ಮಂಗಳವಾರ, ಏಪ್ರಿಲ್ 7, 2026

ಇಪಿಎಫ್‌ಓ: ಏ.13 ರಂದು ಪಿಂಚಣಿ ಅದಾಲತ್

ಬಳ್ಳಾರಿ,ಏ.07(ಕರ್ನಾಟಕ ವಾರ್ತೆ): ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಪಿಂಚಣಿದಾರರ ಕುಂದು ಕೊರತೆ ಆಲಿಸಿ, ಪರಿಹರಿಸಲು ಏಪ್ರಿಲ್ 13 ರಂದು ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬಳ್ಳಾರಿ, ವಿಜಯನಗರ, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಕುಂದುಕೊರತೆಗಳಿದ್ದಲ್ಲಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಪತ್ರ ಅಥವಾ ಇ-ಮೇಲ್ ಮೂಲಕ ಪಿ.ಪಿ.ಒ ಸಂಖ್ಯೆ, ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ ಮತ್ತು ಕುಂದು ಕೊರತೆಯ ಸ್ವರೂಪ ಹಾಗೂ ಇತ್ಯಾದಿಗಳನ್ನು ಅಂಚೆ ಪತ್ರದ ಮೂಲಕ ಏಪ್ರಿಲ್ 10 ರೊಳಗಾಗಿ ತಿಳಿಸಬಹುದು. ಪತ್ರ ಲಕೋಟೆ ಮೇಲೆ ಪಿಂಚಣಿ ಅದಾಲತ್ ಎಂದು ಬರೆಯಬೇಕು. ಹೆಚ್ಚಿನ ಮಾಹಿತಿಗಾಗಿ ದೂ.08392-268943 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಮಾಲತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ