ಗುರುವಾರ, ಏಪ್ರಿಲ್ 30, 2026

ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಬಾಲಕಿಯರ ವಸತಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಉಚಿತ ದಾಖಲಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಏ.30(ಕರ್ನಾಟಕ ವಾರ್ತೆ): ನಗರದ ಹೊಸಪೇಟೆ ರಸ್ತೆಯಲ್ಲಿರುವ ಬಿ.ಐ.ಟಿ.ಎಂ. ಎಂಜಿನಿಯರಿAಗ್ ಕಾಲೇಜ್ ಸಮೀಪದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು (ಅಲ್ಲೀಪುರ) ಇಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳ ದಾಖಲಾತಿಗಾಗಿ ಅರ್ಹ ವಿದ್ಯಾರ್ಥಿನಿಯರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಥಮ ಪಿಯುಸಿ ವಿಜ್ಞಾನ ವಿಭಾಗಕ್ಕೆ 60 ಮತ್ತು ವಾಣಿಜ್ಯ ವಿಭಾಗಕ್ಕೆ 60 ಸೀಟ್‌ಗಳು ಲಭ್ಯವಿದ್ದು, ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾದ ಬಾಲಕಿಯರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲ ನಾಗಯ್ಯ ಹಿರೇಮಠ ಅವರು ತಿಳಿಸಿದ್ದಾರೆ. ಶೇ. 75ರಷ್ಟು ಸೀಟುಗಳು ಅಲ್ಪಸಂಖ್ಯಾತರಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ) ಮೀಸಲಾಗಿದ್ದು, ಉಳಿದ ಶೇ. 25ರಷ್ಟು ಸೀಟುಗಳನ್ನು ಎಸ್.ಸಿ, ಎಸ್.ಟಿ ಮತ್ತು ಓಬಿಸಿ ವಿದ್ಯಾರ್ಥಿನಿಯರಿಗೆ ಹಂಚಿಕೆ ಮಾಡಲಾಗುತ್ತದೆ. (ವಿಶೇಷ ಚೇತನರಿಗೆ ಶೇ. 4ರಷ್ಟು ಮೀಸಲಾತಿ ಇರಲಿದೆ). ಅರ್ಜಿ ಸಲ್ಲಿಸಲು http://dom.karnataka.gov.in ಜಾಲತಾಣಕ್ಕೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಮೇ 16 ಕೊನೆಯ ದಿನವಾಗಿದೆ. *ಅರ್ಹತೆ ಮತ್ತು ದಾಖಲೆಗಳು:* ಕರ್ನಾಟಕ ರಾಜ್ಯದ ಅಭ್ಯರ್ಥಿಯಾಗಿದ್ದು, ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷಗಳ ಒಳಗಿರಬೇಕು. ಅರ್ಜಿ ಸಲ್ಲಿಸಲು ಅಂಕಪಟ್ಟಿ, ಹಾಲ್ ಟಿಕೆಟ್ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದ ಅಗತ್ಯವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಬಾಲಕಿಯರ ವಸತಿ ಪದವಿ ಪೂರ್ವ ಕಾಲೇಜು, ಅಲ್ಲೀಪುರ, ಬಳ್ಳಾರಿ ಅಥವಾ ಮೊ.7349008289, 6360549014, 9901739242, 9886286814, 8971217895 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ರಾಷ್ಟಿçÃಯ ಮಾನವ ಹಕ್ಕುಗಳ ಆಯೋಗ ಭಾರತ ಕಿರುಚಿತ್ರ ಸ್ಪರ್ಧೆ-2026

ಬಳ್ಳಾರಿ,ಏ.30(ಕರ್ನಾಟಕ ವಾರ್ತೆ): ನವದೆಹಲಿಯ ಭಾರತದ ರಾಷ್ಟಿçÃಯ ಮಾನವ ಹಕ್ಕುಗಳ ಆಯೋಗ 2015 ರಿಂದ ಮಾನವ ಹಕ್ಕುಗಳ ಕುರಿತು ಕಿರುಚಿತ್ರ ಸ್ಪರ್ಧೆಯನ್ನು ನಡೆಸಿಕೊಂಡು ಬರುತ್ತಿದೆ. 2026 ರಲ್ಲಿ ಸ್ಪರ್ಧೆಯ 12 ನೇ ಆವೃತ್ತಿಗೆ, ದೇಶದ ನಾಗರಿಕರಿಂದ ಆನ್‌ಲೈನ್‌ನಲ್ಲಿ ಪ್ರವೇಶಗಳನ್ನು ಆಹ್ವಾನಿಸಿದೆ. ಮೊದಲ, ಎರಡನೇ ಮತ್ತು ಮೂರನೇ ಅತ್ಯುತ್ತಮ ಚಿತ್ರಕ್ಕೆ ಬಹುಮಾನದ ಮೊತ್ತವು ಕ್ರಮವಾಗಿ ರೂ. 2 ಲಕ್ಷ, ರೂ. 1 ಲಕ್ಷ 50 ಸಾವಿರ ಮತ್ತು ರೂ. 1 ಲಕ್ಷ ಆಗಿರುತ್ತದೆ. ಆಯೋಗವು ಮೂರು ನಗದು ಪ್ರಶಸ್ತಿಗಳು, ಪ್ರಮಾಣಪತ್ರಗಳು ಮತ್ತು ಟ್ರೋಫಿಗಳ ಜೊತೆಗೆ, ತೀರ್ಪುಗಾರರು ಶಿಫಾರಸು ಮಾಡಿದ ಗರಿಷ್ಠ ನಾಲ್ಕು (4) ಚಿತ್ರಗಳಿಗೆ ತಲಾ ರೂ. 50 ಸಾವಿರ ನಗದು ಬಹುಮಾನದೊಂದಿಗೆ ‘ಪ್ರಮಾಣ ಪತ್ರ'ವನ್ನು ನೀಡಲಾಗುವುದು. ಕಿರುಚಿತ್ರಗಳು ಹಿಂದಿ ಅಥವಾ ಯಾವುದೇ ಭಾರತೀಯ ಭಾಷೆಯಲ್ಲಿರಬಹುದು, ಇಂಗ್ಲೀಷ್ ನಲ್ಲಿ ಉಪಶೀರ್ಷಿಕೆಗಳನ್ನು ಹಾಕಿರಬೇಕು, ಕಿರುಚಿತ್ರದ ಅವಧಿ ಕನಿಷ್ಠ 3 ನಿಮಿಷಗಳು ಮತ್ತು ಗರಿಷ್ಠ 10 ನಿಮಿಷಗಳು. ಪ್ರವೇಶಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ 30 ಜೂನ್ 2026. ಗೂಗಲ್ ಡ್ರೆöÊವ್ ಬಳಸಿ nhrcshortfilm@gmail.com ಗೆ ಆನ್‌ಲೈನ್‌ನಲ್ಲಿ ಕಿರುಚಿತ್ರಗಳನ್ನು ಸ್ಪರ್ಧೆಗೆ ಕಳುಹಿಸಬೇಕು. ನಿಯಮಗಳು ಮತ್ತು ಷರತ್ತುಗಳು ಮತ್ತು ಅರ್ಜಿ ನಮೂನೆಯ ಪ್ರತಿಯನ್ನು ರಾಷ್ಟಿçÃಯ ಮಾನವ ಹಕ್ಕುಗಳ ಆಯೋಗದ ವೆಬ್‌ಸೈಟ್ https://nhrc.nic.in ಅಥವಾ ಲಿಂಕ್ https://nhrc.nic.in/flipbook/files/255 ನಿಂದ ಡೌನ್‌ಲೋಡ್ ಮಾಡಬಹುದು. ಮಾನವ ಹಕ್ಕುಗಳ ಸಂಸ್ಕೃತಿ ಮತ್ತು ಸಂವೇದನೆಯನ್ನು ಮೂಡಿಸುವ ಉದ್ದೇಶದ ಈ ಸ್ಪರ್ಧೆಯಲ್ಲಿ ಸಾರ್ವಜನಿಕರು ಯಾವುದೇ ವಯೋಮಿತಿಯ ನಿರ್ಬಂಧವಿಲ್ಲದೇ ಭಾಗವಹಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ದೂ.011-24663281/24663367 ಅನ್ನು ಸಂಪರ್ಕಿಸಬಹುದು ಎಂದು ಎನ್‌ಹೆಚ್‌ಆರ್‌ಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಉಪನಿರ್ದೇಶಕ ಜೈಮಿನಿ ಕುಮಾರ್ ಶ್ರೀವಾಸ್ತವ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಬಳ್ಳಾರಿ: 2030ರ ವೇಳೆಗೆ ಜಿಲ್ಲೆಯನ್ನು ಮಲೇರಿಯಾ ಮುಕ್ತವಾಗಿಸಲು ಆರೋಗ್ಯ ಇಲಾಖೆ ಸಂಕಲ್ಪ

ಬಳ್ಳಾರಿ,ಏ.30(ಕರ್ನಾಟಕ ವಾರ್ತೆ): ಜಿಲ್ಲೆಯನ್ನು 2030ರ ವೇಳೆಗೆ ಮಲೇರಿಯಾ ಮುಕ್ತವಾಗಿಸಲು ಆರೋಗ್ಯ ಇಲಾಖೆ ಸಂಕಲ್ಪ ಹೊಂದಲಾಗಿದೆ. ಮಲೇರಿಯಾ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಜಿಲ್ಲೆಯ ಜನತೆ ಕೈಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ. “ಮಲೇರಿಯಾವನ್ನು ಅಂತ್ಯಗೊಳಿಸಲು ಸಂಕಲ್ಪ ಮಾಡೋಣ: ನಮಗಿದು ಸಾಧ್ಯವಿದೆ. ನಾವು ಇದನ್ನು ಮಾಡಬೇಕು” ಎಂಬ ಘೋಷವಾಕ್ಯದೊಂದಿಗೆ ವಿಶ್ವ ಮಲೇರಿಯಾ ದಿನವನ್ನು ಜಿಲ್ಲೆಯಾದ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಬಳ್ಳಾರಿ ಜಿಲ್ಲೆಯು ಮಲೇರಿಯಾ ನಿಯಂತ್ರಣದಲ್ಲಿ ರಾಜ್ಯದಲ್ಲೇ ಮಾದರಿ ಸಾಧನೆ ಮಾಡಿದೆ. 2015 ರಿಂದ ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳು ಅತ್ಯಲ್ಪ ಸಂಖ್ಯೆಯಲ್ಲಿದ್ದು, ಕಳೆದ ಮೂರು ವರ್ಷಗಳಿಂದ ಶೂನ್ಯ ಸ್ಥಳೀಯ ಮಲೇರಿಯಾ ಪ್ರಕರಣಗಳನ್ನು ದಾಖಲಿಸುವ ಮೂಲಕ ಜಿಲ್ಲೆಯು ಮೈಲಿಗಲ್ಲು ಸಾಧಿಸಿದೆ ಎಂದು ಹೇಳಿದ್ದಾರೆ. 2027ರ ವೇಳೆಗೆ ಸ್ಥಳೀಯ ಪ್ರಕರಣಗಳನ್ನು ಸಂಪೂರ್ಣ ಶೂನ್ಯಗೊಳಿಸಿ, 2030ರ ವೇಳೆಗೆ ಜಿಲ್ಲೆಯನ್ನು ಸಂಪೂರ್ಣ ಮಲೇರಿಯಾ ಮುಕ್ತವಾಗಿಸುವ ಗುರಿಯನ್ನು ಇಲಾಖೆ ಹೊಂದಿದೆ ಎಂದಿದ್ದಾರೆ. *ಸಾರ್ವಜನಿಕರಿಗೆ ಸೂಚನೆಗಳು:* ಮಲೇರಿಯಾವು ಪ್ಲಾಸ್ಮೋಡಿಯಂ ಪರಾವಲಂಬಿಗಳಿAದ ಬರುವ ಕಾಯಿಲೆಯಾಗಿದ್ದು, ಹೆಣ್ಣು ಅನಾಫಿಲೀಸ್ ಸೊಳ್ಳೆಯ ಕಡಿತದಿಂದ ಹರಡುತ್ತದೆ. ಇದನ್ನು ತಡೆಗಟ್ಟಲು ಸಾರ್ವಜನಿಕರು ಅಗತ್ಯ ಕ್ರಮಗಳನ್ನು ಅನುಸರಿಸಬೇಕು ಎಂದು ಅವರು ತಿಳಿಸಿದ್ದಾರೆ. ಶೀಘ್ರ ಪತ್ತೆ ಮತ್ತು ಚಿಕಿತ್ಸೆ: ಜ್ವರ ಬಂದ ತಕ್ಷಣ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಲಭ್ಯವಿರುವ ರಕ್ತ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಸಂಪೂರ್ಣ ಚಿಕಿತ್ಸೆ ಪಡೆಯಿರಿ. ಸೊಳ್ಳೆ ಉತ್ಪತ್ತಿ ತಡೆಗಟ್ಟಿ: ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಜಾಗ್ರತೆ ವಹಿಸಿ. ಸೊಳ್ಳೆಗಳ ಸಂತಾನೋತ್ಪತ್ತಿಯನ್ನು ತಡೆಗಟ್ಟಲು ಸಮುದಾಯದ ಸಹಭಾಗಿತ್ವ ಅತ್ಯಗತ್ಯ. ಕೀಟನಾಶಕ ಸಿಂಪಡಣೆ: ಆರೋಗ್ಯ ಇಲಾಖೆಯ ವತಿಯಿಂದ ಕೈಗೊಳ್ಳಲಾಗುವ ಒಳಾಂಗಣ ಕೀಟನಾಶಕ ಸಿಂಪಡಣಾ ಕಾರ್ಯಕ್ಕೆ ಸಾರ್ವಜನಿಕರು ಸಹಕರಿಸಬೇಕು. ವೈಯಕ್ತಿಕ ರಕ್ಷಣೆ: ಕೀಟನಾಶಕ ಸಂಸ್ಕರಿಸಿದ ಸೊಳ್ಳೆ ಪರದೆಗಳನ್ನು ಬಳಸಿ. ಸೊಳ್ಳೆ ನಿವಾರಕಗಳು ಮತ್ತು ವಿವಿಧ ಸ್ವಯಂ ರಕ್ಷಣಾ ವಿಧಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಸೊಳ್ಳೆ ಕಡಿತದಿಂದ ಪಾರಾಗಿ ಎಂದು ಹೇಳಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನದ ಇಂದಿನ ದಿನಗಳಲ್ಲಿ ಮಲೇರಿಯಾ ನಿರ್ಮೂಲನೆ ಕಷ್ಟವೇನಲ್ಲ. ಲಸಿಕೆಗಳು, ಸುಧಾರಿತ ಚಿಕಿತ್ಸೆ ಮತ್ತು ಸಮುದಾಯದ ಜಾಗೃತಿ ಇದ್ದರೆ ನಮ್ಮ ಜೀವಿತಾವಧಿಯಲ್ಲೇ ಮಲೇರಿಯಾವನ್ನು ಕೊನೆಗಾಣಿಸಬಹುದು. ಸಣ್ಣ ಕಡಿತವು ಭಾರಿ ಪರಿಣಾಮ ಬೀರಬಲ್ಲದು, ಹಾಗಾಗಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು. ಈ ವರ್ಷದ ಅಭಿಯಾನವು ರಾಜಕೀಯ ಇಚ್ಛಾಶಕ್ತಿ, ಆರ್ಥಿಕ ಹೂಡಿಕೆ ಮತ್ತು ಸಮುದಾಯದ ಸಕ್ರಿಯ ಪಾಲ್ಗೊಳ್ಳುವಿಕೆಗೆ ಹೆಚ್ಚಿನ ಒತ್ತು ನೀಡಿದೆ. ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಿ 2030ರ ಮಲೇರಿಯಾ ಮುಕ್ತ ಗುರಿಯನ್ನು ತಲುಪಲು ಸಹಕರಿಸಬೇಕು ಎಂದು ಡಾ.ಯಲ್ಲಾ ರಮೇಶ್ ಬಾಬು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ. ----------

ಬಳ್ಳಾರಿ: ಯಾಸಿನ್ ಸಾಬ್ ಮಸ್ಜಿದ್(ಸುನ್ನಿ) ವಕ್ಫ್ ಸಂಸ್ಥೆಯ ಕಾರ್ಯಾಕಾರಿ ಸಮಿತಿ ಚುನಾವಣೆ

ಬಳ್ಳಾರಿ,ಏ.30(ಕರ್ನಾಟಕ ವಾರ್ತೆ): ಬಳ್ಳಾರಿ ನಗರದ ಕೌಲ್ ಬಜಾರ್ ವ್ಯಾಪ್ತಿಯಲ್ಲಿ ಬರುವ ವಕ್ಫ್ ಸಂಸ್ಥೆಯಾದ ಯಾಸಿನ್ ಸಾಬ್ ಮಸ್ಜಿದ್(ಸುನ್ನಿ) ವಕ್ಫ್ ಸಂಸ್ಥೆಗೆ ಹೊಸ ಸಮಿತಿ ರಚಿಸುವ ನಿಮಿತ್ತ ಮೇ 05 ರಿಂದ 12 ರ ವರೆಗೆ ಚುನಾವಣೆ ಪ್ರಕ್ರಿಯೆ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಚುನಾವಣಾ ನಾಮಪತ್ರವನ್ನು ಮೇ 05 ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 01.30 ಗಂಟೆಯ ವರೆಗೆ ಜಿಲ್ಲಾ ವಕ್ಫ್ ಕಚೇರಿಯಿಂದ ಪಡೆದು ಭರ್ತಿ ಮಾಡಿ, ಸೂಕ್ತ ದಾಖಲೆಗಳೊಂದಿಗೆ ಮೇ 12 ರ ಮಧ್ಯಾಹ್ನ 01.30 ಗಂಟೆಯ ಒಳಗಾಗಿ ಸಲ್ಲಿಸಬಹುದು. ನಾಮಪತ್ರ ಪರಿಶೀಲನೆ ಮೇ 13 ರ ಬೆಳಿಗ್ಗೆ 11.30 ಗಂಟೆಯಿAದ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮೇ 14 ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯ ವರೆಗೆ ಅವಕಾಶವಿದೆ. ಅದೇ ದಿನ ಮಧ್ಯಾಹ್ನ 02.30 ರ ನಂತರ ಚುನಾವಣಾ ಚಿನ್ಹೆಗಳ ಹಂಚಿಕೆ ಮಾಡಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ಮೇ 23 ರ ಶನಿವಾರ ಬೆಳಿಗ್ಗೆ 08 ರಿಂದ ಮಧ್ಯಾಹ್ನ 03 ಗಂಟೆಯವರೆಗೆ ನಗರದ ಕೌಲ್ ಬಜಾರ್ ನ 1ನೇ ರೈಲ್ವೆ ಗೇಟ್ ಹತ್ತಿರದ ಮೊಹಮ್ಮದಿಯಾ ಶಾಲೆ ಮತ್ತು ಕಾಲೇಜಿನಲ್ಲಿ ಚುನಾವಣೆ ನಡೆಸಿ, ಅದೇ ದಿನ ಸಂಜೆ 04 ಗಂಟೆಯಿAದ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಕಲಬುರಗಿ ವಿಭಾಗದ ವಿಭಾಗೀಯ ವಕ್ಪ್ ಅಧಿಕಾರಿ ಹಾಗೂ ಕೌಲ್ ಬಜಾರ್ ಯಾಸೀನ್ ಸಾಬ್ ಮಸ್ಜಿದ್(ಸುನ್ನಿ) ಚುನಾವಣಾಧಿಕಾರಿ ನೂರ್ ಪಾಷಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಸಿರುಗುಪ್ಪ ನಗರಸಭೆ ಮಾರುಕಟ್ಟೆ ಆವರಣದಲ್ಲಿ ನಂದಿನಿ ಪಾರ್ಲರ್ ಸ್ಥಾಪನೆ: ಅಹವಾಲುಗಳಿಗೆ ಆಹ್ವಾನ

ಬಳ್ಳಾರಿ,ಏ.30(ಕರ್ನಾಟಕ ವಾರ್ತೆ): ಸಾರ್ವಜನಿಕರಿಗೆ ಮತ್ತು ಪ್ರಯಾಣಿಕರಿಗೆ ಗುಣಮಟ್ಟದ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಸುಲಭವಾಗಿ ಒದಗಿಸುವ ಉದ್ದೇಶದಿಂದ, ಸಿರುಗುಪ್ಪ ನಗರಸಭೆಯ ಮಾರುಕಟ್ಟೆ ಆವರಣದಲ್ಲಿ ನಂದಿನಿ ಪಾರ್ಲರ್ ಸ್ಥಾಪಿಸಲು ರಾಬಕೊವಿ ಜಿಲ್ಲಾ ಹಾಲು ಒಕ್ಕೂಟಕ್ಕೆ ನಿವೇಶನ ಮಂಜೂರು ಮಾಡಲು ಉದ್ದೇಶಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದಾಗಿದೆ. ಸಿರುಗುಪ್ಪ-ಬಳ್ಳಾರಿ ರಾಷ್ಟಿçÃಯ ಹೆದ್ದಾರಿಯ ಬಸ್ ನಿಲ್ದಾಣದ ಪಕ್ಕದಲ್ಲಿರುವ ಇಂದಿರಾ ಕ್ಯಾಂಟೀನ್ ಮುಂಭಾಗದ ನಗರಸಭೆ ತರಕಾರಿ ಮಾರುಕಟ್ಟೆ ಆವರಣದಲ್ಲಿ 10*15=150 ಚದರ ಅಡಿ ವಿಸ್ತೀರ್ಣದ ನಿವೇಶನ ಅಳತೆಯಲ್ಲಿ ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಒಕ್ಕೂಟದ ಮೂಲಕ ಶುದ್ಧ ಮತ್ತು ಪೌಷ್ಟಿಕ ನಂದಿನಿ ಉತ್ಪನ್ನಗಳನ್ನು ಸಾರ್ವಜನಿಕರಿಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ. ಈ ನಿವೇಶನ ಹಂಚಿಕೆಗೆ ಸಂಬAಧಿಸಿದAತೆ ಸಾರ್ವಜನಿಕರಲ್ಲಿ ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ಈ ಪ್ರಕಟಣೆ ಹೊರಡಿಸಿದ 15 ದಿನಗಳ ಒಳಗಾಗಿ ಸೂಕ್ತ ದಾಖಲೆಗಳೊಂದಿಗೆ ಸಿರಗುಪ್ಪ ನಗರಸಭೆ ಕಾರ್ಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಒಂದು ವೇಳೆ ನಿಗದಿತ ಅವಧಿಯೊಳಗೆ ಯಾವುದೇ ಆಕ್ಷೇಪಣೆಗಳು ಬರದಿದ್ದಲ್ಲಿ, ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ ನಿಯಮಾನುಸಾರ ನಿವೇಶನ ಮಂಜೂರು ಮಾಡಲು ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಿರುಗುಪ್ಪ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

5 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಉಚಿತ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಮಾಡಲು ಅವಕಾಶ: ಸೆ.30 ಕೊನೆಯ ದಿನ

ಬಳ್ಳಾರಿ,ಏ.30(ಕರ್ನಾಟಕ ವಾರ್ತೆ): ಜಿಲ್ಲೆಯಾದ್ಯಂತ 5 ರಿಂದ 17 ವರ್ಷ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ ಮಾಡಿಸಲು ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಉಚಿತವಾಗಿ ಅವಕಾಶ ಕಲ್ಪಿಸಲಾಗಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸೆಪ್ಟೆಂಬರ್ 30 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮಕ್ಕಳ ಆಧಾರ್ ಕಾರ್ಡ್ನಲ್ಲಿ ಬಯೋಮೆಟ್ರಿಕ್ ಮಾಹಿತಿಯನ್ನು ನವೀಕರಿಸುವುದರಿಂದ ಶಾಲಾ ದಾಖಲಾತಿ, ಸ್ಪರ್ಧಾತ್ಮಕ ಪರೀಕ್ಷೆಗಳು, ಸರ್ಕಾರಿ ವಿವಿಧ ಯೋಜನೆಗಳು, ವಿದ್ಯಾರ್ಥಿ ವೇತನ ಸೇರಿದಂತೆ ಶೈಕ್ಷಣಿಕ ಸವಲತ್ತುಗಳ ಲಾಭ ಪಡೆಯಲು ಅಪ್ಡೇಟ್ ಮಾಡುವುದು ಅತ್ಯಗತ್ಯವಾಗಿದೆ. ಹಾಗಾಗಿ ಪೋಷಕರು ಕೂಡಲೇ ತಮ್ಮ ಮಕ್ಕಳ ಆಧಾರ್ ಕಾರ್ಡ್ ಹಾಗೂ ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳು ಮಕ್ಕಳಿಗೆ ಸರಿಯಾದ ಸಮಯಕ್ಕೆ ತಲುಪುವಂತೆ ಮಾಡಲು ಪೋಷಕರು ಈ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ. ----------

ಬುಧವಾರ, ಏಪ್ರಿಲ್ 29, 2026

ಬಳ್ಳಾರಿ ಲಿಡ್‌ಕರ್ ಎಂಪೋರಿಯಂನಲ್ಲಿ ಚರ್ಮವಸ್ತುಗಳ ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ

ಬಳ್ಳಾರಿ,ಏ.29(ಕರ್ನಾಟಕ ವಾರ್ತೆ): ಕಾರ್ಮಿಕರ ದಿನಾಚರಣೆ ಹಾಗೂ ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಬಳ್ಳಾರಿಯ ಲಿಡ್‍ಕರ್ ಲೆದರ್ ಎಂಪೋರಿಯಂನಲ್ಲಿ ಗ್ರಾಹಕರಿಗಾಗಿ ಎಲ್ಲಾ ಚರ್ಮದ ಉತ್ಪನ್ನಗಳ ಮೇಲೆ ಶೇ. 15 ರಷ್ಟು ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ ಹಮ್ಮಿಕೊಳ್ಳಲಾಗಿದೆ. ನಗರದ ಬುಡಾ ಕಾಂಪ್ಲೆಕ್ಸ್‌ನಲ್ಲಿರುವ ಲಿಡ್‌ಕರ್ ಮಳಿಗೆಯಲ್ಲಿ ಏ.30 ರಿಂದ ಮೇ 31 ರವರೆಗೆ ಈ ವಿಶೇಷ ರಿಯಾಯಿತಿ ದರಗಳು ಅನ್ವಯವಾಗಲಿವೆ. ಮಳಿಗೆಯಲ್ಲಿ ಲಭ್ಯವಿರುವ ಗುಣಮಟ್ಟದ ಚರ್ಮದ ಪಾದರಕ್ಷೆಗಳು, ಬ್ಯಾಗ್‌ಗಳು, ಬೆಲ್ಟ್‌ಗಳು ಹಾಗೂ ಇನ್ನಿತರ ಎಲ್ಲಾ ಚರ್ಮದ ವಸ್ತುಗಳ ಖರೀದಿ ಮೇಲೆ ಗ್ರಾಹಕರು ಶೇ.15 ರಷ್ಟು ರಿಯಾಯಿತಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಹೆಚ್.ಆರ್. ಗವಿಯಪ್ಪ ವೃತ್ತದ ಬಳಿಯ ಬುಡಾ ಕಾಂಪ್ಲೆಕ್ಸ್ ನ ಶಾಪ್ ನಂ: 24ರ ಲಿಡ್‍ಕರ್ ಲೆದರ್ ಎಂಪೋರಿಯಮ್ ಮಳಿಗೆ ಅಥವಾ ದೂ.08392-271741, ಮೊ.98446 67691 ಅನ್ನು ಸಂಪರ್ಕಿಸಬಹುದಾಗಿದೆ. ಇದು ಸರ್ಕಾರಿ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ವಿಶೇಷ ಮಾರಾಟವಾಗಿದ್ದು, ಸಾರ್ವಜನಿಕರು ಹಾಗೂ ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಲಿಡ್‌ಕರ್ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ಕೋರಿದ್ದಾರೆ. ===

ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಾತಿಗಾಗಿ ವಿಶೇಷ ಚೇತನರಿಂದ ಅರ್ಜಿ ಆಹ್ವಾನ

ಬಳ್ಳಾರಿ,ಏ.29(ಕರ್ನಾಟಕ ವಾರ್ತೆ): ವಿಶೇಷ ಚೇತನರಿಗೆ ಡಿಪ್ಲೋಮಾ ಮಟ್ಟದಲ್ಲಿ ತಾಂತ್ರಿಕ ಶಿಕ್ಷಣ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಮೈಸೂರಿನ ಜೆಎಸ್‌ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಕಾಲೇಜು ವತಿಯಿಂದ 2026-27 ನೇ ಸಾಲಿನ ಮೂರು ವರ್ಷದ ಡಿಪ್ಲೋಮಾ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ವಿಶೇಷ ಚೇತನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. *ವಿವಿಧ ಕೋರ್ಸ್ ಗಳು:* *ಅನುದಾನಿತ ಕೋರ್ಸ್:* ಆರ್ಕಿಟೆಕ್ಚರ್ ಅಸಿಸ್ಟೆಂಟ್‌ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿAಗ್. *ಅನುದಾನಿತ ರಹಿತ ಕೋರ್ಸ್:* ಜ್ಯೂಯಲರಿ ಡಿಸೈನ್ಸ್ ಮತ್ತು ಟೆಕ್ನಾಲಜಿ, ಎಲೆಕ್ಟಾçನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿAಗ್, ಕಂಪ್ಯೂಟರ್ ಅಪ್ಲಿಕೇಷನ್ಸ್ (ಫಾರ್ ವಿಜ್ಯುವಲಿ ಇಂಪರ‍್ಡ್), ಅಪಾರೇಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ, ಎಲೆಕ್ಟಿçಕಲ್ ಇಂಜಿನಿಯರಿAಗ್ ಮತ್ತು ಎಲೆಕ್ಟಿçಕಲ್ ವೆಹಿಕಲ್ ಟೆಕ್ನಾಲಜಿ. *ಅರ್ಹತೆ:* 10 ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತೀರ್ಣರಾದ ಹಾಗೂ ವಿವಿಧ ಅಂಗವೈಕಲ್ಯತೆ ಲಕ್ಷಣ ಹೊಂದಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಮೂಳೆ ಮತ್ತು ಕೀಲು ಅಂಗವಿಕಲತೆಯಲ್ಲಿ ಶೇ.40, ಕಿವುಡ ಮತ್ತು ಮೂಗು ಅಂಗವಿಕಲತೆ ಶೇ.60, ಅಂಧತ್ವ-6/60 ಅಥವಾ 20/200 ಸ್ನೆಲೆನ್(ಕಂಪ್ಯೂಟರ್ ಅಪ್ಲಿಕೇಷನ್ಸ್ (ಫಾರ್ ವಿಜ್ಯುವಲಿ ಇಂಪರ‍್ಡ್) ಕೋರ್ಸ್ ಗೆ ಮೇಲ್ಪಟ್ಟು ಇರಬೇಕು. ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟçಮಟ್ಟದ ವಿದ್ಯಾರ್ಥಿವೇತನದ ಆರ್ಥಿಕ ಸಹಾಯ ದೊರೆಯುತ್ತದೆ ಹಾಗೂ ಪಾಲಿಟೆಕ್ನಿಕ್ ಉತ್ತಮ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುವುದು. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವ್ಯಸ್ಥೆ ಕಲ್ಪಿಸಲಾಗಿದೆ. ಪ್ರವೇಶಾತಿಗಾಗಿ ಅರ್ಜಿಗಳನ್ನು ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ 200 ರೂ. ಹಾಗೂ ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಇವರಿಗೆ 100 ರೂ. ನಗದು ಅಥವಾ ಡಿಡಿ ಮೂಲಕ ಮೈಸೂರಿನಲ್ಲಿ ಸಂದಾಯವಾಗುವAತೆ ಜೆಎಸ್‌ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ, ಮೈಸೂರು 570-006 ಇಲ್ಲಿಗೆ ಜೂ.05 ರೊಳಗಾಗಿ ಕಳುಹಿಸಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.jsspda.org ಗೆ ಭೇಟಿ ನೀಡಿ ಅರ್ಜಿ ಅಥವಾ ಇನ್ನಿತರೆ ಮಾಹಿತಿಗಾಗಿ ಮೊ.9844644937 ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಮೈಸೂರು ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಮಂಗಳವಾರ, ಏಪ್ರಿಲ್ 28, 2026

ಮೇ 01 ರಂದು ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮ

ಬಳ್ಳಾರಿ,ಏ.28(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಮೇ 01 ರಂದು ಸಂಜೆ 06.30 ಗಂಟೆಗೆÀ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್‌ಲೂಮ್ಸ್)ದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷö್ಮಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಭಾರತೀಯ ಬೌದ್ಧ ಮಹಾಸಭಾ ಜಿಲ್ಲಾ ಘಟಕ ಅಧ್ಯಕ್ಷ ಕಮಲರತ್ನ ಬಂತೇಜಿ ಸೇರಿದಂತೆ ಇತರರು ಭಾಗವಹಿಸುವರು. ಬಳ್ಳಾರಿಯ ಎಸ್‌ಎಸ್‌ಎ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಸೋಮನಾಥ್ ಸಿ.ಹೆಚ್ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು. ಸಿರುಗುಪ್ಪ ದಳವಾಯಿ ಅಂಬಣ್ಣ ತಂಡದಿAದ ಭಕ್ತಿ ಸಂಗೀತ ಕಾರ್ಯಕ್ರಮ ಇರಲಿದೆ. *ಮೆರವಣಿಗೆ:* ಜಯಂತಿ ಅಂಗವಾಗಿ ಅಂದು ಸಂಜೆ 05 ಗಂಟೆಗೆ ಮೆರವಣಿಗೆ ನಡೆಯಲಿದೆ. ಮೆರವಣಿಗೆಯು ಬಳ್ಳಾರಿ ನಗರದ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಆರಂಭಗೊAಡು ಗಡಿಗೆ ಚನ್ನಪ್ಪ ವೃತ್ತ, ಡಾ.ರಾಜ್ ಕುಮಾರ್ ರಸ್ತೆ, ಇಂದಿರಾ ವೃತ್ತ, ಸಾಂಸ್ಕೃತಿಕ ಸಮುಚ್ಚಯದ ಸಭಾಂಗಣದವರೆಗೆ ನಡೆಯಲಿದೆ. ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್ ಮಂಜುನಾಥ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ. -----------

ಜೆಸ್ಕಾಂ: ಹತ್ತಿರದ ಶಾಖೆಗೆ ಹಣ ಪಾವತಿಸಿ ರಶೀದಿ ಪಡೆಯಿರಿ

ಬಳ್ಳಾರಿ,ಏ.28(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ಉಪ-ವಿಭಾಗ ವ್ಯಾಪ್ತಿಯ ಜೆಸ್ಕಾಂ ಕಂಪನಿಯ ಸಾಫ್ಟ್ ವೇರ್‌ನಲ್ಲಿ ತಾಂತ್ರಿಕ ದೋಷದಿಂದ ಆನ್‌ಲೈನ್ ಪಾವತಿಯ ವ್ಯತ್ಯಾಸದಲ್ಲಿ ಲೋಪ್-ದೋಷಗಳು ಕಂಡುಬAದಿರುವುದರಿAದ, ಎಲ್ಲಾ ಗ್ರಾಹಕರು ಹತ್ತಿರದ ಶಾಖೆ ಅಥವಾ ತಮ್ಮ ಗ್ರಾಮದ ವಿದ್ಯುತ್ ಪ್ರತಿನಿಧಿ (ಜಿವಿಪಿ), ಗ್ರಾಮೀಣ ಉಪ-ವಿಭಾಗ ಕಚೇರಿಗೆ ಭೇಟಿ ನೀಡಿ ಹಣ ಪಾವತಿಸಿ ರಸೀದಿ ಪಡೆದುಕೋಳ್ಳಬಹುದು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮೋಹನಬಾಬು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ. --------

ಬಳ್ಳಾರಿ: ಸರ್ಕಾರಿ ಐಟಿಐ ಕಾಲೇಜು ಪ್ರವೇಶಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಏ.28(ಕರ್ನಾಟಕ ವಾರ್ತೆ): ನಗರದ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ 2026-27 ನೇ ಸಾಲಿಗೆ ವಿವಿಧ ವೃತ್ತಿಗಳಿಗೆ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯ ಪಂಡಿತಾರಾದ್ಯ ಅವರು ತಿಳಿಸಿದ್ದಾರೆ. 10 ನೇ ತರಗತಿ ಪಾಸ್/ಫೇಲ್ ಆದ ಅಭ್ಯರ್ಥಿಗಳು ವೆಬ್ ಸೈಟ್ ವಿಳಾಸ www.cite.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅಥವಾ ನೇರವಾಗಿ ಸಂಸ್ಥೆಗೆ ಭೇಟಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ 08 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಅರ್ಜಿಯಲ್ಲಿ ನಮೂದಿಸಿದ ಸಂಸ್ಥೆಯಲ್ಲಿ ಮಾತ್ರ ದಾಖಲೆ ಪರಿಶೀಲನೆಗೆ ಕಡ್ಡಾಯವಾಗಿ ಹಾಜರಾಗಬೇಕು. ಸೂಚನೆ: ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಮಯದಲ್ಲಿ ನೀಡುವ ಮೊಬೈಲ್ ಸಂಖ್ಯೆ ಹಾಗೂ ಇ-ಮೇಲ್ ವಿಳಾಸವನ್ನು ಪ್ರವೇಶಾತಿ ಮತ್ತು ಪರೀಕ್ಷೆ ಮುಗಿಯುವವರೆಗೂ ಬದಲಾವಣೆ ಮಾಡುವಂತಿಲ್ಲ. ಹೆಚ್ಚಿನ ಮಾಹಿತಿಗಾಗಿ ಮೊ.9902351985 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕೆ.ಪಿ.ಎಂ.ಇ ನೋಂದಣಿ ಇಲ್ಲದೆ ಕ್ಲಿನಿಕ್ ಆರಂಭಿಸಿದರೆ ದಂಡ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ

ಬಳ್ಳಾರಿ,ಏ.28(ಕರ್ನಾಟಕ ವಾರ್ತೆ): ವೈದ್ಯಕೀಯ ಪದವಿ ಪಡೆದ ನಂತರ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ ಕಾಯ್ದೆಯಡಿ ನೋಂದಣಿ ಮಾಡಿಕೊಳ್ಳದೇ ಕ್ಲಿನಿಕ್ ಅಥವಾ ಆಸ್ಪತ್ರೆಗಳನ್ನು ಆರಂಭಿಸುವ ವೈದ್ಯರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು. ಮಂಗಳವಾರ ನಗರದ ನೂತನ ಜಿಲ್ಲಾಡಳಿತ ಭವನದ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಜಿಲ್ಲಾ ನೋಂದಣಿ ಮತ್ತು ಕುಂದುಕೊರತೆಗಳ ಸಭೆ'ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. *ನೋಂದಣಿ ಕಡ್ಡಾಯ, ಉಲ್ಲಂಘಿಸಿದರೆ ದಂಡ:* ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ 2007 ಮತ್ತು 2009ರ ತಿದ್ದುಪಡಿ ನಿಯಮಗಳ ಪ್ರಕಾರ, ಯಾವುದೇ ವೈದ್ಯರು ಕ್ಲಿನಿಕ್, ಪಾಲಿ ಕ್ಲಿನಿಕ್, ನರ್ಸಿಂಗ್ ಹೋಮ್ ಅಥವಾ ಪ್ರಯೋಗಾಲಯಗಳನ್ನು ಆರಂಭಿಸುವ ಮೊದಲು ಜಿಲ್ಲಾಧಿಕಾರಿಗಳಿಂದ ಕಡ್ಡಾಯವಾಗಿ ಕೆ.ಪಿ.ಎಂ.ಇ ನೋಂದಣಿ ಪ್ರಮಾಣಪತ್ರ ಪಡೆಯಬೇಕು. ನೋಂದಣಿ ಮಾಡಿಕೊಳ್ಳದೆ ಅಥವಾ ನವೀಕರಣ ಮಾಡದೆ ಸಂಸ್ಥೆ ನಡೆಸುತ್ತಿದ್ದರೆ, ಅಂತಹ ಕೇಂದ್ರಗಳಿಗೆ ಪ್ರತಿ ವರ್ಷಕ್ಕೆ 25,000 ರೂ.ಗಳಂತೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದ ಅವರು, ಕಾಯ್ದೆಯ ಕಲಂ 19, 20, 21 ಹಾಗೂ 22 ರಡಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು. *ನಕಲಿ ವೈದ್ಯರ ವಿರುದ್ಧ ಎಫ್‌ಐಆರ್:* ಜಿಲ್ಲೆಯಲ್ಲಿ ಅಧಿಕೃತ ವೈದ್ಯಕೀಯ ಪದವಿ ಇಲ್ಲದೆ ಸಾರ್ವಜನಿಕರ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ನಕಲಿ ವೈದ್ಯರ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಅಂತಹವರ ವಿರುದ್ಧ ನೇರವಾಗಿ ಎಫ್.ಐ.ಆರ್ ದಾಖಲಿಸಬೇಕು ಎಂದು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. *ಕಟ್ಟಡ ಮಾಲೀಕರಿಗೆ ಸೂಚನೆ:* ತಮ್ಮ ಮನೆ ಅಥವಾ ಮಳಿಗೆಗಳನ್ನು ಆಸ್ಪತ್ರೆ, ಕ್ಲಿನಿಕ್ ಅಥವಾ ಲ್ಯಾಬ್‌ಗಳಿಗೆ ಬಾಡಿಗೆ ನೀಡುವ ಮುನ್ನ ಮಾಲೀಕರು ಎಚ್ಚರಿಕೆ ವಹಿಸಬೇಕು. ಬಾಡಿಗೆದಾರರ ಅಧಿಕೃತ ವೈದ್ಯಕೀಯ ಪ್ರಮಾಣಪತ್ರಗಳನ್ನು ಪರಿಶೀಲಿಸಿದ ನಂತರವೇ ಬಾಡಿಗೆ ಒಪ್ಪಂದ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಜಿಲ್ಲೆಯ ಆರೋಗ್ಯ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಮತ್ತು ಸಾರ್ವಜನಿಕರಿಗೆ ಗುಣಮಟ್ಟದ ಚಿಕಿತ್ಸೆ ಖಾತ್ರಿಪಡಿಸಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕು ಆರೋಗ್ಯ ಅಧಿಕಾರಿಗಳು, ನೋಂದಣಿ ಮತ್ತು ಕುಂದು ಕೊರತೆ ಪರಿಹಾರ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ---------

ಸೋಮವಾರ, ಏಪ್ರಿಲ್ 27, 2026

ಕುವೆಂಪು ವಿವಿಯಿಂದ ಐಪಿಎಸ್ ಅಧಿಕಾರಿ ಹರ್ಷ.ಪಿ.ಎಸ್ ಅವರಿಗೆ ಪಿಎಚ್.ಡಿ ಪದವಿ ಘೋಷಣೆ

ಬಳ್ಳಾರಿ,ಏ.27(ಕರ್ನಾಟಕ ವಾರ್ತೆ): ಕುವೆಂಪು ವಿಶ್ವವಿದ್ಯಾಲಯವು ವನ್ಯಜೀವಿ ಮತ್ತು ನಿರ್ವಹಣೆ ವಿಭಾಗದಲ್ಲಿ ನಡೆಸಿದ ಸಂಶೋಧನೆಗಾಗಿ ಬಳ್ಳಾರಿ ವಲಯ ಉಪಮಹಾನಿರೀಕ್ಷಕರು ಹಾಗೂ ಐಪಿಎಸ್ ಅಧಿಕಾರಿ ಹರ್ಷ.ಪಿ.ಎಸ್ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್.ಡಿ.) ಪದವಿಯನ್ನು ಘೋಷಿಸಿದೆ. ಪಿ.ಎಸ್. ಹರ್ಷ ಅವರು, ಕುವೆಂಪು ವಿಶ್ವವಿದ್ಯಾಲಯದ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದ ಪ್ರಾಧ್ಯಾಪಕರಾದ ಡಾ.ವಿಜಯ ಕುಮಾರ ಅವರ ಮಾರ್ಗದರ್ಶನದಲ್ಲಿ “ನಾಗರಹೊಳೆ, ಬಂಡೀಪುರ ಮತ್ತು ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಹುಲಿಗಳ ಸಂಖ್ಯೆಯ ಸ್ಥಿರತೆ ಹಾಗೂ ಮಾನವ-ಹುಲಿ ಸಂಘರ್ಷ ಮತ್ತು ಅದರ ಪ್ರಭಾವಗಳ ಕುರಿತಾದ ಒಂದು ಅಧ್ಯಯನ” (A Study on Stability of Tiger Population in Nagarahole, Bandipur and BRT Tiger Reserves with special reference to Human-Tiger Conflicts and its impact) ಎಂಬ ಸಂಶೋಧನಾ ಪ್ರಬಂಧವನ್ನು ಮಂಡಿಸಿದ್ದರು. ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿ ಮತ್ತು ಸಿಂಡಿಕೇಟ್ ಈ ಶಿಫಾರಸನ್ನು ಅಂಗೀಕರಿಸಿದ್ದು, ಮುಂಬರುವ ಘಟಿಕೋತ್ಸವದಲ್ಲಿ ಹರ್ಷ.ಪಿ.ಎಸ್ ಅವರು ಅಧಿಕೃತವಾಗಿ ಪದವಿ ಸ್ವೀಕರಿಸಲು ಅರ್ಹರಾಗಿದ್ದಾರೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ತಿಳಿಸಿದ್ದಾರೆ. ----------

2027ರ ವೇಳೆಗೆ ಬಳ್ಳಾರಿ ಜಿಲ್ಲೆಯನ್ನು ಮಲೇರಿಯಾ ಮುಕ್ತವಾಗಿಸಲು ಸಂಕಲ್ಪ ಮಾಡೋಣ: ಡಾ.ಮರಿಯಂಬಿ ವಿ.ಕೆ

ಬಳ್ಳಾರಿ,ಏ.27(ಕರ್ನಾಟಕ ವಾರ್ತೆ): “ಮಲೇರಿಯಾ ಅಂತ್ಯಗೊಳಿಸಲು ಸಂಕಲ್ಪ ಮಾಡೋಣ; ಇದು ನಮ್ಮಿಂದ ಸಾಧ್ಯವಿದೆ” ಎಂಬ ಘೋಷವಾಕ್ಯದೊಂದಿಗೆ ಜಿಲ್ಲೆಯನ್ನು 2027ರ ವೇಳೆಗೆ ಮಲೇರಿಯಾ ಮುಕ್ತಗೊಳಿಸಲು ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಜಿಲ್ಲಾ ವಿಬಿಡಿಸಿ ಅಧಿಕಾರಿಗಳಾದ ಡಾ.ಮರಿಯಂಬಿ ವಿ.ಕೆ ಅವರು ಹೇಳಿದರು. ವಿಶ್ವ ಮಲೇರಿಯಾ ದಿನಾಚರಣೆ-2026ರ ಅಂಗವಾಗಿ ಸೋಮವಾರ ನಗರದ ಬಂಡಿಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಉದ್ಘಾಟನಾ ಕಾರ್ಯಕ್ರಮ ಹಾಗೂ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು. ಮಲೇರಿಯಾ ಪ್ಲಾಸ್ಮೋಡಿಯಂ ಎಂಬ ಪರಾವಲಂಬಿ ಸೂಕ್ಷö್ಮ ಜೀವಿಯಿಂದ ಉಂಟಾಗುತ್ತದೆ. ಇದು ಹೆಣ್ಣು ಅನಾಫಿಲೀಸ್ ಸೊಳ್ಳೆಯ ಕಚ್ಚುವಿಕೆಯಿಂದ ಹರಡುತ್ತದೆ. ಚಳಿ, ನಡುಕ, ಬಿಟ್ಟು ಬಿಟ್ಟು ಬರುವ ಜ್ವರ, ವಾಕರಿಕೆ ಮತ್ತು ಮೈ ಬೆವರುವುದು ಈ ರೋಗದ ಪ್ರಮುಖ ಲಕ್ಷಣಗಳಾಗಿವೆ. ಹಾಗಾಗಿ ಯಾವುದೇ ರೀತಿಯ ಜ್ವರವಿದ್ದರೂ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು. ಮನೆಯ ಸುತ್ತಮುತ್ತ ಇಲಾಖೆ ವತಿಯಿಂದ ನಡೆಸುವ ಕೀಟನಾಶಕ ಸಿಂಪರಣೆಗೆ ಸಹಕರಿಸುವುದು. ಮಲಗುವಾಗ ಕಡ್ಡಾಯವಾಗಿ ಸೊಳ್ಳೆ ಪರದೆ ಬಳಸುವುದು ಮತ್ತು ಕಿಟಕಿಗಳಿಗೆ ಜಾಲರಿ ಅಳವಡಿಸುವುದು. ನೀರು ನಿಲ್ಲುವ ಸ್ಥಳಗಳಲ್ಲಿ ಲಾರ್ವಹಾರಿ ಗಪ್ಪಿ ಮತ್ತು ಗಂಬೂಷಿಯಾ ಮೀನುಗಳನ್ನು ಬಿಡುವ ಮೂಲಕ ಸೊಳ್ಳೆಗಳ ಉತ್ಪತ್ತಿ ತಡೆಯುವುದು ಸೇರಿದಂತೆ ಆರೋಗ್ಯ ಇಲಾಖೆಯಿಂದ ಕೈಗೊಳ್ಳುವ ಕಾರ್ಯಗಳಿಗೆ ಸಹಕರಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ವಿಬಿಡಿಸಿ ಸಮಾಲೋಚಕ ಪ್ರತಾಪ್.ಹೆದ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಬಂಡಿಹಟ್ಟಿ ವೈದ್ಯಾಧಿಕಾರಿಗಳಾದ ಡಾ.ಯಾಸ್ಮಿನ್, ಡಾ.ಫಾಮಿದಾ ಭಾನು, ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ನಾಗೇಂದ್ರಪ್ಪ, ಮರಿಬಸವನಗೌಡ, ನಾಗರಾಜ್, ಬಾಬುರಾವ್ ಹಾಗೂ ಬಳ್ಳಾರಿ ತಾಲ್ಲೂಕಿನ ಆರೋಗ್ಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ----------

ವಸತಿ ಶಾಲೆ ಹಾಗೂ ಪಿಯು ವಿಜ್ಞಾನ ಕಾಲೇಜು ಪ್ರವೇಶಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಏ.27(ಕರ್ನಾಟಕ ವಾರ್ತೆ): ಸಂಡೂರು ತಾಲ್ಲೂಕಿನ ವಡ್ಡಿನಕಟ್ಟಿ ಗ್ರಾಮದಲ್ಲಿರುವ ಪರಿಶಿಷ್ಟ ವರ್ಗದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಹಾಗೂ ಉನ್ನತೀಕರಿಸಿದ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಪಿಯುಸಿ (ವಿಜ್ಞಾನ ವಿಭಾಗ) ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್ http://kreis.karnataka.gov.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಏ.29 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರಾಂಶುಪಾಲರಾದ ಶಂಕ್ರಪ್ಪ ಚಲವಾದಿ (ಮೊ.9611279510) ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದ್ದಿನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಅಪರಿಚಿತ ವ್ಯಕ್ತಿಯ ಶವ ಪತ್ತೆ - ಗುರುತು ಪತ್ತೆಗೆ ಪೊಲೀಸರ ಮನವಿ

ಬಳ್ಳಾರಿ,ಏ.27(ಕರ್ನಾಟಕ ವಾರ್ತೆ): ಬಳ್ಳಾರಿ ತಾಲ್ಲೂಕಿನ ಮೋಕಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಾಮಧೇಯ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ವಾರಸುದಾರರ ಪತ್ತೆಗಾಗಿ ಪೊಲೀಸರು ಸಾರ್ವಜನಿಕರ ನೆರವು ಕೋರಿದ್ದಾರೆ. ಘಟನೆಯ ವಿವರ: ಏ.21 ರಂದು ಸಂಜೆ ಸುಮಾರು 4:30 ಗಂಟೆಯ ವೇಳೆಗೆ, ಶಿವಪುರ ಗ್ರಾಮದ ಹತ್ತಿರವಿರುವ ಎಸ್‌ಹೆಚ್ 132 ಬಳ್ಳಾರಿ-ಆಲೂರು ರಸ್ತೆಯ ಎಲ್‌ಎಲ್‌ಸಿ ಕಾಲುವೆಯ ಸೇತುವೆ ಪಕ್ಕದಲ್ಲಿ ಈ ಶವ ತೇಲುತ್ತಿರುವುದು ಕಂಡುಬAದಿದೆ. ಮೃತದೇಹವು ನೀರಿನಲ್ಲಿ ಬೋರಲಾಗಿ ಬಿದ್ದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ವ್ಯಕ್ತಿಯು ಆಕಸ್ಮಿಕವಾಗಿ ಕಾಲುವೆ ನೀರಿಗೆ ಬಿದ್ದು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಮೃತನ ಚಹರೆ ಮಾಹಿತಿ: ವಯಸ್ಸು ಅಂದಾಜು 30 ರಿಂದ 35 ವರ್ಷ, ಎತ್ತರ ಸುಮಾರು 5.5 ಅಡಿ, ಸದೃಢ ಮೈಕಟ್ಟು, ತಿಳಿ-ಬಿಳಿ ಬಣ್ಣದ ದಪ್ಪ ಗೆರೆಗಳುಳ್ಳ ಪೂರ್ಣ ತೋಳಿನ ಅಂಗಿ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದಾರೆ. ಮೃತನ ಮೂಗು, ತುಟಿ ಹಾಗೂ ಎರಡು ಕಾಲುಗಳ ಚರ್ಮವನ್ನು ಜಲಚರ ಪ್ರಾಣಿಗಳು ತಿಂದಿರುವ ಗುರುತುಗಳಿವೆ. ಇನ್ನುಳಿದಂತೆ ದೇಹದ ಮೇಲೆ ಯಾವುದೇ ಗುರುತುಗಳು ಮೇಲ್ನೋಟಕ್ಕೆ ಕಂಡುಬAದಿಲ್ಲ. ಮೃತನ ಹೆಸರು ಅಥವಾ ವಿಳಾಸದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಬಳ್ಳಾರಿ ಜಿಲ್ಲಾ ಪೊಲೀಸ್ ಅಧೀಕ್ಷಕರು-08392-258100, ಸಿರುಗುಪ್ಪ ಪೊಲೀಸ್ ಉಪ ಅಧೀಕ್ಷಕರು-ಮೊ.9480803021, ಪಿ.ಡಿ ಹಳ್ಳಿ ವೃತ್ತದ ವೃತ್ತ ನಿರೀಕ್ಷಕರು-ಮೊ.9480803031, ಮೋಕಾ ಪೊಲೀಸ್ ಠಾಣೆ-0892293228, 9480803050 ಗೆ ಸಂಪರ್ಕಿಸಬಹುದಾಗಿದೆ. -----------

ಕಂಪ್ಲಿಯಲ್ಲಿ ನೂತನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಉದ್ಘಾಟನೆ | ಜನರ ಹಿತರಕ್ಷಣೆ, ಹಕ್ಕುಗಳಿಗಾಗಿ ನ್ಯಾಯಾಲಯ: ನ್ಯಾ.ಆರ್.ನಟರಾಜ

ಬಳ್ಳಾರಿ,ಏ.26(ಕರ್ನಾಟಕ ವಾರ್ತೆ): ಜನರ ಹಿತರಕ್ಷಣೆ ಹಾಗೂ ಹಕ್ಕುಗಳನ್ನು ಒದಗಿಸಿಕೊಡುವ ಜೊತೆಗೆ ಸಕಾಲದಲ್ಲಿ ಜನತೆಗೆ ನ್ಯಾಯ ಒದಗಿಸಿಕೊಡುವುದು ನ್ಯಾಯಾಲಯದ ಮುಖ್ಯ ಉದ್ದೇಶವಾಗಿದೆ ಎಂದು ಕರ್ನಾಟಕ ಉಚ್ಛನ್ಯಾಯಾಲಯ ಮತ್ತು ಆಡಳಿತಾತ್ಮಕ ನ್ಯಾಯಾಧೀಶರಾದ ಆರ್.ನಟರಾಜ ಅವರು ಹೇಳಿದರು. ಕಂಪ್ಲಿ ಪಟ್ಟಣದ 20ನೇ ವಾರ್ಡಿನ ಶಿಬಿರದಿನ್ನಿ (ಮಾರುತಿನಗರ)ಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ನೂತನ ಸಿವಿಎಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಉದ್ಘಾಟಿಸಿ ಅವರು ಮಾತನಾಡಿದರು. ಜನರು ಕೇಸ್ ವಿಚಾರಣೆಗಾಗಿ ಕಂಪ್ಲಿಯಿAದ ದೂರದ ಬಳ್ಳಾರಿ ಕೋರ್ಟ್ ಗೆ ಹೋಗಬೇಕಾಗಿತ್ತು. ಕಂಪ್ಲಿಯಲ್ಲಿ ಕೋರ್ಟ್ ಆಗದಿದ್ದರೆ, ಅಪೂರ್ಣವಾಗುತ್ತಿತ್ತು. ಕೋರ್ಟ್ ಸ್ಥಾಪನೆಯೊಂದಿಗೆ ಹೂ ಅರಳಿದಂತಾಗಿದೆ ಎಂದು ತಿಳಿಸಿದರು. ಇಲ್ಲಿನ ಜನರು ಹಕ್ಕು ಭಾದಿತರಾಗಿದ್ದಾರೆ. ಇಲ್ಲಿನ ಜನತೆಗೆ ಕೋರ್ಟ್ ಅತ್ಯವಶ್ಯಕವಾಗಿದೆ. ಇಲ್ಲಿನ ಪುರಸಭೆಗೆ ಒಳಪಡುವ ಕಟ್ಟಡದಲ್ಲಿ ಕೋರ್ಟ್ ಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಇಲ್ಲಿನ ನಗದಿತ ಸ್ಥಳದಲ್ಲಿರುವ ಕಟ್ಟಡಕ್ಕೆ ಹೊಸ ರೂಪುರೇಷೆ ನೀಡಲಾಗುತ್ತದೆ. ಸರ್ಕಾರ ಅನುಮತಿ ನೀಡಿದರೆ, ಭವ್ಯ ಕಟ್ಟಡ ಮಾಡಲಿದ್ದೇವೆ ಎಂದರು. ಉತ್ತಮ ಸ್ಥಳದಲ್ಲಿ ಕೋರ್ಟ್ ಸ್ಥಾಪಿತವಾಗಬೇಕಾಗಿತ್ತು. ಆದರೆ, ಇಲ್ಲಿನ ಇಕ್ಕಟ್ಟಿನ ಸ್ಥಳದಲ್ಲಿ ಹಾಗೂ ಜನರು ಬಾರದ ಸ್ಥಳದಲ್ಲಿ ಕೋರ್ಟ್ ಕಟ್ಟಡ ನೀಡಿರುವುದು ಅಸಮಾಧಾನವಿದೆ. ಇಲ್ಲಿನ ಕೋರ್ಟ್ ಸಾಕಾಗಲ್ಲ. ಇಲ್ಲಿ 63 ಜನ ವಕೀಲರಿದ್ದು, ಒಂದು ಸಾವಿರ ಕೇಸ್ ಇರುತ್ತಿದ್ದವು. ಈಗ ಕಂಪ್ಲಿಯಲ್ಲೇ ನ್ಯಾಯಾಲಯ ಸ್ಥಾಪಿತವಾಗಿದೆ. ಇದರಿಂದ ಈ ಭಾಗದ ಜನರು ನ್ಯಾಯ ಪಡೆಯುವ ಜೊತೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಲಿದ್ದಾರೆ. ಜನರ ಹಿತರಕ್ಷಣೆ ಹಾಗೂ ಜನರು ತಮ್ಮ ಹಕ್ಕುಗಳನ್ನು ಪಡೆದು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದಾರೆ ಎಂದರು. ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಸದಸ್ಯ ಅನೀಲ್ ಕುಮಾರ್ ಅವರು ಮಾತನಾಡಿ, ಕಂಪ್ಲಿಯಲ್ಲಿ ಈಗ ನ್ಯಾಯಾಲಯ ಸ್ಥಾಪನೆಗೊಂಡಿದೆ. ಕಂಪ್ಲಿ ಬಳಿಯಲ್ಲಿ ಮೀಸಲಿಸಿರುವ 3.12 ಎಕರೆ ಜಾಗದಲ್ಲಿ ಸುಮಾರು 25 ಕೋಟಿ ರೂ. ಅನುದಾನ ಮಂಜೂರು ಮಾಡಿಸಿ, ಭವ್ಯ ಕಟ್ಟಡ ನಿರ್ಮಿಸಿಕೊಡುವ ಭರವಸೆಯನ್ನು ಶಾಸಕ ಜೆ.ಎನ್.ಗಣೇಶ ನೀಡಿದ್ದಾರೆ. ಸಕಾಲದಲ್ಲಿ ಕಕ್ಷಿದಾರರಿಗೆ ನ್ಯಾಯ ಒದಗಿಸಿಕೊಡುವ ನಿಟ್ಟಿನಲ್ಲಿ ವಕೀಲರು ಮುಂದಾಗಬೇಕು ಎಂದರು. ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಜಿ.ಶಾಂತಿ, ಎಸ್.ಇಸ್ಮಾಯಿಲ್ ಜಬಿವುಲ್ಲಾ, ಕರ್ನಾಟಕ ರಾಜ್ಯ ವಕೀಲರ ಪರಿಷತ್ ಸದಸ್ಯ ಜೆ.ಎಂ.ಅನಿಲ್ ಕುಮಾರ, ಲೋಕೋಪಯೋಗಿ ಇಇ ಬಿ.ವಿಜಯ ಭಾಸ್ಕರ್, ವಕೀಲರಾದ ಪ್ರಭಾಕರ, ಹರೀಶ್, ರುದ್ರಪ್ಪ, ಶಿವಪ್ಪ, ಯಂಕಪ್ಪ, ನಟರಾಜ, ಹುಲುಗಪ್ಪ, ವೀರಣ್ಣ, ಮಾರುತಿಸಿಂಗ್, ಮೋಹನ್ ಕುಮಾರ್ ದಾನಪ್ಪ, ಮುಂಖಡರಾದ ಕೆ.ಎಂ.ಹೇಮಯ್ಯಸ್ವಾಮಿ, ಹೊಸಕೋಟೆ ಜಗದೀಶ, ಜಿ.ರಾಮಣ್ಣ, ಬಿ.ಸಿದ್ದಪ್ಪ ಸೇರಿದಂತೆ ಅನೇಕರಿದ್ದರು. -----------

ಭಾನುವಾರ, ಏಪ್ರಿಲ್ 26, 2026

ಸಂಡೂರು ಸಂಕಲ್ಪ ಸಮರ್ಪಣಾ ಸಮಾವೇಶ-2 ಕಾರ್ಯಕ್ರಮದಲ್ಲಿ ಸಚಿವ ಸಂತೋಷ್ ಎಸ್.ಲಾಡ್ ಭರವಸೆ | ಮುಂದಿನ ದಿನಗಳಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ

ಬಳ್ಳಾರಿ,ಏ.26(ಕರ್ನಾಟಕ ವಾರ್ತೆ): ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ, ಕಾರ್ಮಿಕರ ಆಹಾರ, ಬಟ್ಟೆ ಮತ್ತು ವಸತಿ ಅಗತ್ಯತೆಗಳನ್ನು ಪರಿಗಣಿಸಿ, ಚರ್ಚಿಸಿ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಅವರು ಹೇಳಿದರು. ಸಂಡೂರು ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸಂಡೂರು ತಾಲ್ಲೂಕಿನ ತಾಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ಸಂಡೂರು ಸಂಕಲ್ಪ ಸಮರ್ಪಣಾ ಸಮಾವೇಶ-2 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ಸರ್ಕಾರವು ಅಸಂಘಟಿತ ವಲಯದ ಕಾರ್ಮಿಕರ ಏಳಿಗೆಗೆ ಬದ್ಧವಾಗಿದ್ದು, ಅಂಬೇಡ್ಕರ್ ಸಹಾಯಹಸ್ತ ಕಾರ್ಯಕ್ರಮದ ಮೂಲಕ ವಿವಿಧ ಅಸಂಘಟಿತ ವಲಯಗಳ ಜನರನ್ನು ಮುಖ್ಯವಾಹಿನಿಗೆ ತರಲಾಗುತ್ತಿದೆ ಎಂದರು. ಅಮೆಜಾನ್, ಜೊಮ್ಯಾಟೊ, ಸ್ವಿಗ್ಗಿ ಮುಂತಾದ ಆನ್‌ಲೈನ್ ಕಂಪನಿಗಳಲ್ಲಿ ಕೆಲಸ ಮಾಡುವ ಡೆಲಿವರಿ ಬಾಯ್‌ಗಳ ಹಿತರಕ್ಷಣೆಗಾಗಿ ಭಾರತದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಗಿಗ್ ವರ್ಕರ್ಸ್ ಬಿಲ್ ಕಾನೂನು ತರಲಾಗಿದೆ. ಚಾಲಕರು ಮತ್ತು ಕ್ಲೀನರ್‌ಗಳ ಹಿತದೃಷ್ಟಿಯಿಂದ ಸ್ಮಾರ್ಟ್ ಕಾರ್ಡ್ ವಿತರಿಸುವ ಟ್ರಾನ್ಸ್ಪೋರ್ಟ್ ಬಿಲ್ ಯೋಜನೆ ಜಾರಿಯಲ್ಲಿದೆ. ಅದರಂತೆ ಚಿತ್ರರಂಗದ ಕಾರ್ಮಿಕರು ಹಾಗೂ ಮನೆಗೆಲಸ ಮಾಡುವ ಮಹಿಳೆಯರ ಸಾಮಾಜಿಕ ಭದ್ರತೆಗಾಗಿ ಸಿನಿ ಬಿಲ್ ಮತ್ತು ಡೊಮೆಸ್ಟಿಕ್ ಬಿಲ್ ನಂತಹ ಹೊಸ ಕಾನೂನುಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು. ಇಡೀ ದೇಶದಲ್ಲೇ ಇಂತಹ ಬೃಹತ್ ಜನಪರ ಯೋಜನೆಗಳು ಎಲ್ಲಿಯೂ ಇಲ್ಲ. ಗ್ಯಾರಂಟಿ ಯೋಜನೆಗಳಿಗಾಗಿ ವರ್ಷಕ್ಕೆ ಸುಮಾರು 60,000 ಕೋಟಿ ರೂಪಾಯಿಗಳನ್ನು ವ್ಯಯಿಸಲಾಗುತ್ತಿದೆ. ಐದು ವರ್ಷಕ್ಕೆ ಇದು ಸುಮಾರು 3 ಲಕ್ಷ ಕೋಟಿ ರೂಪಾಯಿಗಳಾಗುತ್ತದೆ ಎಂದು ತಿಳಿಸಿದರು. ನಾವು ನಮ್ಮ ಮಕ್ಕಳಿಗೆ ಸ್ಥಳೀಯ ಮಾತ್ರವಲ್ಲದೆ, ಬೇರೆ ಬೇರೆ ಕಡೆಗಳಲ್ಲಿ ಉದ್ಯೋಗ ಅವಕಾಶಗಳನ್ನು ಹುಡುಕಬೇಕು. ಸ್ಥಳೀಯರಿಗೆ ಉದ್ಯೋಗ ಕೊಡಿಸುವಲ್ಲಿ ನಾವು ನಮ್ಮ ಪ್ರಯತ್ನವನ್ನು ಮುಂದುವರಿಸುತ್ತೇವೆ. ಅಗತ್ಯವಾದಲ್ಲಿ ಈ ಭಾಗದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವರು ಹೇಳಿದರು. ಸಂಡೂರು ವಿಧಾನಸಭೆ ಕ್ಷೇತ್ರದ ಶಾಸಕರಾದ ಈ.ಅನ್ನಪೂರ್ಣ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಡೂರು ತಾಲ್ಲೂಕಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದು, ತಾಲೂಕಿನ ಒಟ್ಟು 175 ಶಾಲೆಗಳ ಪೈಕಿ 65 ಶಾಲೆಗಳನ್ನು ‘ಮಾದರಿ ಶಾಲೆ'ಗಳನ್ನಾಗಿ ರೂಪಿಸಲಾಗಿದೆ. ಉಳಿದ 110 ಶಾಲೆಗಳ ಅಭಿವೃದ್ಧಿಗಾಗಿ ಈಗಾಗಲೇ ರೂಪರೇಷೆಗಳನ್ನು ಸಿದ್ಧಪಡಿಸಲಾಗಿದೆ. ಅಂಗನವಾಡಿಯಿAದ ಸ್ನಾತಕೋತ್ತರ ಪದವಿಯವರೆಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಹೇಳಿದರು. ತಾಳೂರು ಗ್ರಾಮದ ಶಾಲೆಯನ್ನು ಪಿಯು ಕಾಲೇಜಿಗೆ ಮೇಲ್ದರ್ಜೆಗೇರಿಸಲಾಗಿದ್ದು, ಈ ಶೈಕ್ಷಣಿಕ ವರ್ಷದಿಂದಲೇ ತರಗತಿಗಳು ಆರಂಭವಾಗಿವೆ. ಮುಂದಿನ ವರ್ಷದಿಂದ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿ ‘ಮೈನಿಂಗ್ ಡಿಪ್ಲೊಮಾ' ಕಾಲೇಜು ಹಾಗೂ ಸಂಡೂರಿನಲ್ಲಿ ಹೊಸದಾಗಿ ನರ್ಸಿಂಗ್ ಕಾಲೇಜು ಪ್ರಾರಂಭವಾಗಲಿದೆ. ಶೈಕ್ಷಣಿಕ ಸುಧಾರಣೆಯ ಫಲವಾಗಿ ಸಂಡೂರು ತಾಲೂಕು ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಬಳ್ಳಾರಿ ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮೂರನೇ ಸ್ಥಾನ ಪಡೆದಿದೆ ಎಂದು ಹರ್ಷ ವ್ಯಕ್ತಪಡಿಸಿದರು. ತಾಲ್ಲೂಕಿನ ಸುಶೀಲಾನಗರ, ದರೋಜಿ, ಯಶವಂತನಗರ ಮತ್ತು ಕುರೆಕುಪ್ಪ ಗ್ರಾಮಗಳಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ತೋರಣಗಲ್ಲು ಮತ್ತು ಚೋರನೂರು ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ತಾಲೂಕಿನ ಎಲ್ಲಾ ಹಳ್ಳಿಗಳಿಗೆ ಉತ್ತಮ ರಸ್ತೆ ಸಂಪರ್ಕ ಕಲ್ಪಿಸುವ ಮೂಲಕ ಸಾಮಾಜಿಕ ಬದಲಾವಣೆಗೆ ದಾರಿ ಮಾಡಿಕೊಡಲಾಗಿದೆ ಎಂದರು. ಸAಡೂರಿನ ಅಭಿವೃದ್ಧಿಯ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾರ್ಗದರ್ಶನ ಮತ್ತು ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಂಸದ ತುಕಾರಾಮ್ ಸಹಕಾರವಿದೆ. ಸಂಡೂರನ್ನು ‘ಹಿಂದುಳಿದ ತಾಲೂಕು' ಎಂಬ ಹಣೆಪಟ್ಟಿಯಿಂದ ಮುಕ್ತಗೊಳಿಸಿ ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ಸಂಕಲ್ಪವನ್ನು ಹೊಂದಲಾಗಿದೆ ಎಂದು ಒತ್ತಿ ಹೇಳಿದರು. ಬಳ್ಳಾರಿ ಲೋಕಸಭೆ ಕ್ಷೇತ್ರದ ಸಂಸದ ಈ.ತುಕಾರಾಮ್ ಅವರು ಮಾತನಾಡಿ, ಎರಡನೇ ಸಂಡೂರು ಸಂಕಲ್ಪ ಸಮರ್ಪಣಾ ಸಮಾವೇಶ ಈ ಕಾರ್ಯಕ್ರಮವು ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ವ್ಯವಸ್ಥೆ ಮತ್ತು ಕಳೆದ ಎರಡು ದಶಕಗಳಲ್ಲಿ ಸಂಡೂರು ತಾಲ್ಲೂಕಿನಲ್ಲಿ ನಡೆದ ಅಭಿವೃದ್ಧಿ ಪಥವನ್ನು ಬಿಂಬಿಸುವ ಉದ್ದೇಶ ಹೊಂದಿದೆ ಎಂದು ಹೇಳಿದರು. ಸಂಡೂರಿನ ಸರ್ವತೋಮುಖ ಅಭಿವೃದ್ಧಿಗೆ 2004ರಲ್ಲಿಯೇ ಅಡಿಪಾಯ ಹಾಕಲಾಯಿತು. 2004ರಲ್ಲಿ ಮೊದಲ ಬಾರಿಗೆ ಶಾಸಕರಾದ ನಂತರ, ಸಂಡೂರಿನ ಮೂಲಭೂತ ಸೌಕರ್ಯಗಳಾದ ಶಿಕ್ಷಣ, ಆರೋಗ್ಯ, ರಸ್ತೆ ಮತ್ತು ನೀರಾವರಿ ಕ್ಷೇತ್ರಗಳಿಗೆ ಹೊಸ ಚೈತನ್ಯ ನೀಡಿದರು. ಕ್ಷೇತ್ರದ ಅಭಿವೃದ್ಧಿಯನ್ನು ‘ನಂದಾದೀಪ’ ಮತ್ತು ‘ನಾಂದಿ’ಯAತೆ ಮುಂದುವರಿಸಿಕೊAಡು ಬರಲಾಗುತ್ತಿದೆ. ಶಾಸಕರಾದ ಅನ್ನಪೂರ್ಣ ಅವರು ಸಹ ಇದೇ ಹಾದಿಯಲ್ಲಿ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು. ಆರೋಗ್ಯ ಸೇವೆಗಳು ತಲುಪಿಸಲು ಕ್ಲಿನಿಕ್ ಆನ್ ವೀಲ್ಸ್ ಮೂಲಕ ದೇಶದಲ್ಲೇ ಮೊದಲ ಬಾರಿಗೆ ಎನ್ನಬಹುದಾದ ರೀತಿಯಲ್ಲಿ, 13 ಸಂಚಾರಿ ವಾಹನಗಳ ಮೂಲಕ ಜನರ ಮನೆಬಾಗಿಲಿಗೆ ಚಿಕಿತ್ಸೆ ನೀಡಲಾಗುತ್ತಿದೆ. 2020 ರಿಂದ ಈವರೆಗೆ ಸುಮಾರು 8,30,000 ಜನರಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಒದಗಿಸಲಾಗಿದೆ. ವಾರ್ಷಿಕವಾಗಿ ಸರಾಸರಿ 1.60 ಲಕ್ಷ ಜನರು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದರು. ಈ ಭಾಗದ ಕೋಡಾಲು, ಭುಜಂಗನಗರ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸಲು 76 ಕೋಟಿ ರೂ. ವೆಚ್ಚದ ಯೋಜನೆ ಜಾರಿಯಲ್ಲಿದೆ. ತೋರಣಗಲ್ಲು ಮತ್ತು ದರೋಜಿ ಭಾಗದ ಗ್ರಾಮಗಳಿಗೆ ತುಂಗಭದ್ರಾ ನದಿಯಿಂದ ನೀರು ತರಲು 125 ಕೋಟಿ ರೂ. ವೆಚ್ಚದ ಕಾಮಗಾರಿ ನಡೆಯುತ್ತಿದೆ. ಬನ್ನಹಟ್ಟಿ ಮತ್ತು ವಿಠಲಾಪುರ ಭಾಗದಲ್ಲಿ ಚೆಕ್ ಡ್ಯಾಂ ನಿರ್ಮಾಣ ಮತ್ತು ಕೆರೆ ತುಂಬಿಸುವ ಯೋಜನೆಗಳಿಗಾಗಿ ಒಟ್ಟು 250 ಕೋಟಿ ರೂ. ವ್ಯಯಿಸಲಾಗಿದೆ. ನಾರಾಯಣಪುರ - ರಾಜಾಪುರ ರಸ್ತೆ ಸುಮಾರು 32 ಕೋಟಿ ರೂ. ವೆಚ್ಚದಲ್ಲಿ ಈ ಭಾಗದ ರಸ್ತೆಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ವಡ್ಡು ಬೈಪಾಸ್ ರಸ್ತೆ ರೈಲ್ವೆ ಗೇಟ್ ಸಮಸ್ಯೆ ನಿವಾರಿಸಲು 65 ಕೋಟಿ ರೂ. ವೆಚ್ಚದಲ್ಲಿ ಬೈಪಾಸ್ ರಸ್ತೆ ನಿರ್ಮಿಸಲಾಗುತ್ತಿದ್ದು, ಮುಂದಿನ ಎರಡು ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಮಗ್ರ ಅಭಿವೃದ್ಧಿ ಕಾಮಗಾರಿಗಳ ಚಿತ್ರಣ ಬಿಚ್ಚಿಟ್ಟರು. ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಡಿ ಸಂಡೂರು ತಾಲೂಕಿಗೆ ಮಾತ್ರ ಸುಮಾರು 660 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇದು ಜನರ ಆರ್ಥಿಕ ಸ್ಥಿತಿಯನ್ನು ಸುಧಾರಿಸುತ್ತಿದೆ. ನಂಜುAಡಪ್ಪ ವರದಿ ಮತ್ತು ಗೋಪಾಲ್ ಗೌಡರ ಸಮಿತಿಯ ಆಶಯದಂತೆ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕವಾಗಿ ಸಂಡೂರನ್ನು ಮೊದಲ ಸ್ಥಾನಕ್ಕೆ ತರುವ ಸಂಕಲ್ಪ ಮಾಡಲಾಗಿದೆ ಎಂದರು. ಕಲಬುರಗಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತ ಡಾ.ವೆಂಕಟೇಶ್ ಅ.ಶಿಂಧಿಹಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಅಸಂಘಟಿತ ವಲಯದ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಸರ್ಕಾರವು ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಕಾರ್ಮಿಕ ಸಚಿವರ ನೇತೃತ್ವದಲ್ಲಿ ಅಸಂಘಟಿತ ಕಾರ್ಮಿಕ ಕಲ್ಯಾಣ ಮಂಡಳಿಯು ಕಾರ್ಮಿಕರ ಕನಸುಗಳಿಗೆ ಆಸರೆಯಾಗಿ ನಿಂತಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮೋಟಾರ್ ಸಾರಿಗೆ ಮತ್ತು ಸಂಬAಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಯಿತು ಹಾಗೂ ಸಂಡೂರು ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೊಳಿಸಲಾಯಿತು. ಫಲಾನುಭವಿಗಳಿಗೆ ಸೌಲಭ್ಯ ಹಂಚಿಕೆ ಮತ್ತು ವಿವಿಧ ಸಾಧಕರಿಗೆ ಸನ್ಮಾನಿಸಲಾಯಿತು. *ಆಕರ್ಷಿಸಿದ ಮಾಹಿತಿ ಮಳಿಗೆಗಳು:* ಕಾರ್ಯಕ್ರಮದ ಆವರಣದಲ್ಲಿ ವಿವಿಧ ಇಲಾಖೆಗಳ ಯೋಜನೆಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ಕುರಿತ ಮಾಹಿತಿ ನೀಡುವ ಮಳಿಗೆಗಳನ್ನು ಹಾಕಲಾಗಿತ್ತು. ವೇದಿಕೆಯಲ್ಲಿ ಸಂಡೂರು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಬಹುಗ್ರಾಮ ಕುಡಿಯುವ ನೀರು, ಶಿಕ್ಷಣ, ವಸತಿ, ರಸ್ತೆ ಸೇರಿದಂತೆ ಹಲವು ಕಾಮಗಾರಿಗಳಿಗೆ ಬಿಡುಗಡೆಯಾದ ಅನುದಾನ, ಕೈಗೊಂಡ ಯೋಜನೆಗಳ ಅಭಿವೃದ್ಧಿ ಕಾಮಗಾರಿಗಳ ಸಮಗ್ರ ಚಿತ್ರಣ ಒಳಗೊಂಡ ವಿಡಿಯೋ ತುಣುಕು ಪ್ರದರ್ಶಿಸಲಾಯಿತು. ಬಳಿಕ ಸಂವಿಧಾನ ಪ್ರಸ್ತಾವನೆ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷö್ಮಣ್, ಮಾಜಿ ವಿಧಾನಪರಿಷತ್ ಸದಸ್ಯ ಕೆ.ಎಸ್.ಎಲ್. ಸ್ವಾಮಿ, ವಿಜಯನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಷಯ ಲಾಡ್, ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಉಪಾಧ್ಯಕ್ಷೆ ಆಶಾಲತಾ ಸೋಮಪ್ಪ, ಸಂಡೂರು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ನೂರುದ್ದೀನ್.ಎಸ್., ಸಂಡೂರು ತಹಶೀಲ್ದಾರ ಅನಿಲ್ ಕುಮಾರ್.ಜಿ, ಸಂಡೂರು ತಾಪಂ ಇಓ ಮಡಗಿನ ಬಸಪ್ಪ, ಬಳ್ಳಾರಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಎಸ್.ಜಿ.ಖೈನೂರು ಸೇರಿದಂತೆ ಜನಪ್ರತಿನಿಧಿಗಳು, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು. -----------

ಶನಿವಾರ, ಏಪ್ರಿಲ್ 25, 2026

ಬಳ್ಳಾರಿಯಲ್ಲಿ ಡಾ.ರಾಜ್‌ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ರಸದೌತಣ । ಡಾ.ರಾಜ್‌ಕುಮಾರ್ ಸಂತನಂತೆ ಬದುಕಿದ ಮಹಾನ್ ಚೇತನ: ಕೆ.ಇ.ಚಿದಾನಂದಪ್ಪ

ಬಳ್ಳಾರಿ,ಏ.25(ಕರ್ನಾಟಕ ವಾರ್ತೆ): ಡಾ. ರಾಜ್‌ಕುಮಾರ್ ಅವರು ಕೇವಲ ಒಬ್ಬ ನಟರಾಗಿರದೆ, ಸಂತನಂತೆ ಬದುಕಿದ ಮಹಾನ್ ಚೇತನ. ಸರಳ ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದರು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಾ.ರಾಜ್‌ಕುಮಾರ್ ಜನ್ಮದಿನಾಚರಣೆಯ ಅಂಗವಾಗಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಡಾ.ರಾಜ್ ಕುಮಾರ್ ಅವರಿಗೆ ಹಣ, ಅಧಿಕಾರ, ಯೌವನ ಮತ್ತು ರೂಪದಂತಹ ಎಲ್ಲ 'ಮದ'ಗಳು ಲಭ್ಯವಿದ್ದರೂ, ಅವುಗಳನ್ನು ಧಿಕ್ಕರಿಸಿ ವಿನಯವಂತಿಕೆಯಿಂದ ಬದುಕಿದವರು. ಅವರ ವ್ಯಕ್ತಿತ್ವವು ಎಲ್ಲ ಕಾಲಕ್ಕೂ ಎಲ್ಲ ಕಲಾವಿದರಿಗೂ ಮಾದರಿಯಾಗಿದೆ ಎಂದು ಬಣ್ಣಿಸಿದರು. ಸಮಾಜದಲ್ಲಿ ಇಂದು ಜಾತಿ ರಾಜಕಾರಣ ಮತ್ತು ಪ್ರತಿಯೊಂದು ಸಾಧನೆಯ ಹಿಂದೆ ಜಾತಿಯನ್ನು ಹುಡುಕುವ ಪ್ರವೃತ್ತಿ ಹೆಚ್ಚಾಗಿದೆ. ಆದರೆ ಡಾ. ರಾಜ್‌ಕುಮಾರ್ ಅವರು ಜಾತಿಯನ್ನು ಮೀರಿ ಬೆಳೆದ 'ಜಾತ್ಯತೀತ ಜ್ಯೋತಿ'ಯಾಗಿದ್ದರು. ಅಧಿಕಾರದ ಆಸೆಗಾಗಿ ಅವರು ಎಂದೂ ರಾಜಕೀಯಕ್ಕೆ ಬರಲಿಲ್ಲ, ಬದಲಾಗಿ ಕನ್ನಡ ನಾಡಿನ ಕಲೆ ಮತ್ತು ಸಂಸ್ಕೃತಿಯ ಪ್ರತಿಬಿಂಬವಾಗಿ ಉಳಿದರು ಎಂದು ಸ್ಮರಿಸಿದರು. ರಾಜ್‌ಕುಮಾರ್ ಅವರು ತಮ್ಮ ಸಿನಿಮಾಗಳ ಮೂಲಕ ನಾಡಿಗೆ ಯೋಗದ ಮಹತ್ವವನ್ನು ತಿಳಿಸಿಕೊಟ್ಟವರು. 'ಬಂಗಾರದ ಮನುಷ್ಯ' ಚಿತ್ರದ ಮೂಲಕ ಕೃಷಿಯ ಮಹತ್ವವನ್ನು ಸಾರಿದ್ದರಿಂದ ಅನೇಕ ಯುವಕರು ಕೃಷಿಯತ್ತ ಆಕರ್ಷಿತರಾಗಿದ್ದರು. ಅವರು ಸಿನಿಮಾದಲ್ಲಿ ತೋರಿದ ಆದರ್ಶಗಳನ್ನು ತಮ್ಮ ನಿಜ ಜೀವನದಲ್ಲೂ ಪಾಲಿಸಿಕೊಂಡು ಬಂದವರು ಎಂದು ತಿಳಿಸಿದರು. ಭಕ್ತ ಕುಂಬಾರ, ಭಕ್ತ ಕನಕದಾಸ, ಸಂತ ತುಕಾರಾಂ, ಬೇಡರ ಕಣ್ಣಪ್ಪ ಮತ್ತು ರಾಘವೇಂದ್ರ ಸ್ವಾಮಿಗಳ ಪಾತ್ರಗಳಲ್ಲಿ ನಟಿಸುವ ಮೂಲಕ ಆ ವ್ಯಕ್ತಿತ್ವಗಳ ಬಗ್ಗೆ ಸಾಮಾನ್ಯ ಜನರಿಗೂ ತಿಳಿಯುವಂತೆ ಮಾಡಿದರು. ಅವರ ಸರಳ ಸಜ್ಜನಿಕೆಯೇ ಅವರಿಗೆ ಇಂದಿಗೂ ಅಪಾರ ಅಭಿಮಾನಿಗಳನ್ನು ಗಳಿಸಿಕೊಟ್ಟಿದೆ ಎಂದರು. ಬಳ್ಳಾರಿಯ ಆಕಾಶವಾಣಿ ಎಫ್‌ಎಂ ಕೇಂದ್ರದ ಉದ್ಘೋಷಕರಾದ ಬಸವರಾಜ ಅಮಾತಿ ಅವರು ವಿಶೇಷ ಉಪನ್ಯಾಸ ನೀಡಿ, ಡಾ. ರಾಜ್‌ಕುಮಾರ್ ಅವರು ಏಪ್ರಿಲ್ 24, 1929 ರಂದು ಜನಿಸಿದರು. ಅವರ ತಂದೆ ಸಿಂಗಾನಲ್ಲೂರು ಪುಟ್ಟಸ್ವಾಮಯ್ಯನವರು ಅಪ್ರತಿಮ ರಂಗಭೂಮಿ ಕಲಾವಿದರಾಗಿದ್ದರು. ರಾಜ್ ಕುಮಾರ್ 'ಬೇಡರ ಕಣ್ಣಪ್ಪ' (1954) ಚಿತ್ರದ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದರು. ಅಲ್ಲಿಂದ ಆರಂಭವಾದ ಅವರ ಸಿನಿ ಪಯಣ ಸುಮಾರು 200 ರಿಂದ 205 ಚಿತ್ರಗಳಲ್ಲಿ ನಟಿಸಿದ್ದಾರೆ ಎಂದು ತಿಳಿಸಿದರು. *ಬಳ್ಳಾರಿಯೊಂದಿಗೆ ಸಂಬಂಧ:* ಡಾ. ರಾಜ್ ಅವರು ಕೇವಲ ನಟರಾಗಿರದೆ ಸಮಾಜ ಸೇವಕರಾಗಿಯೂ ಗುರುತಿಸಿಕೊಂಡಿದ್ದರು. 1995 ರಲ್ಲಿ ಬಳ್ಳಾರಿಯಲ್ಲಿ ರಸಮಂಜರಿ ಕಾರ್ಯಕ್ರಮ ನಡೆಸಿ, ಅದರಿಂದ ಬಂದ ಹಣವನ್ನು ರಂಗಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದರು. ಸರ್ಕಾರ ಪ್ರಶಸ್ತಿ ಘೋಷಿಸಿದಾಗ, ತಮಗಿಂತ ಮೊದಲು ಕುವೆಂಪು ಅವರಿಗೆ ಈ ಗೌರವ ಸಿಗಬೇಕು ಎಂದು ಅವರು ಬಯಸಿದ್ದರು. ನಂತರ ಇಬ್ಬರಿಗೂ ಜಂಟಿಯಾಗಿ ಈ ಪ್ರಶಸ್ತಿ ನೀಡಲಾಯಿತು. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯೊಂದಿಗೆ ಬಂದ ಹಣವನ್ನೆಲ್ಲಾ ಅವರು ಕನ್ನಡ ಸಾಹಿತ್ಯ ಪರಿಷತ್ತಿಗೆ ದತ್ತಿಯಾಗಿ ನೀಡಿದರು ಎಂದರು. ಡಾ.ರಾಜ್ ಕುಮಾರ್ ಅವರು ಸಹಕಲಾವಿದರಿಗೆ ಗೌರವ ನೀಡುತ್ತಿದ್ದರು. ಚಿತ್ರೀಕರಣದ ಸೆಟ್ ಅನ್ನು ದೇವಸ್ಥಾನವೆಂದು ಭಾವಿಸುತ್ತಿದ್ದ ಅವರು, ಅಲ್ಲಿ ಧೂಮಪಾನ ಅಥವಾ ಮದ್ಯಪಾನಕ್ಕೆ ಅವಕಾಶ ನೀಡುತ್ತಿರಲಿಲ್ಲ. ಸ್ವತಃ ಅವರೂ ಕೂಡ ತೆರೆಯ ಮೇಲೆ ಇಂತಹ ದೃಶ್ಯಗಳಲ್ಲಿ ನಟಿಸಲು ನಿರಾಕರಿಸುತ್ತಿದ್ದರು ಎಂದರು. *ಅಭಿಮಾನಿಗಳೇ ದೇವರು:* ತಿರುಪತಿಯಲ್ಲಿ ಸಾಮಾನ್ಯ ಸರತಿಯಲ್ಲಿ ನಿಂತು ದರ್ಶನ ಪಡೆದ ಘಟನೆಯ ನಂತರ, ಅವರು ತಮ್ಮ ಅಭಿಮಾನಿಗಳನ್ನು 'ಅಭಿಮಾನಿ ದೇವರುಗಳು' ಎಂದು ಕರೆಯಲು ಆರಂಭಿಸಿದರು. ಗೋಕಾಕ್ ಚಳವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕನ್ನಡ ಭಾಷೆಯ ಹಿತಾಸಕ್ತಿಗಾಗಿ ಶ್ರಮಿಸಿದರು. 'ಸಂಪತ್ತಿಗೆ ಸವಾಲ್' ಚಿತ್ರದ ಮೂಲಕ ಪೂರ್ಣ ಪ್ರಮಾಣದ ಗಾಯಕರಾದ ಅವರು, ಶಾಸ್ತ್ರೀಯ ಸಂಗೀತ ಮತ್ತು ಭಕ್ತಿಗೀತೆಗಳಿಗೂ ಧ್ವನಿಯಾದರು. ಅವರ 'ನಾದಮಯ' ಹಾಡು ಇಂದಿಗೂ ಜನಪ್ರಿಯವಾಗಿದೆ. ವಿಶೇಷವೆಂದರೆ, ಭಕ್ತಿಗೀತೆಗಳ ಗಾಯನದಿಂದ ಬಂದ ಹಣವನ್ನು ಅವರು ಎಂದಿಗೂ ಸ್ವಂತಕ್ಕೆ ಬಳಸದೆ ಮಠ-ಮಾನ್ಯಗಳಿಗೆ ನೀಡುತ್ತಿದ್ದರು ಎಂದು ತಿಳಿಸಿದರು. ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಗೆ ಡಾ. ರಾಜ್‌ಕುಮಾರ್ ಅವರು ನೀಡಿದ ಕೊಡುಗೆ ಅನನ್ಯ. ಅವರ ಸರಳತೆ ಮತ್ತು ಆದರ್ಶಗಳು ಇಂದಿನ ತಲೆಮಾರಿಗೆ ದಾರಿದೀಪವಾಗಿವೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಕೊಪ್ಪಳದ ಕ್ಷಿತಿ ಮ್ಯೂಸಿಕಲ್ ಈವೆಂಟ್ಸ್ ನ ತಂಡದವರು ಡಾ.ರಾಜ್ ಕುಮಾರ್ ನಟಿಸಿದ ಕನ್ನಡ ಚಲನಚಿತ್ರ ಗೀತೆಗಳ ಗಾಯನ ರಸದೌತಣವನ್ನು ಕಲಾಭಿಮಾನಿಗಳಿಗೆ ಉಣಬಡಿಸಿದರು. ಸಂವಿಧಾನ ಪ್ರಸ್ತಾವನೆ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ನಿಷ್ಠಿ ರುದ್ರಪ್ಪ, ಕನ್ನಡಪರ ಹೋರಾಟಗಾರರು ಹಾಗೂ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಸಿರಿಗೇರಿ ಪನ್ನರಾಜ್, ಕನ್ನಡ ಮತ್ತು ಸಂಸ್ಕೃತಿಯ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ವಿ.ಸಿ.ಗುರುರಾಜ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು, ಡಾ.ರಾಜ್ ಕುಮಾರ್ ಕಲಾಭಿಮಾನಿಗಳು, ಸಾರ್ವಜನಿಕರು, ಹಾಗೂ ಇತರರು ಉಪಸ್ಥಿತರಿದ್ದರು. -------------

ಶುಕ್ರವಾರ, ಏಪ್ರಿಲ್ 24, 2026

ಬಳ್ಳಾರಿಯಲ್ಲಿ ಮಧ್ಯರಾತ್ರಿ ಅಕ್ರಮ ಮರ ಕಟಾವು: ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಹಲ್ಲೆ, ಮೊಬೈಲ್ ಜಪ್ತಿ - ಪ್ರಕರಣ ದಾಖಲು

ಬಳ್ಳಾರಿ,ಏ.24(ಕರ್ನಾಟಕ ವಾರ್ತೆ): ನಗರದ ವಿದ್ಯಾನಗರ ವೃತ್ತದಿಂದ ಕೊಳಗಲ್ ರಸ್ತೆಯವರೆಗೆ ರಸ್ತೆ ಅಗಲೀಕರಣ ಕಾಮಗಾರಿಯ ನೆಪದಲ್ಲಿ ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ಮರಗಳನ್ನು ಕಟಾವು ಮಾಡುತ್ತಿದ್ದ ಗುತ್ತಿಗೆದಾರರ ಕೃತ್ಯವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದಾಗ, ಈ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅಧಿಕಾರಿಯ ಮೊಬೈಲ್ ಹಾನಿಗೊಳಿಸಿದ ಆರೋಪದ ಮೇಲೆ ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲಾಗಿದೆ. *ಘಟನೆಯ ವಿವರ:* ಏ.23 ರಂದು ರಾತ್ರಿ 10:30ರ ಸುಮಾರಿಗೆ ಚೈನಾಜ್ 1.10 ಕಿ.ಮೀ ನಿಂದ 1.60 ಕಿ.ಮೀ ವರೆಗೆ ರಸ್ತೆ ಬದಿಯ ಮರಗಳನ್ನು ಅಕ್ರಮವಾಗಿ ಕಟಾವು ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬಳ್ಳಾರಿ ಶಹರ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸುನೀಲಕುಮಾರ ಆರ್. ಚೌವ್ಹಾಣ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಅನುಮತಿ ಪತ್ರ ಕೇಳಿದಾಗ, ಕಾಮಗಾರಿ ತುರ್ತಾಗಿ ಆಗಬೇಕಿದೆ ಎಂಬ ಹಾರಿಕೆ ಉತ್ತರದೊಂದಿಗೆ ಮರ ಕಟಾವು ಮುಂದುವರಿಸಲಾಯಿತು. ಇದನ್ನು ತಡೆಯಲು ಪ್ರಯತ್ನಿಸಿದಾಗ ಗುತ್ತಿಗೆದಾರರ ಸಹಚರರಾದ ತಿಲ್ಲು ಮತ್ತು ರವಿ ಮೋಕಾ ಎಂಬುವವರು ವಾಗ್ವಾದಕ್ಕಿಳಿದು, ಕೃತ್ಯವನ್ನು ಚಿತ್ರೀಕರಿಸುತ್ತಿದ್ದ ಅಧಿಕಾರಿಯ ಮೊಬೈಲ್ ಫೋನ್ ಕಿತ್ತುಕೊಂಡು ನೆಲಕ್ಕೆ ಎಸೆದು ಹಾನಿಗೊಳಿಸಿದ್ದಾರೆ. ನಂತರ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಮರ ಕಟಾವು ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಯಿತು. *ವಶಪಡಿಸಿಕೊಂಡ ಸ್ವತ್ತು ಮತ್ತು ದಾಖಲಾದ ಪ್ರಕರಣ:* ಸ್ಥಳ ಪರಿಶೀಲನೆಯಲ್ಲಿ ಒಟ್ಟು 25 ಮರಗಳನ್ನು (21 ತಪಸಿ, 02 ಬೇವು, 02 ಅರಳಿ) ಅಕ್ರಮವಾಗಿ ಕಟಾವು ಮಾಡಿರುವುದು ಪತ್ತೆಯಾಗಿದೆ. ಅಂದಾಜು 5 ಟನ್ ಸೌದೆಯನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡಿದೆ. ಕರ್ನಾಟಕ ಅರಣ್ಯ ಕಾಯ್ದೆ 1963 ಮತ್ತು ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆ 1976 ರ ಅಡಿಯಲ್ಲಿ ಎನ್.ಸಿ ನಂ 01/2026-27 ರಂತೆ ಪ್ರಕರಣ ದಾಖಲಾಗಿದೆ. ನ್ಯಾಯಾಲಯದ ಅನುಮತಿ ಪಡೆದು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ರಂತೆ ಶ್ರೀನಿವಾಸ್ (ಶ್ರೀನಿವಾಸ್ ಇನ್ಫಾç ಪ್ರಾಜೆಕ್ಟ್ ಪ್ರೆöÊ.ಲಿ) ಮತ್ತು ಇತರ ನಾಲ್ವರ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗಿದೆ ಮತ್ತು ಕರ್ತವ್ಯಕ್ಕೆ ಅಡ್ಡಿ ಮತ್ತು ಸಾಕ್ಷö್ಯ ನಾಶಪಡಿಸಿದ ಹಿನ್ನೆಲೆಯಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ನೀಡಲಾಗಿದೆ. *ನಿಯಮಗಳ ಉಲ್ಲಂಘನೆ:* ಈ ರಸ್ತೆ ಕಾಮಗಾರಿಗಾಗಿ ಒಟ್ಟು 233 ಮರಗಳ ಕಟಾವಿಗೆ ಲೋಕೋಪಯೋಗಿ ಇಲಾಖೆ ಅನುಮತಿ ಕೋರಿತ್ತು. ಆದರೆ, ಪರಿಸರ ಸಂರಕ್ಷಣೆ ದೃಷ್ಟಿಯಿಂದ 139 ಮರಗಳನ್ನು ಉಳಿಸಿಕೊಂಡು ಫುಟ್‌ಪಾತ್ ವಿನ್ಯಾಸ ಬದಲಿಸುವಂತೆ ಅರಣ್ಯ ಇಲಾಖೆಯು ಮಾರ್ಚ್ 23ರಂದೇ ಪತ್ರ ಬರೆದಿತ್ತು. ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡದ ಗುತ್ತಿಗೆದಾರರು, ಏಕಾಏಕಿ ತಡರಾತ್ರಿ ಈ ದುಷ್ಕೃತ್ಯ ಎಸಗಿದ್ದಾರೆ. ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆ 1976 ರ ಪ್ರಕಾರ 50ಕ್ಕೂ ಹೆಚ್ಚು ಮರಗಳ ಕಟಾವಿಗೆ ಸಾರ್ವಜನಿಕ ಆಕ್ಷೇಪಣೆ ಪಡೆಯುವುದು ಕಡ್ಡಾಯ. ಯಾವುದೇ ಆಕ್ಷೇಪಣೆ ಇಲ್ಲದಿದ್ದಲ್ಲಿ ರಸ್ತೆ ಅಗಲೀಕರಣದ ನಂತರ ಗಿಡಗಳನ್ನೂ ನೆಡಲು ಅನ್ವಯಿಸುವ ಶುಲ್ಕಗಳನ್ನು ಪಾವತಿಸಿಕೊಂಡು ಅನುಮತಿ ನೀಡಲು ಕ್ರಮವಹಿಸಬೇಕಾಗಿರುತ್ತದೆ. ಆದರೆ ಕಾನೂನು ಗಾಳಿಗೆ ತೂರಿ ಈ ಕೃತ್ಯ ಎಸಗಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಯ ಬಳ್ಳಾರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಬಸವರಾಜ ಕೆ.ಎನ್ ಅವರು ತಿಳಿಸಿದ್ದಾರೆ. ------------

ಬಿಡಿ ಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ

ಬಳ್ಳಾರಿ,ಏ.24(ಕರ್ನಾಟಕ ವಾರ್ತೆ): 2025-26ರ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಬಳ್ಳಾರಿ ತಾಲ್ಲೂಕಿನ ಬೈರದೇವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯು ಅಭೂತಪೂರ್ವ ಯಶಸ್ಸು ಸಾಧಿಸಿದೆ. ಶಾಲೆಯ ಹಲವು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಶಾಲೆಯ ಒಟ್ಟು ಏಳು ವಿದ್ಯಾರ್ಥಿಗಳು ಶೇ. 95 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ಗಮನ ಸೆಳೆದಿದ್ದಾರೆ. ರಾಮ್ ಬಹದ್ದೂರ್ ರೆಡ್ಡಿ.ಬಿ-612 ಅಂಕ(ಶೇ.97.92) ಕೆ.ಎಸ್.ಸಿAಚನ-612 ಅಂಕ(ಶೇ.97.92) ಜಿ.ಸAಜಯ್-606 ಅಂಕ(ಶೇ.96.96) ಕೆ.ಶಿವಕುಮಾರ್-604 ಅಂಕ(ಶೇ.96.64) ಜಿ.ಕೆ.ಅAಕಿತ-601 ಅಂಕ(ಶೇ.96.16) ಗAಗಾಧರ ಗೌಡ.ಎಂ-600 ಅಂಕ(ಶೇ.96) ಪಿ.ಅಮೃತ-599 ಅಂಕ(ಶೇ.95.84) *ವಿಷಯವಾರು ನೂರಕ್ಕೆ ನೂರು ಅಂಕಗಳು:* ವಿದ್ಯಾರ್ಥಿಗಳು ಕೇವಲ ಒಟ್ಟಾರೆ ಫಲಿತಾಂಶದಲ್ಲಷ್ಟೇ ಅಲ್ಲದೆ, ಪ್ರತ್ಯೇಕ ವಿಷಯಗಳಲ್ಲೂ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಕನ್ನಡ ವಿಷಯದಲ್ಲಿ 04 ವಿದ್ಯಾರ್ಥಿಗಳು, ಹಿಂದಿ ವಿಷಯದಲ್ಲಿ 01 ವಿದ್ಯಾರ್ಥಿ, ಗಣಿತದಲ್ಲಿ 01 ವಿದ್ಯಾರ್ಥಿ, ವಿಜ್ಞಾನ ವಿಷಯದಲ್ಲಿ 01 ವಿದ್ಯಾರ್ಥಿ ಸೇರಿದಂತೆ ಒಟ್ಟು 07 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ 100 ಕ್ಕೆ 100 ಅಂಕಗಳನ್ನು ಪಡೆಯುವ ಮೂಲಕ ಇತಿಹಾಸ ಬರೆದಿದ್ದಾರೆ. ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಗೆ ಶಾಲೆಯ ಪ್ರಾಂಶುಪಾಲರಾದ ಅನುಸೂಯ ಸೇರಿದಂತೆ ಬೋಧಕ- ಬೋಧಕೇತರ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ. ----------

ಏ.26 ರಂದು ಸಂಡೂರು ಸಂಕಲ್ಪ ಸಮರ್ಪಣಾ ಸಮಾವೇಶ-2 ಕಾರ್ಯಕ್ರಮ

ಬಳ್ಳಾರಿ,ಏ.24(ಕರ್ನಾಟಕ ವಾರ್ತೆ): ಸಂಡೂರು ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಏ.26 ರಂದು ಬೆಳಿಗ್ಗೆ 10 ಗಂಟೆಗೆ ಸಂಡೂರು ತಾಲ್ಲೂಕಿನ ತಾಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಸಂಡೂರು ಸಂಕಲ್ಪ ಸಮರ್ಪಣಾ ಸಮಾವೇಶ-2 ಕಾರ್ಯಕ್ರಮ ಆಯೋಜಿಸಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಅವರು ಘನ ಉಪಸ್ಥಿತಿ ಇರುವರು. ಸಂಡೂರು ವಿಧಾನಸಭೆ ಕ್ಷೇತ್ರದ ಶಾಸಕರಾದ ಈ.ಅನ್ನಪೂರ್ಣ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಳ್ಳಾರಿ ಲೋಕಸಭೆ ಕ್ಷೇತ್ರದ ಸಂಸದ ಈ.ತುಕಾರಾಮ್, ರಾಜ್ಯಸಭೆ ಸಂಸದ ಡಾ.ಸೈಯದ್ ನಾಸೀರ್ ಹುಸೇನ್, ವಿಧಾನಪರಿಷತ್ ಶಾಸಕರಾದ ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷö್ಮಣ, ವಿಜಯನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಷಯ ಲಾಡ್, ಸಂಡೂರು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ನೂರುದ್ದೀನ್.ಎಸ್ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಸಲ್ಮಾ ಕೆ.ಫಹೀಮ್, ಕಾರ್ಮಿಕ ಇಲಾಖೆಯ ಆಯುಕ್ತ ಡಾ.ಹೆಚ್.ಎನ್.ಗೋಪಾಲಕೃಷ್ಣ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಜಂಟಿ ಕಾರ್ಯದರ್ಶಿ ಹಾಗೂ ಜಂಟಿ ಕಾರ್ಮಿಕ ಆಯುಕ್ತ ಡಾ.ಎಸ್.ಬಿ. ರವಿಕುಮಾರ್, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರವಿ ಡಿ.ಚನ್ನಣ್ಣನವರ್, ಕಲಬುರಗಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತ ಡಾ.ವೆಂಕಟೇಶ್ ಅ.ಶಿಂಧಿಹಟ್ಟಿ, ದಾವಣಗೆರೆಯ ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಡಾ.ಅವಿನಾಶ್ ನಾಯಕ್, ಸಂಡೂರು ತಹಶೀಲ್ದಾರ ಅನಿಲ್ ಕುಮಾರ್.ಜಿ, ಸಂಡೂರು ತಾಪಂ ಇಓ ಮಡಗಿನ ಬಸಪ್ಪ ಸೇರಿದಂತೆ ಜನಪ್ರತಿನಿಧಿಗಳು, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿರುವರು ಎಂದು ಬಳ್ಳಾರಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಎಸ್.ಜಿ.ಖೈನೂರು ಅವರು ತಿಳಿಸಿದ್ದಾರೆ. -----------

ಏ.25 ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ,ಏ.24(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ 110/11 ಕೆ.ವಿಯ ಉತ್ತರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿರುವುರಿಂದ ಏ.25 ರಂದು ಬೆಳಿಗ್ಗೆ 08 ರಿಂದ ಮಧ್ಯಾಹ್ನ 03 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:* ಎಫ್-1 ಫೀಡರ್ ಮಾರ್ಗದ ಕಪ್ಪಗಲ್ಲು ರಸ್ತೆ, ಸಿದ್ದಾರ್ಥ ನಗರ ಕಾಲೋನಿ, ಹೌಸಿಂಗ್ ಬೋರ್ಡ್, ಬೀಚಿನಗರ, ಕೆ.ಇ.ಬಿ ಕ್ವಾರ್ಟಸ್ಸ್, ಭಗತ್ ಸಿಂಗ್ ನಗರ, ಹೆಚ್‌ಡಿಎಫ್‌ಸಿ ಬ್ಯಾಂಕ್, ಎಸಿ ಸ್ಟಿçÃಟ್, ಬಾಲಾಜಿ ನರ್ಸಿಂಗ್ ಹೋಮ್, ಲಾ ಕಾಲೇಜು, ಮುಲ್ಲಂಗಿ ಲೇಔಟ್, ಕನಕದುರ್ಗ ಲೇಔಟ್. ಎಫ್-2 ಫೀಡರ್ ಮಾರ್ಗದ ಗಾಂಧಿನಗರ, ಬಿ.ಎಸ್ ಕಾಂಪೌAಡ್, ರ‍್ರಿತಾತ ನಗರ, ಸೆಂಟ್ರಲ್ ಜೈಲ್, ಪಾರ್ವತಿ ನಗರ, ಮಾರುತಿ ಕಾಲೋನಿ, ಮೋಕ ರಸ್ತೆ, ಸೊಂತಲಿAಗಣ್ಣ ಕಾಲೋನಿ, ರೈಲ್ವೆ ಸ್ಟೇ಼ಷನ್, ಎಸ್.ಪಿ. ಬಂಗ್ಲೆ, ಮಹಿಳಾ ಕಾಲೇಜು ರಸ್ತೆ, ಗಾಂಧಿನಗರ, ಸೂರ್ಯ ಕಾಲೋನಿ. ಎಫ್-4 ಫೀಡರ್ ಮಾರ್ಗದ ಆಟೋ ನಗರ, ಎಸ್.ಆರ್.ಎಮ್ ಲೇಔಟ್, ಕನಕದಾಸ ನಗರ, ಕೆ.ಎ.ಐ.ಡಿ.ಬಿ ಕೈಗಾರಿಕಾ ಪ್ರದೇಶ. ಎಫ್-5 ಫೀಡರ್ ಮಾರ್ಗದ ಸಂಗನಕಲ್ಲು ಎನ್‌ಜೆವೈ ಫೀಡರ್ ಹಾಗೂ ಸಂಗನಕಲ್ಲು ಗ್ರಾಮದ ಸುತ್ತ-ಮುತ್ತಲಿನ ಪ್ರದೇಶಗಳು. ಎಫ್-7 ಫೀಡರ್ ಮಾರ್ಗದ ಸಂಗನಕಲ್ಲು ರಸ್ತೆ, ಎಸ್.ಎನ್.ಪೇಟ್ 3ನೇ ಕ್ರಾಸ್, ಜಿಲ್ಲಾ ಆಸ್ಪತ್ರೆ, ರಾಘವ ಕಲಾ ಮಂದಿರ, ಅನಂತಪುರ ರಸ್ತೆ, ವಡ್ಡರ ಬಂಡೆ, ಅಗಡಿ ಮಾರೆಪ್ಪ ಕಾಂಪೌAಡ್, ರೂಪನಗುಡಿ ರಸ್ತೆ, ಮುಬರಕ್ ಟಾಕೀಸ್, ಬಾಲಾಜಿರಾವ್ ರಸ್ತೆ, ಕೆ.ಸಿ.ರೋಡ್, ಮೀನಾಕ್ಷಿ ಸರ್ಕಲ್, ಬೆಂಗಳೂರು ರಸ್ತೆ, ದುಗ್ಗಪ್ಪ ಬೀದಿ, ರೆಡ್ಡಿ ಬೀದಿ, ಅಲ್ಲಂ ಬೀದಿ, ಮುಲ್ಲಂಗಿ ಸಂಜೀವಪ್ಪ ಬೀದಿ, ರೂಪನಗುಡಿ ನರಪ್ಪ ಬೀದಿ, ತಾಯಮ್ಮ ಕಟ್ಟೆ ಪ್ರದೇಶ. ಎಫ್-8 ಫೀಡರ್ ಮಾರ್ಗದ ಬಸವೇಶ್ವರ ನಗರ, ಎಂ.ಅರ್.ವಿ. ಲೇಔಟ್, ಸದ್ಗುರು ಕಾಲೋನಿ, ರೇಣುಕಾಚಾರ್ಯ ನಗರ, ಅಲ್ಲಂ ಲೇಔಟ್, ಬಿ.ಎಂ.ಎಸ್. ಲೇಔಟ್, ತಿರುಮಲ ಲೇಔಟ್, ಹರಿಪ್ರಿಯ ನಗರ, ಸುಷ್ಮಸ್ವರಾಜ್ ಕಾಲೋನಿ. ಎಫ್-9 ಫೀಡರ್ ಮಾರ್ಗದ ನೆಹರು ಕಾಲೋನಿ, 1ನೇ ಅಡ್ಡರಸ್ತೆ, 2ನೇ ಅಡ್ಡರಸ್ತೆ, ಶಂಕರ್ ಕಾಲೋನಿ, ಎಸ್.ಎನ್.ಪೇಟೆ 6ನೇ, 5ನೇ, ಮತ್ತು 4ನೇ, 3ನೇ ಅಡ್ಡರಸ್ತೆ, ಡಿಎಅರ್ ಗ್ರೌಂಡ್, ಕೂಲ್ ಕಾರ್ನರ್, ಡಬಲ್ ರಸ್ತೆ, ಕೋಲಾಚಲಂ ಕಾಂಪೌAಡ್, ರಾಯಲ್ ಸರ್ಕಲ್, ಗಾಂಧಿ ಭವನ, ಸಿಎಂಸಿ, ಅಂಬಲಿ ಬಾಗ್, ಹಳೆಯ ತಾಲ್ಲೂಕು ಕಚೇರಿ, ಹಳೆಯ ಡಿಸಿ ಕಚೇರಿ. ಎಫ್-10 ಫೀಡರ್ ಮಾರ್ಗದ ವಾಟರ ಬೂಸ್ಟರ್. ಎಫ್-11 ಫೀಡರ್ ಮಾರ್ಗದ ರಾಘವೇಂದ್ರ ಕಾಲೋನಿ 2ನೇ ಹಂತ, ಅಯ್ಯಪ್ಪ ಸ್ವಾಮಿ ಕಾಲೋನಿ, ಇಂಟೋರಿ ನಗರ, ಅನಂತಪುರ ರಸ್ತೆ, ಶೇಕ್ಷಾವಲಿ ದರ್ಗಾ, ತಾರಾನಾಥ ಆಸ್ಪತ್ರೆ. ಎಫ್-12 ಫೀಡರ್ ಮಾರ್ಗದ ನಿಜಲಿಂಗಪ್ಪ ಕಾಲೋನಿ, ಲಲಿತಾ ಲೇಔಟ್, ಗೊಲ್ಲರ ನರಸಪ್ಪ ಕಾಲೋನಿ, ರಾಘವೇಂದ್ರ ಕಾಲೋನಿ 2ನೇ ಹಂತ, ದೀಪಕ್ ಕಾಲೋನಿ, ಕೆವಿಟಿ ನಗರ, ವೆಂಕಟೇಶ್ವರ ನಗರ, ಅನಂತಪುರ ರಸ್ತೆ, ಶೇಕ್ಷಾವಲ್ಲಿ ದುರ್ಗಾ, ಕುಬೇರ ಲೇಔಟ್. ಎಫ್-13 ಫೀಡರ್ ಮಾರ್ಗದ ದೇವಿನಗರ, ಸಿರುಗುಪ್ಪ ರಸ್ತೆ, ಇಂದಿರಾ ನಗರ, ಸಂಜಯ ನಗರ, ಶಿವಲಿಂಗ ನಗರ, ಶಾಸ್ತಿçà ನಗರ, ಬಸವನಕುಂಟೆ, ಎಂ.ಕೆ.ನಗರ, ಅವಂಬಾವಿ, ಅಶೋಕ ನಗರ, ಶ್ರೀನಿವಾಸ ನಗರ, ಕುರಿಹಟ್ಟಿ, ಎಸ್.ಪಿ ಸರ್ಕಲ್, ವೀರಣ್ಣಗೌಡ ನಗರ, ರಾಜೇಶ್ವರಿ ನಗರ, ಕೆ.ಎಂ.ಎಫ್, ಭುವನಗಿರಿ ಕಾಲೋನಿ, ಎಸ್.ಎಲ್.ವಿ ಕಾಲೋನಿ, ಶಿವಗಿರಿ ಕಾಲೋನಿ, ರಾಮನಗರ, ಶ್ರೀನಿವಾಸ ನಗರ. ಸೂರ್ಯ ಕಾಲೋನಿ. ಎಫ್-14 ಫೀಡರ್ ಮಾರ್ಗದ ಗಣೇಶ ಕಾಲೋನಿ, ಸಿದ್ಗಿ ಕಾಲೋನಿ, ಗೊಲ್ಲನರಸಪ್ಪ ಕಾಲೋನಿ, ಎಂಎAಟಿಸಿ ಕಾಲೋನಿ, ಮಾರುತಿ ನಗರ, ಹುಸೇನ ನಗರ, ರಾಮಯ್ಯ ಕಾಲೋನಿ, ರಾಘವೇಂದ್ರ ಕಾಲೋನಿ 1ನೇ ಹಂತ, ಅನಂತಪುರ ರಸ್ತೆ, ಪಟೇಲ್ ನಗರ, ಹದ್ದಿನಗುಂಡು ರಸ್ತೆ, ಎಸ್.ಎನ್.ಪೇಟೆ 1ನೇ, 2ನೇ ಅಡ್ಡರಸ್ತೆ, ವಿಶಾಲ ನಗರ, ದತ್ತಸಾಯಿ ನಗರ, ಹನುಮಾನ್ ನಗರ, ಎಚ್.ಎಲ್.ಸಿ. ಕಾಲೋನಿ. ರಾಯಲ್ ಕಾಲೋನಿ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ಬಳ್ಳಾರಿ ಮಹಾನಗರ ಪಾಲಿಕೆ: ಶುಲ್ಕ ವಸೂಲಾತಿಗೆ ಸ್ವ-ಸಹಾಯ ಸಂಘಗಳಿAದ ಅರ್ಜಿ ಆಹ್ವಾನ

ಬಳ್ಳಾರಿ,ಏ.24(ಕರ್ನಾಟಕ ವಾರ್ತೆ): ಕೇಂದ್ರ ಪುರಸ್ಕೃತ ಯೋಜನೆಯಾದ ಅಮೃತ್ 2.0 ಅಭಿಯಾನದ ಅಮೃತ್ ಮಿತ್ರ ಕಾರ್ಯಕ್ರಮದ ತಾಂತ್ರಿಕೇತರ ಚಟುವಟಿಕೆ (ನಾನ್ ಟೆಕ್ನಿಂಕಲ್) ಕಾರ್ಯಕ್ರಮದಡಿ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಬಹುದಿನಗಳಿಂದ ಬಾಕಿ ಇರುವ ಆಸ್ತಿ ತೆರಿಗೆ ಮತ್ತು ನೀರಿನ ತೆರಿಗೆ ಮೊತ್ತವನ್ನು ಡೇ-ನಲ್ಮ್ ಯೋಜನೆಯಡಿ ರಚಿತವಾದ ಸ್ವಸಹಾಯ ಸಂಘಗಳಿAದ ವಸೂಲಾತಿ ಮಾಡಲು ಅರ್ಹ ಸ್ವಸಹಾಯ ಸಂಘಗಳಿAದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಸ್ವಸಹಾಯ ಸಂಘಗಳು ಮೇ 06 ರೊಳಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿಯನ್ನು ಡೇ-ನಲ್ಮ್ ಶಾಖೆಯಿಂದ ಪಡೆದುಕೊಂಡು ಭರ್ತಿ ಮಾಡಿ ಸಲ್ಲಿಸಬಹುದಾಗಿದೆ. *ಅರ್ಹತೆ:* ಸ್ವಸಹಾಯ ಸಂಘವು ಡೇ-ನಲ್ಮ್ ಅಭಿಯಾನದಡಿ ನೋಂದಾಯಿಸಿರಬೇಕು ಹಾಗೂ ಪಂಚಸೂತ್ರಗಳನ್ನು ಅನುಸರಿಸುತ್ತಿರಬೇಕು. (ನಿರಂತರ ಸಭೆ, ನಿರಂತರ ಉಳಿತಾಯ, ಆಂತರಿಕ ಸಾಲ ವಿತರಣೆ, ನಿಯಮಿತ ಸಾಲ ಮರುಪಾವತಿ ಮತ್ತು ದಾಖಲಾತಿ ನಿರ್ವಹಣೆ). ಆಸಕ್ತಿಯುಳ್ಳ ಸ್ವಸಹಾಯ ಸಂಘದ ಸದಸ್ಯರು ಕನಿಷ್ಠ 7ನೇ ತರಗತಿಯವರೆಗೆ ಶಿಕ್ಷಣ ಹೊಂದಿರಬೇಕು ಹಾಗೂ ಎಲೆಕ್ಟಾçನಿಕ್ ಪರಿಕರಗಳನ್ನು ಬಳಸುವ ಸಾಮರ್ಥ್ಯ ಹೊಂದಿರಬೇಕು. ಸ್ವಸಹಾಯ ಸಂಘದ ಹೆಸರಿನಲ್ಲಿ ಸಕ್ರಿಯ ಬ್ಯಾಂಕ್ ಖಾತೆ ಹೊಂದಿರಬೇಕು. ಬ್ಯಾAಕಿನ ಮೂಲಕ ಅಥವಾ ಆಂತರಿಕ ಸಾಲ ಪಡೆದು ನಿಯಮಿತವಾಗಿ ಸಾಲ ಮರುಪಾವತಿ ಮಾಡಿರಬೇಕು. ಸ್ವಸಹಾಯ ಗುಂಪು ಡೇ-ನಲ್ಮ್ ಅಭಿಯಾನದಡಿ ನೋಂದಾಯಿಸಿಕೊAಡು ಮಾನ್ಯತೆ ಇರುವ ಎಂಐಎಸ್ ಕೋಡ್ ಹೊಂದಿರಬೇಕು. ಸ್ವಸಹಾಯ ಗುಂಪು ರಚನೆಯಾಗಿ ಕನಿಷ್ಠ 3 ವರ್ಷ ಪೂರೈಸಿರಬೇಕು. ಸ್ವಸಹಾಯ ಗುಂಪು ಮತ್ತು ಗುಂಪಿನ ಸದಸ್ಯರು ಯಾವುದೇ ಅಪರಾಧ ಅಥವಾ ಸಮಾಜ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ಹಿನ್ನಲೆ ಹೊಂದಿರಬಾರದು. ನಗರ ಸ್ಥಳೀಯ ಸಂಸ್ಥೆಯಿAದ ನಿಗಧಿಪಡಿಸಲಾದ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ವಸೂಲಾತಿಯ ಗುರಿಗೆ ತಕ್ಕಂತೆ ಕಾರ್ಯನಿರ್ವಹಿಸಲು ಆಸಕ್ತಿ ಮತ್ತು ಬದ್ಧತೆಯನ್ನು ಹೊಂದಿರುವ ಸ್ವ-ಸಹಾಯ ಸಂಘದ ಸದ್ಯಸರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಭೂ-ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿ: ಅರ್ಜಿ ಆಹ್ವಾನ

ಬಳ್ಳಾರಿ,ಏ.24(ಕರ್ನಾಟಕ ವಾರ್ತೆ): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯ ಪರಿಶಿಷ್ಟ ಪಂಗಡದ ಭೂ-ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಭೂ-ಒಡೆತನ ಯೋಜನೆಯಡಿ ಜಮೀನು ಖರೀದಿಸಲು ಉದ್ದೇಶಿಸಲಾಗಿದ್ದು, ಜಮೀನು ಮಾರಾಟ ಮಾಡುವ ಭೂ-ಮಾಲೀಕರಿಂದ ಹಾಗೂ ಸೌಲಭ್ಯ ಪಡೆಯಬಯಸುವ ಫಲಾನುಭವಿಗಳಿಂದ ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹಿಂದೆ ಜಿಲ್ಲಾ ಕಚೇರಿಯಲ್ಲಿದ್ದ ಹಳೆಯ ಪ್ರಸ್ತಾವನೆಗಳನ್ನು ಜಿಲ್ಲಾಧಿಕಾರಿಗಳ ಅನುಮೋದನೆಯೊಂದಿಗೆ ರದ್ದುಪಡಿಸಲಾಗಿದ್ದು, ಈಗ ಸಂಪೂರ್ಣವಾಗಿ ಹೊಸ ಪ್ರಸ್ತಾವನೆಗಳನ್ನು ಮಾತ್ರ ಸ್ವೀಕರಿಸಲಾಗುವುದು. ಅರ್ಜಿಗಳನ್ನು ಮೇ 04 ರೊಳಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೋಟೆ, ಸಂತೋಷಿ ಮಾತಾ ಮಂದಿರದ ಎದುರು, ಪಿ.ಡಬ್ಲೂö್ಯ.ಡಿ. ಕಚೇರಿ ಹತ್ತಿರ, ಬಳ್ಳಾರಿ. ಇಲ್ಲಿಗೆ ಸಲ್ಲಿಸಬೇಕು. *ಭೂ-ಮಾಲೀಕರಿಗೆ ಸೂಚನೆಗಳು:* ಜಮೀನು ಮಾರಾಟ ಮಾಡಲು ಇಚ್ಛಿಸುವ ಮಾಲೀಕರು ನಿಯಮಗಳನ್ನು ಪಾಲಿಸಬೇಕು. ಭೂ-ಮಾಲೀಕರು ಖುದ್ದಾಗಿ ನಮೂನೆ-1ರ ಒಪ್ಪಿಗೆ ಪತ್ರವನ್ನು ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಜಮೀನಿಗೆ ಸಂಬAಧಿಸಿದ ಪಹಣಿ, ನಕ್ಷೆ ಹಾಗೂ ಅಗತ್ಯವಿರುವ ಎಲ್ಲಾ ಮೂಲ ದಾಖಲಾತಿಗಳನ್ನು ಲಗತ್ತಿಸಬೇಕು. ಯಾವುದೇ ಮಧ್ಯವರ್ತಿಗಳ ಆಮಿಷಕ್ಕೆ ಒಳಗಾಗದೆ ನೇರವಾಗಿ ಕಚೇರಿಯನ್ನು ಸಂಪರ್ಕಿಸಬೇಕು. *ಫಲಾನುಭವಿಗಳಿಗೆ (ಮಹಿಳಾ ಕೃಷಿ ಕಾರ್ಮಿಕರಿಗೆ) ನಿಯಮಗಳು:* ಅರ್ಜಿದಾರರು ಕಡ್ಡಾಯವಾಗಿ ಭೂ-ರಹಿತ ಕೃಷಿ ಕಾರ್ಮಿಕ ಮಹಿಳೆ ಆಗಿರಬೇಕು. ತಮಗೆ ಯಾವುದೇ ಜಮೀನು ಇಲ್ಲದಿರುವ ಬಗ್ಗೆ ಸಂಬAಧಪಟ್ಟ ಇಲಾಖೆಯಿಂದ ದೃಢೀಕರಣ ಪತ್ರ ಸಲ್ಲಿಸಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಆಧಾರ್ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿಯ ಪ್ರತಿಗಳನ್ನು ಸಲ್ಲಿಸಬೇಕು. ಸಾರ್ವಜನಿಕರು ಹಾಗೂ ಫಲಾನುಭವಿಗಳು ಯಾವುದೇ ಮಧ್ಯವರ್ತಿಗಳ ಮೊರೆ ಹೋಗಬಾರದು. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿಯ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಚಿದಾನಂದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಏ.25 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಏ.24(ಕರ್ನಾಟಕ ವಾರ್ತೆ): ನಗರದ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ 11 ಕೆ.ವಿ ಶ್ರೀಧರಗಡ್ಡೆ ವಿದ್ಯುತ್ ಉಪಕೇಂದ್ರದ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಏ.25 ರಂದು ಬೆಳಿಗ್ಗೆ 10 ರಿಂದÀ ಸಂಜೆ 05 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:* ಎಫ್-6 ಮಾರ್ಗದ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‌ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ರಾಮ ನಗರ, ಪಾರ್ವತಿ ನಗರ, ಬಾಲಾಜಿ ಕಾಲೋನಿ, ಗಂಗಮ್ಮ ಕಾಲೋನಿ, ಜಿಲ್ಲಾ ಕೋರ್ಟ್ ಸಂಕೀರ್ಣ. ಎಫ್-8 ಮಾರ್ಗದ ಇಂದಿರಾ ನಗರ, ಎಂ.ಕೆ.ನಗರ, ಅವಂಬಾವಿ, ಅಶೋಕ ನಗರ, ವೀರಣ್ಣಗೌಡ ಕಾಲೋನಿ, ವಿರಾಟ್ ನಗರ, ರಾಮನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಎಸ್‌ಟಿ ಮಹಿಳೆಯರಿಗೆ ಉಚಿತ ಫ್ಯಾಷನ್ ಡಿಸೈನಿಂಗ್ ತರಬೇತಿ; ಅರ್ಜಿ ಆಹ್ವಾನ

ಬಳ್ಳಾರಿ,ಏ.24(ಕರ್ನಾಟಕ ವಾರ್ತೆ): ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತಿ ಇರುವ ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗಾಗಿ ಹೊಸಪೇಟೆಯಲ್ಲಿ 30 ದಿನಗಳ ‘ವಲಯಾಧಾರಿತ ಉದ್ಯಮಶೀಲತಾ ಅಭಿವೃದ್ಧಿ' (ಫ್ಯಾಷನ್ ಡಿಸೈನಿಂಗ್) ತರಬೇತಿ ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಪ್ರಾಯೋಜಕತ್ವದಲ್ಲಿ, ವಿಜಯನಗರದ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ 30 ದಿನಗಳ ತರಬೇತಿಯಲ್ಲಿ ಫ್ಯಾಷನ್ ಡಿಸೈನಿಂಗ್ ಕುರಿತ ಪ್ರಾಯೋಗಿಕ ಮತ್ತು ಸಿದ್ಧಾಂತ ತರಗತಿಗಳ ಜೊತೆಗೆ ವಿವಿಧ ವಿಷಯಗಳ ಬಗ್ಗೆ ಪರಿಣಿತರಿಂದ ಮಾಹಿತಿ ನೀಡಲಾಗುವುದು. ಯಶಸ್ವಿ ಉದ್ಯಮಶೀಲರ ಗುಣಲಕ್ಷಣಗಳು, ಉದ್ಯಮ ಪ್ರಾರಂಭಿಸುವ ಹಂತಗಳು ಮತ್ತು ಯೋಜನಾ ವರದಿ ತಯಾರಿಕೆ, ಸರ್ಕಾರದ ವಿವಿಧ ಸ್ವಯಂ ಉದ್ಯೋಗ ಯೋಜನೆಗಳು, ಬ್ಯಾಂಕ್ ವ್ಯವಹಾರಗಳು, ಸಾಲ ಸೌಲಭ್ಯ ಮತ್ತು ಹಣಕಾಸು ನಿರ್ವಹಣೆ, ಲೆಕ್ಕಪತ್ರ ನಿರ್ವಹಣೆ ಹಾಗೂ ಸಾಲಕ್ಕಾಗಿ ಅರ್ಜಿ ಸಲ್ಲಿಸುವ ವಿಧಾನ ಒಳಗೊಂಡAತೆ ಇತರೆ. *ಅರ್ಹತೆಗಳು:* ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು. ಕನಿಷ್ಠ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು. ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಮಾತ್ರ ಅವಕಾಶ. ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಏಪ್ರಿಲ್ 29, 2026 ರೊಳಗೆ ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಹೊಸಪೇಟೆ ರಸ್ತೆ, ಬಳ್ಳಾರಿ-583102. ಅಥವಾ ಸಂಪರ್ಕ ಸಂಖ್ಯೆ: 9449226221, 7483538942, 9986332736 ಗೆ ಕರೆ ಮಾಡಬಹುದು ಸಿಡಾಕ್ ಸಂಸ್ಥೆಯ ಜಂಟಿ ನಿರ್ದೇಶಕ ಜಿ.ಯು. ಹುಡೇದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಜಿಟಿಟಿಸಿ: ತರಬೇತಿಗಾಗಿ ಅರ್ಜಿ ಆಹ್ವಾನÀ

ಬಳ್ಳಾರಿ,ಏ.24(ಕರ್ನಾಟಕ ವಾರ್ತೆ): ಕೌಶ್ಯಲ್ಯಾಭಿವೃದ್ಧಿ, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆಯ ಬಹುಕೌಶಾಲ್ಯಾಭಿವೃದ್ದಿ ಕೇಂದ್ರ(ಜಿಟಿಟಿಸಿ)ದಲ್ಲಿ ಹತ್ತನೇ ತರಗತಿ ಉತ್ತೀರ್ಣರಾದ ಯುವಕರಿಗೆ ‘ಟೂಲ್ ರೂಮ್ ಮಶಿನಿಸ್ಟ್’ ತಾಂತ್ರಿಕ ದೀರ್ಘಾವಧಿ ವೃತ್ತಿ ತರಬೇತಿಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ಹೊಂದಿದ ಅಭ್ಯರ್ಥಿಗಳಿಗೆ ಕೈಗಾರಿಕೆಗಳಲ್ಲಿ ಹೆಚ್ಚಿನ ಬೇಡಿಕೆಯಿದ್ದು, ಒಂದೇ ಕೋರ್ಸಿನಲ್ಲಿ ಫಿಟ್ಟರ್, ಟರ್ನರ್, ಮಿಲ್ಲರ್, ಗ್ರೆöÊಂಡರ್, ಸಿಎನ್‌ಸಿ, ಕ್ಯಾಡ್-ಕ್ಯಾಮ್ ಮತ್ತು ಟೂಲ್ ಆಂಡ್ ಡೈ ಮೇಕಿಂಗ್ ಟ್ರೇಡ್‌ಗಳಲ್ಲಿ ಆನ್ ದಿ ಜಾಬ್ ತರಬೇತಿ ನೀಡುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಉದ್ಯೋಗಾವಕಾಶಗಳು ದೊರಕುತ್ತವೆ. ಜೊತೆಗೆ ಅಟೊಕ್ಯಾಡ್, ಕನ್ನಡ ಮತ್ತು ಇಂಗ್ಲಿಷ್ ಭಾಷಾ ಕೌಶಲ್ಯ ಹಾಗೂ ಉದ್ಯೋಗ ಕೌಶಲ್ಯಗಳನ್ನು ಕಲ್ಪಿಸಲಾಗುತ್ತದೆ. ಜಿಟಿಟಿಸಿ ಸಂಸ್ಥೆಯು ಉನ್ನತ ತಂತ್ರಜ್ಞಾನ ಮತ್ತು ತರಬೇತಿ ಸೌಲಭ್ಯಗಳನ್ನು ಅಳವಡಿಸಿಕೊಂಡಿದ್ದು, ಕೈಗಾರಿಕೆಗಳಲ್ಲಿ ಅನುಭವ ಹೊಂದಿದ ಶಿಕ್ಷಕರನ್ನು ಹೊಂದಿದೆ. ತರಬೇತಿಯ ನಂತರ ವಿದ್ಯಾರ್ಥಿಗಳಿಗೆ ಟೂಲಿಂಗ್, ವಿಮಾನ ತಯಾರಿಕೆ ಮತ್ತು ಆಟೊಮೊಬೈಲ್ ವಲಯಗಳ ಕೈಗಾರಿಕೆಗಳಲ್ಲಿ ಉದ್ಯೋಗ ದೊರಕಿಸಿ ಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್‌ಮೆAಟ್ ನ ಐಶ್ವರ್ಯ ಕಾಲೋನಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಐ.ಟಿ.ಐ. ಕ್ಯಾಂಪಸ್)ದ ದೂ.08392-200087 ಅಥವಾ ಮೊ.9620057086, 6361880236, 7795680677 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ದ ಪ್ರಾಂಶುಪಾಲ ಮುತ್ತಣ್ಣ ದರ್ಮಂತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಬಳ್ಳಾರಿ ಜಿಲ್ಲೆಯ ರೂ. 14,248 ಕೋಟಿಗಳ ವಾರ್ಷಿಕ ಸಾಲ ಯೋಜನೆ ಬಿಡುಗಡೆ | ಕೃಷಿ ಮತ್ತು ಎಂಎಸ್‌ಎAಇ ವಲಯಕ್ಕೆ ಹೆಚ್ಚಿನ ಒತ್ತು

ಬಳ್ಳಾರಿ,ಏ.24(ಕರ್ನಾಟಕ ವಾರ್ತೆ): ಜಿಲ್ಲೆಯ ಆರ್ಥಿಕ ಪ್ರಗತಿಗೆ ಪೂರಕವಾಗಿರುವ 2026-27ನೇ ಹಣಕಾಸು ವರ್ಷದ ಜಿಲ್ಲಾ ಕ್ರೆಡಿಟ್ ಯೋಜನೆಯನ್ನು ಲೀಡ್ ಬ್ಯಾಂಕ್ ಆದ ಕೆನರಾ ಬ್ಯಾಂಕ್ ವತಿಯಿಂದ ಶುಕ್ರವಾರ ಬಿಡುಗಡೆ ಮಾಡಲಾಯಿತು. ನಗರದ ನೂತನ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಈ ಸಾಲಿನ ಸಾಲ ಯೋಜನೆಯ ಕೈಪಿಡಿಯನ್ನು ಲೋಕಾರ್ಪಣೆಗೊಳಿಸಿದರು. *ಸಾಲ ಯೋಜನೆಯ ಮುಖ್ಯಾಂಶಗಳು (2026-27):* ಈ ಬಾರಿಯ ಸಾಲ ಯೋಜನೆಯು ಕಳೆದ ವರ್ಷಕ್ಕಿಂತ ಶೇ.16.19 ರಷ್ಟು ಹೆಚ್ಚಳ ಕಂಡಿದ್ದು, ಒಟ್ಟು ರೂ.14,248.71 ಕೋಟಿಗಳ ಗುರಿಯನ್ನು ಹೊಂದಿದೆ. ಕೃಷಿ ವಲಯ: ಒಟ್ಟು ಯೋಜನೆಯ ಶೇ. 43.74 ರಷ್ಟು ಅಂದರೆ ರೂ. 6,231.71 ಕೋಟಿ ಅನುದಾನವನ್ನು ಕೃಷಿ ಕ್ಷೇತ್ರಕ್ಕೆ ಮೀಸಲಿಡಲಾಗಿದೆ. ಎಂ.ಎಸ್.ಎA.ಇ: ಜಿಲ್ಲೆಯ ಕೈಗಾರಿಕಾ ಚಟುವಟಿಕೆಗಳ ಉತ್ತೇಜನಕ್ಕಾಗಿ ರೂ. 3,630.09 ಕೋಟಿ ನಿಗದಿಪಡಿಸಲಾಗಿದೆ. ಆದ್ಯತಾ ವಲಯ: ಒಟ್ಟು ಯೋಜನೆಯ ಶೇ. 70.96 ರಷ್ಟು ಭಾಗವನ್ನು (ರೂ. 10,111.45 ಕೋಟಿ) ಆದ್ಯತಾ ವಲಯಕ್ಕೆ ನೀಡಲಾಗಿದೆ. ಇತರೆ: ಶಿಕ್ಷಣ ವಲಯಕ್ಕೆ ರೂ. 44.56 ಕೋಟಿ ಹಾಗೂ ವಸತಿ ವಲಯಕ್ಕೆ ರೂ. 173.13 ಕೋಟಿಗಳನ್ನು ಹಂಚಿಕೆ ಮಾಡಲಾಗಿದೆ. *ಕಳೆದ ಸಾಲಿನ ಸಾಧನೆ (2025-26):* ಬ್ಯಾಂಕಿAಗ್ ಪ್ರಗತಿ: ಜಿಲ್ಲೆಯ ಬ್ಯಾಂಕಿAಗ್ ವಲಯದ ಒಟ್ಟು ಠೇವಣಿ ರೂ. 21,858.21 ಕೋಟಿಗಳಾಗಿದ್ದು (ಶೇ. 16.26 ಪ್ರಗತಿ), ಒಟ್ಟು ಮುಂಗಡಗಳು ರೂ. 19,312.87 ಕೋಟಿಗಳಾಗಿವೆ. ಜಿಲ್ಲೆಯ ಸಾಲ-ಠೇವಣಿ ಅನುಪಾತವು ಶೇ. 88.36 ರಷ್ಟಿದೆ. ಕಳೆದ ಸಾಲಿನಲ್ಲಿ ರೂ. 12,263.03 ಕೋಟಿ ಸಾಲ ವಿತರಣೆಯ ಗುರಿಯ ವಿರುದ್ಧ ಬ್ಯಾಂಕುಗಳು ರೂ. 13,138.78 ಕೋಟಿ ವಿತರಿಸಿ, ಶೇ. 107.14 ರಷ್ಟು ಅತ್ಯುತ್ತಮ ಸಾಧನೆ ದಾಖಲಿಸಿವೆ ಎಂದು ಕೆನರಾ ಬ್ಯಾಂಕ್‌ನ ಎಲ್‌ಡಿಎಂ ಗಿರೀಶ್ ವಿ ಕುಲಕರ್ಣಿ ಅವರು ಕಳೆದ ವರ್ಷದ ಸಾಧನೆಯ ಅಂಕಿ-ಅAಶಗಳನ್ನು ಈ ವೇಳೆ ತಿಳಿಸಿದರು. ಈ ಸಂದರ್ಭದಲ್ಲಿ ಸರ್ಕಾರಿ ಪ್ರಾಯೋಜಿತ ಯೋಜನೆಗಳ ಪ್ರಗತಿ ಪರಿಶೀಲಿಸಿದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು, “ಪಿಎಂಎಫ್‌ಎAಇ, ಪಿಎಂಇಜಿಪಿ ಹಾಗೂ ಪಿಎಂ ಸ್ವಾನಿಧಿಯಂತಹ ಯೋಜನೆಗಳ ಸಮರ್ಪಕ ಅನುಷ್ಠಾನವಾಗಬೇಕು. ಬ್ಯಾಂಕರ್‌ಗಳು ಮತ್ತು ಸರ್ಕಾರಿ ಇಲಾಖೆಗಳ ನಡುವೆ ಉತ್ತಮ ಸಮನ್ವಯವಿದ್ದರೆ ಈ ವರ್ಷವೂ ಹೆಚ್ಚಿನ ಸಾಧನೆ ಮಾಡಲು ಸಾಧ್ಯ ಎಂದು ಆಶಿಸಿದರು. ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಸಣ್ಣ ಸಾಲಗಳಿಗೆ ಮತ್ತು ಸರ್ಕಾರಿ ಯೋಜನೆಗಳಿಗೆ ಮೇಲಾಧಾರ ಭದ್ರತೆ ಕೇಳದಂತೆ ಬ್ಯಾಂಕರ್‌ಗಳಿಗೆ ಸೂಚಿಸಿದ ಅವರು, ಸಕಾಲಿಕ ಸಾಲ ಹರಿವು ಜಿಲ್ಲೆಯ ನಿರುದ್ಯೋಗ ನಿರ್ಮೂಲನೆಗೆ ಸಹಕಾರಿ ಎಂದರು. ಈ ವೇಳೆ ಕೆನರಾ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ಅರುಣ್ ಕುಮಾರ್ ಎಜಿ, ವಿಭಾಗೀಯ ವ್ಯವಸ್ಥಾಪಕ ಉಪೇಂದ್ರ ಸಿಂಗ್, ಯೂನಿಯನ್ ಬ್ಯಾಂಕ್‌ನ ಜಿ. ರಾಜೇಶ್, ಕೆಜಿಬಿ ಹಿರಿಯ ವ್ಯವಸ್ಥಾಪಕ ಚಂದ್ರಪ್ಪ, ಎಸ್‌ಬಿಐ ಮುಖ್ಯ ವ್ಯವಸ್ಥಾಪಕ ನಾಗರಾಜು, ಐಓ ಬ್ಯಾಂಕ್ ಹಿರಿಯ ವ್ಯವಸ್ಥಾಪಕ ಮಹಾಂತೇಶ್.ಟಿ., ಹೆಚ್‌ಡಿಎಫ್‌ಸಿ ಬ್ಯಾಂಕ್ ಮುಖ್ಯಸ್ಥ ರಮೇಶ್ ಜೋನಾಲ್, ಕ್ಲಸ್ಟರ್ ಮುಖ್ಯಸ್ಥ ನಂದ ಕಿಶೋರ್, ಬಿಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಾಸೀರ್ ಅಹಮದ್, ಆರ್‌ಎಸ್‌ಇಟಿಐ ಸಿಬಿ ನಿರ್ದೇಶಕ ರಾಜಸಾಬ್ ಸೇರಿದಂತೆ ವಿವಿಧ ಬ್ಯಾಂಕ್‌ಗಳ ಜಿಲ್ಲಾ ಸಂಯೋಜಕರು ಮತ್ತು ಲೈನ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. -----------

ಮೇ 3ರಂದು ನೀಟ್ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಾಜ್ಞೆ ಜಾರಿ

ಬಳ್ಳಾರಿ,ಏ.24(ಕರ್ನಾಟಕ ವಾರ್ತೆ): ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ಮೇ 3ರಂದು ನಡೆಯಲಿರುವ ರಾಷ್ಟಿçÃಯ ಅರ್ಹತಾ ಪ್ರವೇಶ ಪರೀಕ್ಷೆ ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀ. ವ್ಯಾಪ್ತಿಯ ಆವರಣವನ್ನು ನಿರ್ಬಂಧಿತ ಪ್ರವೇಶವೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಾಗೇಂದ್ರ ಪ್ರಸಾದ್.ಕೆ ಅವರು ಘೋಷಿಸಿದ್ದಾರೆ. ಮೇ 3ರಂದು (ಭಾನುವಾರ) ಮಧ್ಯಾಹ್ನ 02 ರಿಂದ ಸಂಜೆ 05 ಗಂಟೆಯವರೆಗೆ ಪರೀಕ್ಷೆ ನಡೆಯಲಿದ್ದು, ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023ರ ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಈ ಆದೇಶವನ್ನು ಹೊರಡಿಸಿದ್ದಾರೆ. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಎಲ್ಲಾ ಜೆರಾಕ್ಸ್ ಅಂಗಡಿಗಳು ಮತ್ತು ಇಂಟರ್‌ನೆಟ್ ಸೆಂಟರ್‌ಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಆದೇಶಿಸಲಾಗಿದೆ. ಅನಧಿಕೃತ ವ್ಯಕ್ತಿಗಳು ಅಥವಾ ಗುಂಪುಗಳು ಪರೀಕ್ಷಾ ಕೇಂದ್ರದ ಆವರಣದೊಳಗೆ ಪ್ರವೇಶಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ಮೇಲಿನ ಯಾವುದೇ ನಿರ್ಬಂಧಗಳು ಪರೀಕ್ಷಾ ಮೇಲ್ವಿಚಾರಣೆ ಮತ್ತು ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಪರೀಕ್ಷಾ ಸಿಬ್ಬಂದಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ. ----------

ಸಂಪನ್ಮೂಲ ಸಂಗ್ರಹ ಸಮಿತಿ- ಅಬಕಾರಿ ಸುಧಾರಣೆ ವರದಿ

ಬಳ್ಳಾರಿ,ಏ.24(ಕರ್ನಾಟಕ ವಾರ್ತೆ): ರಾಜ್ಯದ ಮದ್ಯ ಅಬಕಾರಿ ತೆರಿಗೆ ವ್ಯವಸ್ಥೆಯನ್ನು ಪರಿಶೀಲಿಸಲು ಕರ್ನಾಟಕ ಸರ್ಕಾರ ರಚಿಸಿದ್ದ ಸಂಪನ್ಮೂಲ ಸಂಗ್ರಹ ಸಮಿತಿ ವರದಿಯನ್ನು ಸಲ್ಲಿಸಿದೆ. ಈ ವರದಿಯು ಅಸ್ತಿತ್ವದಲ್ಲಿರುವ ಚೌಕಟ್ಟಿನ ಸಮಗ್ರ ಪರಿಶೀಲನೆಯನ್ನು ಪ್ರಸ್ತುತಪಡಿಸುತ್ತದೆ ಮತ್ತು ಸಾರ್ವಜನಿಕ ಆರೋಗ್ಯ ದೃಷ್ಠಿಕೋನ ಹೊಂದಿದೆ. ಮದ್ಯದ ಅಂಶದ ಆಧಾರದ ಮೇಲೆ ತೆರಿಗೆ ವಿಧಿಸುವ ವ್ಯವಸ್ಥೆಗೆ ವರ್ಗಾವಣೆಯನ್ನು ಶಿಫಾರಸು ಮಾಡುತ್ತದೆ. ಇದಕ್ಕೆ ಹಂತ ಹಂತವಾಗಿ ಜಾರಿಗೊಳಿಸುವ ಸುಧಾರಣಾ ಮಾರ್ಗಸೂಚಿ ಹಾಗೂ ತಂತ್ರಜ್ಞಾನ ಆಧಾರಿತ ನಿಯಂತ್ರಣ ಕ್ರಮಗಳು ಬೆಂಬಲವಾಗಿವೆ. ಈ ವರದಿಯನ್ನು ವ್ಯಾಪಕ ಪ್ರಚಾರ, ಸಮಾಲೋಚನೆಗಾಗಿ ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆಯ ಅಧಿಕೃತ ವೆಬ್‌ಸೈಟ್ (finance.karnataka.gov.in) ನಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ. ಉದ್ಯಮ ಕ್ಷೇತ್ರದ ಪ್ರತಿನಿಧಿಗಳು, ಸಾರ್ವಜನಿಕ ಆರೋಗ್ಯ ತಜ್ಞರು, ಶೈಕ್ಷಣಿಕ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು ಮತ್ತು ಸಾಮಾನ್ಯ ನಾಗರಿಕರು ಸೇರಿದಂತೆ ಎಲ್ಲಾ ಆಸಕ್ತ ಪಾಲುದಾರರು ವರದಿಯನ್ನು ಪರಿಶೀಲಿಸಿ, ತಮ್ಮ ಅಭಿಪ್ರಾಯವನ್ನು spobud-fd@karnataka.gov.in ಗೆ ಕಳುಹಿಸಬಹುದು. ಪಾಲುದಾರರು ತಮ್ಮ ಅಭಿಪ್ರಾಯಗಳನ್ನು ಮೇ 22, 2026 ರಂದು ಸಂಜೆ 5:30 ಗಂಟೆಯೊಳಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ---------

ಬಳ್ಳಾರಿ: ಡಾ.ರಾಜ್‌ಕುಮಾರ್ 97ನೇ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾಡಳಿತದಿಂದ ಅಭೂತಪೂರ್ವ ಗೌರವ ನಮನ | ಕನ್ನಡ ನಾಡು-ನುಡಿಗೆ ಡಾ.ರಾಜ್ ಕುಮಾರ್ ನೀಡಿದ ಕೊಡುಗೆ ಅಪಾರ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ

ಬಳ್ಳಾರಿ,ಏ.24(ಕರ್ನಾಟಕ ವಾರ್ತೆ): ಕನ್ನಡ ಚಿತ್ರರಂಗದ ಧ್ರುವತಾರೆ, ಕರ್ನಾಟಕ ರತ್ನ ಡಾ. ರಾಜ್‌ಕುಮಾರ್ ಅವರ 97ನೇ ಜನ್ಮದಿನದ ಅಂಗವಾಗಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್‌ಕುಮಾರ್ ಉದ್ಯಾನವನದಲ್ಲಿನ ಡಾ.ರಾಜ್ ಕುಮಾರ್ ಅವರ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಪುಷ್ಪನಮನ ಸಲ್ಲಿಸುವ ಮೂಲಕ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಅಭೂತ ಗೌರವ ನಮನ ಸಲ್ಲಿಸಿದರು. ಈ ವೇಳೆ ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಮಾತನಾಡಿ, ಡಾ. ರಾಜ್‌ಕುಮಾರ್ ಅವರು ಅಪ್ಪಟ ಕನ್ನಡಪ್ರೇಮಿಯಾಗಿದ್ದರು. ಅವರ ಸಾಧನೆ ಹಾಗೂ ಕನ್ನಡ ನಾಡು-ನುಡಿಗೆ ಅವರು ನೀಡಿದ ಕೊಡುಗೆ ಅಪಾರ. ಕರ್ನಾಟಕ ಏಕೀಕರಣ ಮತ್ತು ಕನ್ನಡ ಭಾಷೆಯ ಉಳಿವಿಗಾಗಿ ನಡೆದ ಗೋಕಾಕ್ ಚಳುವಳಿಯಲ್ಲಿ ಡಾ. ರಾಜ್ ಅವರ ಪಾತ್ರ ಅವಿಸ್ಮರಣೀಯ. ಅವರ ನಾಯಕತ್ವದಲ್ಲಿ ನಡೆದ ಈ ಹೋರಾಟ ಕನ್ನಡ ಭಾಷೆಯ ಇತಿಹಾಸದಲ್ಲಿ ಮೈಲಿಗಲ್ಲಾಗಿದೆ ಎಂದು ಹೇಳಿದರು. ಡಾ.ರಾಜ್ ಕುಮಾರ್ ಅವರು ಅಂದಿನ ಕಾಲದ ಖ್ಯಾತ ನಟ ಅಮಿತಾಬ್ ಬಚ್ಚನ್ ಅವರು ಕೇವಲ ಒಂದು ಗಂಟೆಯ ಕಾಲ ತಮ್ಮ ಸಿನಿಮಾದಲ್ಲಿ ನಟಿಸಲು ಕೇಳಿಕೊಂಡಾಗಲೂ, ನಾನು ಕನ್ನಡ ಬಿಟ್ಟು ಬೇರೆ ಭಾಷೆಯಲ್ಲಿ ನಟಿಸುವುದಿಲ್ಲ ಎಂದು ಖಡಾಖಂಡಿತವಾಗಿ ನಿರಾಕರಿಸಿದ ಅವರ ಬದ್ಧತೆಯನ್ನು ನಾವು ಸ್ಮರಿಸಬೇಕು ಎಂದರು. ‘ಬAಗಾರದ ಮನುಷ್ಯ' ಸಿನಿಮಾದ ಮೂಲಕ ನೂರಾರು ಯುವಕರು ನಗರ ಪ್ರದೇಶದಿಂದ ಮರಳಿ ತಮ್ಮ ಹಳ್ಳಿಗಳಿಗೆ ಹೋಗಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಿದ ಸಂಗತಿಯನ್ನು ಮೆಲುಕು ಹಾಕಿದರು. ಡಾ. ರಾಜ್‌ಕುಮಾರ್ ಅವರ ಜನ್ಮದಿನವನ್ನು ಸರ್ಕಾರಿ ಮಟ್ಟದಲ್ಲಿ ಅಧಿಕೃತವಾಗಿ ಆಚರಿಸಲು ನಿರ್ಧರಿಸಿದ ಸರ್ಕಾರದ ಕ್ರಮಕ್ಕೆ ಅಭಿನಂದನೆ ತಿಳಿಸಿದ ಅವರು, ಸಿನಿಮಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಹಾಗೂ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ.ರಾಜ್ ಅವರ ಆದರ್ಶಗಳು ಇಂದಿನ ಯುವ ಪೀಳಿಗೆಗೆ ದಾರಿದೀಪವಾಗಲಿ ಎಂದು ಹಾರೈಸಿದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ ಚಿದಾನಂದಪ್ಪ ಅವರು ಮಾತನಾಡಿ, ಕನ್ನಡ ಚಿತ್ರರಂಗದ ಧ್ರುವತಾರೆ ಡಾ. ರಾಜಕುಮಾರ್ ಅವರು ಕೇವಲ ಒಬ್ಬ ನಟರಾಗಿರಲಿಲ್ಲ, ಅವರು ಇಡೀ ಕರ್ನಾಟಕದ ಮನೆಮನ ಬೆಳಗಿದ ಸಂಸ್ಕೃತಿಯ ಪ್ರತೀಕವಾಗಿದ್ದರು. ಅಣ್ಣಾವ್ರಿಗೂ ಬಳ್ಳಾರಿಗೂ ಅವಿನಾಭಾವ ಸಂಬAಧ ಹೊಂದಿದ್ದರು ಎಂದು ಹೇಳಿದರು. ಸಾಮಾನ್ಯವಾಗಿ ಯಾವುದೇ ರಂಗದಲ್ಲಿ ಯಶಸ್ಸು ಸಿಕ್ಕ ತಕ್ಷಣ ಜನರು ರಾಜಕೀಯಕ್ಕೆ ಬರಲು ಬಯಸುತ್ತಾರೆ. ಆದರೆ ಅಣ್ಣಾವ್ರು ತಮಗೆ ಮುಖ್ಯಮಂತ್ರಿಯಾಗುವ ಅತಿ ದೊಡ್ಡ ಅವಕಾಶಗಳಿದ್ದರೂ, ನಾನು ಇಡೀ ಕನ್ನಡ ನಾಡಿನ ಮಗನಾಗಿ ಇರಲು ಬಯಸುತ್ತೇನೆ ಎಂದು ರಾಜಕೀಯವನ್ನು ನಯವಾಗಿ ತಿರಸ್ಕರಿಸಿದ್ದರು ಎಂದು ತಿಳಿಸಿದರು. ಎಷ್ಟೇ ದೊಡ್ಡ ಹೆಸರು ಮತ್ತು ಯಶಸ್ಸು ಗಳಿಸಿದರೂ ಇತರರಿಗೆ ಗೌರವ ನೀಡುವುದು ಮತ್ತು ಸಜ್ಜನಿಕೆಯಿಂದ ವರ್ತಿಸುವುದನ್ನು ಅಣ್ಣಾವ್ರಿಂದ ಕಲಿಯಬೇಕು. ಇಂದಿಗೂ ಸಿನಿಮಾ ರಂಗದಲ್ಲಿ ಯಾರಾದರೂ ಅಹಂಕಾರದಿAದ ವರ್ತಿಸಿದರೆ, ಜನರು ತಕ್ಷಣವೇ ಅಣ್ಣಾವ್ರ ಸರಳತೆಯನ್ನು ಉದಾಹರಿಸುತ್ತಾರೆ. ಅವರ ಪ್ರಭಾವ ಅಷ್ಟು ಆಳವಾಗಿದೆ ಎಂದರು. ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಅವರು ಮಾತನಾಡಿ, ಡಾ.ರಾಜ್ ಕುಮಾರ್ ಅವರು ಕೇವಲ ನಟರಲ್ಲ, ಅವರು ಕನ್ನಡ ಸಂಸ್ಕೃತಿಯ ರಾಯಭಾರಿ. ಅವರ ‘ಬಂಗಾರದ ಮನುಷ್ಯ', ‘ಗುರಿ' ನಂತಹ ಚಿತ್ರಗಳು ಇಂದಿಗೂ ಸಮಾಜಕ್ಕೆ ಮಾದರಿಯಾಗಿವೆ ಎಂದು ಸ್ಮರಿಸಿದರು. ಡಾ. ರಾಜ್ ಹಾಡುಗಳ ಸಾಹಿತ್ಯದಲ್ಲಿರುವ ಜೀವನ ಮೌಲ್ಯಗಳು ಆಳವಾಗಿ ಬೇರೂರಿವೆ. ‘ಆಡಿಸಿ ನೋಡು ಬೀಳಿಸಿ ನೋಡು...’ ನಂತಹ ಹಾಡುಗಳು ಇಂದಿಗೂ ಜೀವನಕ್ಕೆ ಸ್ಫೂರ್ತಿಯಾಗಿವೆ. ಡಾ. ರಾಜ್‌ಕುಮಾರ್ ಅವರಿಗೆ ಅವರೇ ಸಾಟಿ. ಅವರ ಕೊಡುಗೆ ನಾಡು, ನುಡಿ ಮತ್ತು ಕಲೆಗೆ ಅನನ್ಯವಾದುದು. ಅವರ ಜನ್ಮದಿನವನ್ನು ಆಚರಿಸುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ವಿ.ಸಿ ಗುರುರಾಜ್, ಪ್ರದಸ ನವೀನ್ ಕುಮಾರ್ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು, ಡಾ.ರಾಜ್ ಕುಮಾರ್ ಅಭಿಮಾನಿಗಳು, ಸಾರ್ವಜನಿಕರು ಹಾಗೂ ಮತ್ತೀತರರು ಇದ್ದರು. -------------