ಸೋಮವಾರ, ಮಾರ್ಚ್ 16, 2026
ಕಾಣೆಯಾದ ಬಾಲಕನ ಪತ್ತೆಗೆ ಮನವಿ
ಬಳ್ಳಾರಿ,ಮಾ.16(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ 2 ನೇ ವಾರ್ಡ್ ನ ಮಸೀದಿ ಹಿಂದೆ ಸಂಗನಕಲ್ಲು ಗ್ರಾಮದ ನಿವಾಸಿ ಗಗನ್ ದೀಪ್ ಎನ್ನುವ 16 ವರ್ಷದ ಬಾಲಕ ಮಾ.15 ರಂದು ಮನೆಯಿಂದ ಹೋದವನು ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.
ಬಾಲಕನ ಚಹರೆ:
ಎತ್ತರ 4.5 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ತಿಳಿ ಹಸಿರು ಬಣ್ಣದ ಅರ್ಧ ತೋಳಿನ ಟಿ-ಶರ್ಟ್ ಹಾಗೂ ಕಪ್ಪು ಬಣ್ಣದ ನೈಟ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಹಿಂದಿ, ಇಂಗ್ಲೀಷ್ ಭಾಷೆ ಮಾತನಾಡುತ್ತಾನೆ.
ಬಾಲಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ದೂ.083922764661, 9480803049, ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
======
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ