ಶುಕ್ರವಾರ, ಏಪ್ರಿಲ್ 17, 2026

ಏ.18 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಏ.17(ಕರ್ನಾಟಕ ವಾರ್ತೆ): ನಗರದ ಜೆಸ್ಕಾಂ ಉಪವಿಭಾಗ-1ರ ವ್ಯಾಪ್ತಿಯಲ್ಲಿ 110/11ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿAದ ಏ.18 ರಂದು ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ ಎಫ್-25 ಫೀಡರ್ ವ್ಯಾಪ್ತಿಗೆ ಬರುವ ನಗರದ ಕಾರ್ಕಲ ತೋಟ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಜೆಸ್ಕಾಂನೊAದಿಗೆ ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ