ಶನಿವಾರ, ಏಪ್ರಿಲ್ 4, 2026
ಏ.05 ರಂದು ಡಾ.ಬಾಬು ಜಗಜೀವನರಾಮ್ ಅವರ 119ನೇ ಜನ್ಮದಿನಾಚರಣೆ ಕಾರ್ಯಕ್ರಮ
ಬಳ್ಳಾರಿ,ಏ.04(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏ.05 ರಂದು ಬೆಳಿಗ್ಗೆ 12 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಭಾರತದ ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರು ಕ್ರಾಂತಿ ಹರಿಕಾರರಾದ ಡಾ.ಬಾಬು ಜಗಜೀವನರಾಮ್ ಅವರು 119ನೇ ಜನ್ಮದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್‌ಲೂಮ್ಸ್)ದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷö್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಕರ್ನಾಟಕ ರಾಜ್ಯ ಡಾ.ಬಾಬು ಜಗಜೀವನರಾಮ್ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಪಂಪಾಪತಿ ಸೇರಿದಂತೆ ಇತರರು ಭಾಗವಹಿಸುವರು.
ಮೈಸೂರೂ ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿಯ ಡಾ.ಬಾಬು ಜಗಜೀವನರಾಮ್ ಅಧ್ಯಯನ ಕೇಂದ್ರದ ಸಂಶೋಧನಾಧಿಕಾರಿ ಡಾ.ಶ್ರೀನಿವಾಸಮೂರ್ತಿ ಎಂ. ಅವರು ವಿಶೇಷ ಉಪನ್ಯಾಸಕರಾಗಿ ಭಾಗವಹಿಸುವರು.
*ಮಾಲಾರ್ಪಣೆ:*
ಅಂದು ಬೆಳಿಗ್ಗೆ 09 ಗಂಟೆಗೆ ಡಾ.ಬಾಬು ಜೀವನರಾಮ್ ಅವರ ಪುತ್ಥಳಿಗೆ ಗಣ್ಯರು ಮಾಲಾರ್ಪಣೆ ಮಾಡುವರು.
*ಮೆರವಣಿಗೆ:*
ಬಳಿಕ ಬೆಳಿಗ್ಗೆ 09.30 ರಿಂದ ಭವ್ಯ ಮೆರವಣಿಗೆ ನಡೆಯಲಿದೆ. ಮೆರವಣಿಗೆಯು ಮುನ್ಸಿಪಲ್ ಕಾಲೇಜು ಮೈದಾನದಿಂದ ಆರಂಭಗೊAಡು ಗಡಿಗಿ ಚೆನ್ನಪ್ಪ ವೃತ್ತ- ಬೆಂಗಳೂರು ರಸ್ತೆ- ಹಳೆಯ ಬ್ರೂಸ್ ಪೇಟೆ ಪೊಲೀಸ್ ಠಾಣೆ ಮುಂಭಾಗ- ಹೆಚ್.ಆರ್.ಗವಿಯಪ್ಪ ವೃತ್ತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದ ವರೆಗೆ ನಡೆಯಲಿದೆ. ನಂತರ ಮಧ್ಯಾಹ್ನ 12 ಗಂಟೆಗೆ ವೇದಿಕೆ ಕಾರ್ಯಕ್ರಮ ಜರುಗಲಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್ ಮಂಜುನಾಥ ಸೇರಿದಂತೆ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿರುವರು ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ ಅವರು ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)




ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ