ ಮತ್ತು ದುಂಡು ಮುಖ ಹೊಂದಿದ್ದು, ಎಡಗೈ ಮೆಲೆ ಹಳೆ ಗಾಯದ ಗುರುತು ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ತುಂಬು ತೋಳಿನ ಶರ್ಟ್ ಮತ್ತು ನೀಲಿ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಭಾಷೆಗಳನ್ನು ಮಾತನಾಡುತ್ತಾನೆ. ಕಾಣೆಯಾದ ವ್ಯಕ್ತಿ ಬಗ್ಗೆ ಮಾಹಿತಿ ಸಿಕ್ಕಲ್ಲಿ ಗಾಂಧಿನಗರ ಪೊಲೀಸ್ ಠಾಣೆಯ ದೂ. 08392272192, ಪಿಎಸ್‌ಐ ಮೊ.9480803082, ಪಿ.ಐ ಮೊ.9480803046, ಬಳ್ಳಾರಿ ಕಂಟ್ರೋಲ್ ರೂಂ ಸಂ.08392-258100 ಗೆ ಕರೆಮಾಡಿ ಮಾಹಿತಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ