ಮಂಗಳವಾರ, ಏಪ್ರಿಲ್ 7, 2026
ಏ.09 ರಂದು ನೇರ ಸಂದರ್ಶನÀ
ಬಳ್ಳಾರಿ,ಏ.07(ಕರ್ನಾಟಕ ವಾರ್ತೆ):
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.09 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಹಳೆಯ ತಾಲ್ಲೂಕು ಕಚೇರಿ ಆವರಣದಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ ಎಪ್ಸಿಲಾನ್ ಕಾರ್ಬನ್ ಪ್ರೆöÊ. ಲಿ. ಮತ್ತು ಧ್ರುವ ಸೋಲಾರ್ ಪವರ್ ಕಂಪನಿಗಳು ಭಾಗವಹಿಸಲಿದ್ದು, ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು.
ವಿದ್ಯಾರ್ಹತೆ: ಐಟಿಐ (ಫಿಟ್ಟರ್) ಅಥವಾ ಯಾವುದೇ ಪದವಿ ಹೊಂದಿದ ಪುರುಷ ಅಭ್ಯರ್ಥಿಗಳು ಮಾತ್ರ ಸಂದರ್ಶನದಲ್ಲಿ ಭಾಗವಹಿಸಬಹಿದಾಗಿದೆ.
ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ, ಸ್ವ-ವಿವರ ಪ್ರತಿ (ಬಯೋಡೇಟಾ) ಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಯಾವುದೇ ಶುಲ್ಕ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದೋಗ ವಿನಿಮಯ ಕಚೇರಿ ಅಥವಾ ಮೊ.7619207762, 9663263086, 7676774293, 6360408094 ಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ