ಮಂಗಳವಾರ, ಏಪ್ರಿಲ್ 7, 2026
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಏ.12 ರಂದು 6ನೇ ತರಗತಿ ಪ್ರವೇಶಾತಿಗೆ ಪರೀಕ್ಷೆ
ಬಳ್ಳಾರಿ,ಏ.07(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾದ್ಯಮ) ಶಾಲೆ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ (ಸಿ.ಬಿ.ಎಸ್.ಇ) ಶಾಲೆಯ ದಾಖಲಾತಿಗಾಗಿ 2026-27ನೇ ಶೈಕ್ಷಣಿಕ ವರ್ಷಕ್ಕೆ 6ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಏ.12 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.
ಪ್ರವೇಶ ಪತ್ರ (ಹಾಲ್ ಟಿಕೆಟ್) ಗಳನ್ನು ಡೌನ್ ಲೋಡ್ ಮಾಡಿಕೊಳ್ಳಲು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್ https://erp.dom.karnataka.gov.in/adm/Admission/StudentHallticket ಗೆ ಭೇಟಿ ನೀಡಬಹುದಾಗಿದೆ.
ಈಗಾಗಲೇ ಪ್ರತಿ ವಿದ್ಯಾರ್ಥಿಯ ಮೊಬೈಲ್ ಸಂಖ್ಯೆಗೂ ಕೂಡ ಪ್ರವೇಶ ಪತ್ರದ ಲಿಂಕ್ ಅನ್ನು ವೈಯಕ್ತಿಕವಾಗಿ ಕಳಿಸಲಾಗಿದೆ. ಅಲ್ಲಿಯೂ ಕೂಡ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
*ಪರೀಕ್ಷಾ ಕೇಂದ್ರದ ಹೆಸರು:*
ಬಳ್ಳಾರಿ ತಾಲ್ಲೂಕಿನ ಕೊಳಗಲ್ಲಿನ ಡಾ||ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಇ)- 9844040035, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ಕಾಲೇಜು- 7349008289.
ಬಳ್ಳಾರಿ ನಗರದ ಮುಖ್ಯ ಅಂಚೆ ಕಚೇರಿ ಹತ್ತಿರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಬಾಲಕಿಯರ ಪ್ರೌಢ ಶಾಲಾ ಹಾಗೂ ಕಾಲೇಜು ವಿಭಾಗ-8861623814. ತೋರಣಗಲ್ಲು ಗ್ರಾಮದ ಓ.ಪಿ.ಜೆ ಸೆಂಟರ್ ಎದುರಗಡೆಯ ಸರ್ಕಾರಿ ಪ್ರೌಢ ಶಾಲೆ-9480933730.
ಕಂಪ್ಲಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ-7353346069. ಕುರುಗೋಡಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ-988628614. ಸಿರುಗುಪ್ಪದ ತಾಲ್ಲೂಕು ಕ್ರೀಡಾಂಗಣ ಬಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು-9901739242.
ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನ ಅಜಾದ ಭವನದ ಜಿಲ್ಲಾ ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯ (ದೂ.08392-200125/224) ಅಥವಾ ಸಹಾಯವಾಣಿ ಕೇಂದ್ರ (24*7) – 8277799990 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ