ಶನಿವಾರ, ಏಪ್ರಿಲ್ 4, 2026
ಏ.07 ರಂದು ವಿವಿಧ ಮಹನೀಯರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಿದ್ಧತಾ ಸಭೆ
ಬಳ್ಳಾರಿ,ಏ.04(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಏ.20 ರಂದು ಬಸವ ಜಯಂತಿ, ಏ.21 ರಂದು ಶ್ರೀ ಶಂಕರಾಚಾರ್ಯ ಜಯಂತಿ ಹಾಗೂ ಏ.23 ರಂದು ಶ್ರೀ ಭಗೀರಥ ಜಯಂತಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸುವ ಕುರಿತು ಚರ್ಚಿಸಲು ಏ.07 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ಏರ್ಪಡಿಸಲಾಗಿದೆ.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು.
ಸಭೆಗೆ ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ಸಮಾಜದ ಮುಖಂಡರು, ಸಾರ್ವಜನಿಕರು ಭಾಗವಹಿಸಿ ಮಹನೀಯರ ಜಯಂತಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸಲಹೆ ನೀಡಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ