ಸೋಮವಾರ, ಮಾರ್ಚ್ 23, 2026

ಜಯಂತಿ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಹೇಳಿಕೆ ಬಾಬೂಜೀ, ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯೋತ್ಸವ ಅದ್ದೂರಿ ಆಚರಣೆಗೆ ಜಿಲ್ಲಾಡಳಿತ ಸನ್ನದ್ಧ

ಬಳ್ಳಾರಿ,ಮಾ.23(ಕರ್ನಾಟಕ ವಾರ್ತೆ): ಹಸಿರು ಕ್ರಾಂತಿ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಂ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಈ ಇಬ್ಬರು ಮಹನೀಯರ ಜಯಂತ್ಯೋತ್ಸವ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ಆಚರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು. ನಗರದ ನೂತನ ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ಡಾ.ಬಾಬು ಜಗಜೀವನ್ ರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿ ಆಚರಣೆ ಕುರಿತು ಸೋಮವಾರ ಏರ್ಪಡಿಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾ ಕೇಂದ್ರದಲ್ಲಿ ಏ.05 ರಂದು ಭಾರತದ ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ 119ನೇ ಜಯಂತ್ಯೋತ್ಸವ ಮತ್ತು ಏ.14 ರಂದು ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜಯಂತ್ಯೋತ್ಸವ ಕಾರ್ಯಕ್ರಮಗಳನ್ನು ಈ ಬಾರಿ ಜಿಲ್ಲಾಡಳಿತದಿಂದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಅದ್ದೂರಿ ಆಚರಿಸಲಾಗುವುದು. ಇದಕ್ಕೆ ಬೇಕಾದ ಸಕಲ-ಸಿದ್ಧತೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ಬಾರಿ ವಿಜೃಂಭಣೆಯಿAದ ಆಚರಿಸಲು ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗುವುದು. ಆಯಾ ಸಮಿತಿಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಜಯಂತಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಜಯಂತಿ ದಿನದಂದು ಸರ್ಕಾರಿ ನೌಕರರು, ಅಧಿಕಾರಿ- ಸಿಬ್ಬಂದಿ ವರ್ಗ ಕಡ್ಡಾಯವಾಗಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು. ಶಿಷ್ಟಾಚಾರದನ್ವಯ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಎಲ್ಲಾ ಗಣ್ಯರಿಗೆ ಆಹ್ವಾನಿಸಲಾಗುವುದು. ಜಿಲ್ಲಾ ಕೇಂದ್ರದ ಪ್ರಮುಖ ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಲಂಕಾರ ಮಾಡಲಾಗುವುದು. ಡಾ.ಬಾಬು ಜಗಜೀವನ್ ರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಯುವ ಸಮುದಾಯ ಮತ್ತು ಮಕ್ಕಳಿಗೆ ತಲುಪಿಸಲು ವಿಶೇಷ ಭಾಷಣಕಾರರಿಂದ ಉಪನ್ಯಾಸ ಆಯೋಜಿಸಲಾಗುವುದು. ಮಹನೀಯರ ಜಯಂತೋತ್ಸವ ಕಾರ್ಯಕ್ರಮಗಳ ಅಂಗವಾಗಿ ಶಾಲಾ-ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗುವುದು ಎಂದರು. ಜಯAತಿ ಕಾರ್ಯಕ್ರಮ ದಿನದಂದು ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನೊAಡು ನಡೆಯುವ ಮೆರವಣಿಗೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಸಹಕಾರದಲ್ಲಿ ಸ್ತಬ್ಧಚಿತ್ರಗಳನ್ನು ರೂಪಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಯವರು, ವೇದಿಕೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಅಭಿನಂದಿಸಲು ಸನ್ಮಾನ ಕಾರ್ಯಕ್ರಮ ಹಾಗೂ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು ಎಂದು ತಿಳಿಸಿದರು. *ಡಾ.ಬಾಬು ಜಗನ್‌ಜೀವನ್ ರಾಂ ಜಯಂತಿ:* ಏ.05 ರಂದು ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರು ಕ್ರಾಂತಿ ಹರಿಕಾರರಾದ ಡಾ.ಬಾಬು ಜಗಜೀವನ ರಾಂ ಅವರ ಜಯಂತಿ ಕಾರ್ಯಕ್ರಮವನ್ನು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಏರ್ಪಡಿಸಲಾಗುವುದು. ಅಂದು ಬೆಳಿಗ್ಗೆ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯು ಮುನಿಸಿಪಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಿಗಿಚೆನ್ನಪ್ಪ ವೃತ್ತ-ಬೆಂಗಳೂರು ರಸ್ತೆ-ಬ್ರೂಸ್ ಪೇಟೆ ಪೊಲೀಸ್ ಠಾಣೆ ಮುಂಭಾಗ-ಜೈನ್ ಮಾರ್ಕೆಟ್ ರಸ್ತೆ-ಹೆಚ್.ಆರ್.ಗವಿಯಪ್ಪ ವೃತ್ತದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದವರೆಗೆ ನಡೆಯಲಿದೆ. *ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ:* ಏ.14 ರಂದು ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗುವುದು. ಅಂದು ಬೆಳಿಗ್ಗೆ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಆರಂಭಗೊAಡು ಹೆಚ್.ಆರ್.ಗವಿಯಪ್ಪ ವೃತ್ತ-ಜೈನ್ ಮಾರ್ಕೆಟ್ ರಸ್ತೆ-ಬ್ರೂಸ್‌ಪೇಟೆ ಪೊಲೀಸ್ ಠಾಣೆ ಮುಂಭಾಗ-ಬೆAಗಳೂರು ರಸ್ತೆ-ಗಡಿಗಿ ಚೆನ್ನಪ್ಪ ವೃತ್ತದ ಮಾರ್ಗವಾಗಿ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದ ವರೆಗೆ ನಡೆಯಲಿದೆ. ಮೆರವಣಿಗೆಯಲ್ಲಿ ಎಲ್ಲಾ ಸಂಘ-ಸAಸ್ಥೆಗಳ ಮುಖಂಡರು, ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಾರ್ವಜನಿಕರು ಒಳಗೊಂಡು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು. ಮುಖಂಡರು ಮಾತನಾಡಿ, ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ಇರುವ ಸಂವಿಧಾನ ಉದ್ಯಾನವನ ನಿರ್ವಹಣೆಗೆ ಕ್ರಮವಹಿಸಬೇಕು. ನಗರದ ಪ್ರಮುಖ ವೃತ್ತಗಳಲ್ಲಿ ಒಂದನ್ನು ಗುರುತಿಸಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಸ್ಥಾಪನೆಗೆ ಕ್ರಮವಹಿಸಬೇಕು ಎಂದು ಸಭೆಯಲ್ಲಿ ಪ್ರಸ್ತಾಪಿಸಿದಾಗ, ಜಿಲ್ಲಾಧಿಕಾರಿಯವರು ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು. ಪ್ರತಿ ಮೂರು ತಿಂಗಳಿಗೊಮ್ಮೆ ನಿಯಮಿತವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು-ಕೊರತೆ ಸಭೆ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಇದೇ ವೇಳೆ ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದಿನ್ ಸೇರಿದಂತೆ ಮಹಾನಗರ ಪಾಲಿಕೆಯ ಸದಸ್ಯರು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಮುಖಂಡರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ