ಮಂಗಳವಾರ, ಮಾರ್ಚ್ 31, 2026

ಸುತ್ತೂರು: ಜೆ.ಎಸ್.ಎಸ್ ಉಚಿತ ವಸತಿ ಶಾಲೆಗೆ ಅರ್ಜಿ ಆಹ್ವಾನ

ಬಳ್ಳಾರಿ,ಮಾ.31(ಕರ್ನಾಟಕ ವಾರ್ತೆ): ಮೈಸೂರಿನ ಸುತ್ತೂರು ಕ್ಷೇತ್ರದ ಜೆ.ಎಸ್.ಎಸ್ ಉಚಿತ ವಸತಿ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಭಾಗದ ಬಡ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ, 1 ರಿಂದ 8ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಪೋಷಕರು ಶಾಲೆಯ ಅಧಿಕೃತ ವೆಬ್‌ಸೈಟ್‌ಗಳಾದ www.jssschoolsuttur.org ಅಥವಾ www.jssonline.org ಮೂಲಕ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಈ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಜೊತೆಗೆ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ. ಏಪ್ರಿಲ್ 2 ರಿಂದ ಅರ್ಜಿ ವಿತರಣೆ ಪ್ರಾರಂಭ, ಮೇ 16 ಅರ್ಜಿ ಸಲ್ಲಿಸಲು ಕೊನೆಯ ದಿನ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ “ಮುಖ್ಯೋಪಾಧ್ಯಾಯರು, ಜಿ.ಎಸ್.ಎಸ್. ಸಂಸ್ಥೆಗಳು, ಸುತ್ತೂರು, ನಂಜನಗೂಡು ತಾಲ್ಲೂಕು, ಮೈಸೂರು ಜಿಲ್ಲೆ – 571129” ಈ ವಿಳಾಸಕ್ಕೆ ನೇರವಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು. ಅರ್ಜಿಯ ಜೊತೆಗೆ ವಿದ್ಯಾರ್ಥಿಯ ಹಿಂದಿನ ತರಗತಿಯ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ ಹಾಗೂ ಆಧಾರ್ ಕಾರ್ಡ್ ಪ್ರತಿಗಳನ್ನು ಲಗತ್ತಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.7411486938, ದೂ.08221-232332 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ