ಗುರುವಾರ, ಏಪ್ರಿಲ್ 16, 2026

ಏ.18 ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ

ಬಳ್ಳಾರಿ,ಏ.16(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ಉಪ-ವಿಭಾಗ ವ್ಯಾಪ್ತಿಯ ಎಲ್ಲಾ ವಿದ್ಯುತ್ ಗ್ರಾಹಕರ ಸಮಸ್ಯೆಗಳನ್ನು ಆಲಿಸಿ ಇತ್ಯರ್ಥಗೊಳಿಸಲು ಏ.18 ರಂದು ಬೆಳಿಗ್ಗೆ 11 ಗಂಟೆಗೆ ಬಳ್ಳಾರಿ ಜೆಸ್ಕಾಂ ಗ್ರಾಮೀಣ ಉಪ-ವಿಭಾಗ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದ್ದು, ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂ ನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ