ಶುಕ್ರವಾರ, ಮಾರ್ಚ್ 27, 2026
ಒಂದು ದಿನದ ರಾಷ್ಟಿçÃಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ರಂಗನಿರ್ದೇಶಕ ಡಾ.ಸಿ.ಬಸಲಿಂಗಯ್ಯ ಅಭಿಪ್ರಾಯ | ರಂಗಭೂಮಿ ಕಲೆ ಆಳವಾದ ಪ್ರಭಾವ ಬೀರುವಂತಹದ್ದು
ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ):
ರಂಗಭೂಮಿ ಒಂದು ಮುಕ್ತ ವಿಶ್ವವಿದ್ಯಾಲಯವಾಗಿದ್ದು, ರಂಗಭೂಮಿಗೆ ಅಳಿವಿಲ್ಲ. ಅದು ಕಲೆಗಳ ಸಾರವನ್ನು ಹೊಂದಿದೆ. ಜೀವನದ ಮೇಲೆ ಆಳವಾದ ಪ್ರಭಾವ ಬೀರುವಂತಹದ್ದಾಗಿದೆ ಎಂದು ಮೈಸೂರಿನ ರಂಗನಿರ್ದೇಶಕ ಡಾ.ಸಿ.ಬಸಲಿಂಗಯ್ಯ ಅವರು ಹೇಳಿದರು.
ಶುಕ್ರವಾರ ವಿವಿಯ ಡಾ.ಬಿ.ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ವಿವಿಯ ಪ್ರದರ್ಶನ ಕಲೆ ಮತ್ತು ನಾಟಕ ವಿಭಾಗದ ವತಿಯಿಂದ ವಿಶ್ವ ರಂಗಭೂಮಿ ದಿನಾಚರಣೆ-2026 ಪ್ರಯುಕ್ತ ಆಯೋಜಿಸಿದ್ದ “ಕೃತಕ ಬುದ್ಧಿಮತ್ತೆಯ ಯುಗದಲ್ಲಿ ರಂಗಭೂಮಿಯ ಉಳಿವಿನ ಸವಾಲುಗಳು” ಒಂದು ದಿನದ ರಾಷ್ಟಿçÃಯ ವಿಚಾರ ಸಂಕೀರ್ಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವದೆಲ್ಲೆಡೆ ಶಾಂತಿ ಬಯಸುವುದು ರಂಗಭೂಮಿಯ ಮುಖ್ಯ ಧ್ಯೇಯವಾಗಿದೆ ಎಂದು ತಿಳಿಸಿದರು.
ಜೀವನದಲ್ಲಿ ಫೇಲಾದವರೆ ಮಹಾನ್ ವ್ಯಕ್ತಿಗಳಾಗಿದ್ದಾರೆ. ಪ್ರಶ್ನಿಸದೆ ಯಾವುದನ್ನು ಒಪ್ಪಿಕೊಳ್ಳಬೇಡಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಆದಿ ಕವಿ ಪಂಪ, ಅಲ್ಲಮಪ್ರಭು, ಬುದ್ಧ, ರಾಮ- ಸೀತೆ, ಅಕ್ಕಮಹಾದೇವಿ, ಬಸವಣ್ಣನವರ ಕುರಿತಾದ ವಿಚಾರಗಳನ್ನು ವ್ಯಕ್ತಪಡಿಸಿದರು.
ಧಾರವಾಡದ ಹಿರಿಯ ರಂಗಕರ್ಮಿ ಡಾ.ಶಶಿಧರ್ ನರೇಂದ್ರ ಅವರು ದಿಕ್ಸೂಚಿ ಭಾಷಣಕಾರರಾಗಿ ಮಾತನಾಡಿ, ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನ ಬಳಕೆಗೆ ಪ್ರತಿಯೊಂದಕ್ಕೆ ಆಜ್ಞೆ ನೀಡಬೇಕಾಗುತ್ತದೆ. ಕೃತಕ ಬುದ್ಧಿಮತ್ತೆಯ ಯುಗದಲ್ಲಿ ರಂಗ ಪರಂಪರೆಯನ್ನು ಆಧುನಿಕತೆಗೆ ಒಳಪಡಿಸುವ ಕ್ರಮವಾಗಿದೆ ಎಂದು ಹೇಳಿದರು.
ಎಐ ಬರವಣಿಗೆಯ ಹಕ್ಕುಗಳಿಗೆ ಸಾಮ್ಯತೆ ಕೊಡುವುದು ಪ್ರಶ್ನೆಯಾಗಿ ಉಳಿದಿದೆ. ಎಐ ತಂತ್ರಜ್ಞಾನ ಬಳಸುವಲ್ಲಿ ಉಪಾಯ ಅಪಾಯಗಳೆರಡು ಇವೆ ಎಂದು ತಿಳಿಸಿದ ಅವರು, ‘ಗೌಹರ್ ಜಾನ್’ ಕೃತಿಯನ್ನು ಎಐ ನಿಂದ ಭಾಷಾಂತರವಾಗಿದ್ದನ್ನು ಇದೇ ಸಂದರ್ಭದಲ್ಲಿ ಸ್ಮರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವಿ ಕುಲಪತಿ ಪ್ರೊ.ಎಂ ಮುನಿರಾಜು ಅವರು ಮಾತನಾಡಿ, ಒತ್ತಡದ ಜೀವನದಲ್ಲಿ ನಾಟಕಗಳು ತುಂಬಾ ಪ್ರಭಾವ ಬೀರುತ್ತವೆ. ಕಲಾವಿದರು ಹಲವಾರು ವರ್ಷಗಳ ಶ್ರಮದಿಂದ ಪ್ರತಿಭೆಗೆ ಪಾತ್ರರಾಗುತ್ತಾರೆ. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳನ್ನು ಹೊರತುಪಡಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಒತ್ತಡವನ್ನು ಹೋಗಲಾಡಿಸಬಹುದು ಎಂದು ಒತ್ತಿ ಹೇಳಿದರು.
ಈ ಸಂದರ್ಭದಲ್ಲಿ ಸಂಶೋಧನಾ ಲೇಖನಗಳ ಸಾರಾಂಶಗಳ ಪುಸ್ತಕವನ್ನು ಗಣ್ಯರು ಬಿಡುಗಡೆಗೊಳಿಸಿದರು. ವಿಶ್ವ ರಂಗಭೂಮಿ ಸಂದೇಶವನ್ನು ಡಾ.ಅಣ್ಣಾಜಿ ಕೃಷ್ಣಾರೆಡ್ಡಿ ಓದಿದರು.
ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಎನ್.ಎಂ ಸಾಲಿ, ಕಲಾ ನಿಕಾಯದ ಡೀನ್ ಪ್ರೊ.ರಾಬರ್ಟ್ ಜೋಸ್, ಕಿರುತೆರೆ ಮತ್ತು ಹಿರಿತರೆ ಕಲಾವಿದರಾದ ಲಕ್ಷಿö್ಮÃ ನಾಡಗೌಡ್ ವೇದಿಕೆಯಲ್ಲಿದ್ದರು.
ಒಂದು ದಿನದ ರಾಷ್ಟಿçÃಯ ವಿಚಾರ ಸಂಕಿರಣದಲ್ಲಿ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಸಂಶೋಧನಾರ್ಥಿಗಳು ಸೇರಿದಂತೆ 100ಕ್ಕೂ ಹೆಚ್ಚು ಪ್ರತಿನಿಧಿಗಳು ಹಾಜರಿದ್ದರು.
ವಿಚಾರ ಸಂಕಿರಣದ ಸಂಚಾಲಕ ಪ್ರೊ.ಎನ್.ಶಾಂತನಾಯ್ಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ಡಾ.ಕೆ.ಎಸ್ ಶಿವಪ್ರಕಾಶ ನಿರೂಪಿಸಿದರು. ಕನ್ನಡ ಅಧ್ಯಯನ ವಿಭಾಗದ ಸಂಯೋಜಕ ಡಾ.ಸಂತೋಷ ಜಿ.ಕೆ ವಂದಿಸಿದರು.
ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ, ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ