ಮಂಗಳವಾರ, ಮಾರ್ಚ್ 10, 2026
ಸಿರುಗುಪ್ಪ ನಗರಸಭೆ: ಅರ್ಜಿ ಆಹ್ವಾನ
ಬಳ್ಳಾರಿ,ಮಾ.10(ಕರ್ನಾಟಕ ವಾರ್ತೆ):
ಸಿರುಗುಪ್ಪ ನಗರಸಭೆ ವತಿಯಿಂದ 2021-22ನೇ ಸಾಲಿನ ನಗರೋತ್ಥಾನ ಹಂತ-4 ರ ಯೋಜನೆಯಡಿ ಶೇ.05 ರ ಅನುದಾನದಲ್ಲಿ ವಿಶೇಷಚೇತನ ವ್ಯಕ್ತಿಗಳಿಗೆ ವ್ಯಾಪಾರ ನಡೆಸುವುದಕ್ಕಾಗಿ ರೆಡಿಮೆಡ್ ಟಿನ್‌ಶೆಡ್ ವಾಣಿಜ್ಯ ಮಳಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಿರುಗುಪ್ಪ ನಗರಸಭೆ ವ್ಯಾಪ್ತಿಯಲ್ಲಿ 19 ಜನ ವಿಶೇಷಚೇತನರಿದ್ದು, ಅವರ ಜೀವನೋಪಾಯಕ್ಕಾಗಿ ಸ್ವಯಂ ವ್ಯಾಪಾರ ಮಾಡಿಕೊಳ್ಳಲು ಈ ಸೌಲಭ್ಯ ಕಲ್ಪಿಸಲಾಗುತ್ತಿದ್ದು, ಅರ್ಹರು ಮಾ.16 ರೊಳಗಾಗಿ ಅರ್ಜಿ ಸಿರುಗುಪ್ಪ ನಗರಸಭೆ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
*ಬೇಕಾದ ದಾಖಲೆ:*
ಇತ್ತೀಚಿನ 2-ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಚಾಲ್ತಿ ವರ್ಷದ ಆಸ್ತಿ ತೆರಿಗೆ ಪ್ರತಿ, ಚಾಲ್ತಿ ವರ್ಷದ ನಮೂನೆ-3 ಪ್ರತಿ, ಬ್ಯಾಂಕ್ ಪಾಸ್‌ಬುಕ್ ಪ್ರತಿ, ಅಂಗವಿಕಲತೆಯ ಬಗ್ಗೆ ವೈದ್ಯಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರದ ಪ್ರತಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಿರುಗುಪ್ಪ ನಗರಸಭೆ ಕಾರ್ಯಾಲಯಕ್ಕೆ ಸಂಪರ್ಕಿಸಬಹುದು ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ