ಬುಧವಾರ, ಮಾರ್ಚ್ 4, 2026
ಪ್ರವಾಸೋದ್ಯಮ ಇಲಾಖೆ: ಉದ್ಯಮಶೀಲತೆ ತರಬೇತಿ, ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಮಾ.04(ಕರ್ನಾಟಕ ವಾರ್ತೆ):
ಪ್ರವಾಸೋದ್ಯಮ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ-ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಉದ್ಯಮಶೀಲತೆ ತರಬೇತಿ ಪಡೆಯಲು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕನಿಷ್ಠ ವಿದ್ಯಾರ್ಹತೆ 10 ನೇ ತರಗತಿ ಉತ್ತೀರ್ಣರಾಗಿರಬೇಕು. ವಯಸ್ಸು 20 ರಿಂದ 55 ವರ್ಷದೊಳಗಿರಬೇಕು. 1 ತಿಂಗಳ ತರಬೇತಿ ಕಾಲಾವಧಿಯಾಗಿದು, ಪರಿಶಿಷ್ಟ ಜಾತಿ-04 ಮತ್ತು ಪರಿಶಿಷ್ಟ ಪಂಗಡ-03 ಗುರಿ ನಿಗದಿಪಡಿಸಲಾಗಿದೆ.
*ಘಟಕ ವೆಚ್ಚ:*
ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಇಲಾಖೆಯ ಸಹಾಯಧನ ಘಟಕ ವೆಚ್ಚದಲ್ಲಿ ಶೇ.70 ರಷ್ಟು ಗರಿಷ್ಟ ರೂ.05 ಲಕ್ಷ ನೀಡಲಾಗುತ್ತದೆ. ಫಲಾನುಭವಿಯ ವಂತಿಗೆ - ವಾಹನದ ಒಟ್ಟು ವೆಚ್ಚದ ಶೇ.05 ರಷ್ಟು. ಹಣಕಾಸು ಸಂಸ್ಥೆಗಳು, ಬ್ಯಾಂಕ್ ಸಾಲ - ವಾಹನದ ಒಟ್ಟು ವೆಚ್ಚದಲ್ಲಿ ಉಳಿದ ಮೊತ್ತ.
*ಅರ್ಹತೆ:*
ಅರ್ಜಿದಾರರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಅಭ್ಯರ್ಥಿಗಳು ಲಘು ವಾಹನ ಚಾಲನಾ ಪರವಾನಗಿ ಪಡೆದಿರಬೇಕು. ನಗರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ ರೂ.02 ಲಕ್ಷ ಮೀರಿರಬಾರದು. ಗ್ರಾಮಾಂತರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ ರೂ.1.50 ಲಕ್ಷ ಮೀರಿರಬಾರದು. ಬಳ್ಳಾರಿ ಜಿಲ್ಲೆಯ ನಿವಾಸಿಯಾಗಿರಬೇಕು. ಅರ್ಜಿದಾರನು ಯಾವುದೇ ಸರ್ಕಾರಿ ಇಲಾಖೆಯಲ್ಲಿ ಅಥವಾ ನಿಗಮ ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರಬಾರದು.
*ಬೇಕಾದ ದಾಖಲೆ:*
ಪ್ರಕಟಣೆಗೊಂಡ 20 ದಿನಗಳ ಒಳಗಾಗಿ ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಇತ್ತೀಚಿನ ಭಾವಚಿತ್ರದೊಂದಿಗೆ ದ್ವಿಪ್ರÀತಿಯಲ್ಲಿ ಸಲ್ಲಿಸಬೇಕು. ಆಧಾರ್ ಕಾರ್ಡ್ ಪ್ರತಿ ಕಡ್ಡಾಯ. ಪ.ಜಾತಿ ಮತ್ತು ಪ.ಪಂಗಡಕ್ಕೆ ಸೇರಿರುವ ಬಗ್ಗೆ ತಹಶೀಲ್ದಾರರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದ ಪ್ರತಿ ಹಾಗೂ ಆದಾಯ ಪ್ರಮಾಣ ಪತ್ರದ ಪ್ರತಿ ಸಲ್ಲಿಸಬೇಕು.
ಖಾಯಂ ಲಘು ವಾಹನ ಚಾಲನಾ ಪರವಾನಗಿ ಪತ್ರದ ಪ್ರತಿ ಸಲ್ಲಿಸಬೇಕು. ವಿದ್ಯಾರ್ಹತೆಯ ಬಗ್ಗೆ ಕನಿಷ್ಠ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರುವ ಅಂಕಪಟ್ಟಿಯ ಪ್ರತಿ. ಅರ್ಜಿದಾರನು ಯಾವುದೇ ಸರ್ಕಾರಿ ಇಲಾಖೆ, ನಿಗಮ, ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರದ ಬಗ್ಗೆ ಸ್ವಯಂ ಪ್ರಮಾಣೀಕರಿಸಿ, ರೂ.100/-ರ ಬೆಲೆಯ ಛಾಪಾ ಕಾಗದ (ಆಫಿಡೇವಿಟ್)ದಲ್ಲಿ ನಮೂನೆ-3ರಲ್ಲಿ ಪ್ರಮಾಣ ಪತ್ರ ಸಲ್ಲಿಸುವುದು.
ಅರ್ಜಿದಾರರ ವಾಸಸ್ಥಳ ದೃಢೀಕರಣದ ಜೆರಾಕ್ಸ್ ಪ್ರತಿ ಸಲ್ಲಿಸುವುದು. ಮೇಲಿನ ಎಲ್ಲಾ ದಾಖಲಾತಿಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಸತಕ್ಕದ್ದು.
ಅರ್ಜಿಗಳನ್ನು ಉಪ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಲೋಟಸ್ ಮಹಲ್ ಹತ್ತಿರ, ಕಮಲಾಪುರ, ವಿಜಯನಗರ ಜಿಲ್ಲೆ, ಇಲ್ಲಿ ಪಡೆದುಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮಾ.24 ರೊಳಗೆ ಮರಳಿ ಇದೇ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆಯ ಹಿರಿಯ ಪ್ರವಾಸಿ ಪ್ರವರ್ತಕ ಶ್ರೀಹರಿ ಮಾಸನೂರು (ಮೊ.7892722443) ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಸಮಾಜ ಕಲ್ಯಾಣ ಇಲಾಖೆ: 6ನೇ ತರಗತಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಮಾ.04(ಕರ್ನಾಟಕ ವಾರ್ತೆ):
ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2026-27 ನೇ ಸಾಲಿಗೆ 5ನೇ ತರಗತಿಗಳಲ್ಲಿ ಉತ್ತೀರ್ಣರಾಗುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ಕಲ್ಪಿಸಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಏ.15 ರಿಂದ ಆರಂಭ. ಅರ್ಜಿ ಸಲ್ಲಿಸಲು ಮೇ 04 ಕೊನೆಯ ದಿನ. ಮೇ 12 ರಂದು ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ. ಅರ್ಜಿ ಸಲ್ಲಿಸಲು https://swd.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ಮೊ.9480843023 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ