ಶನಿವಾರ, ಏಪ್ರಿಲ್ 18, 2026

ಏ.19 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಏ.18(ಕರ್ನಾಟಕ ವಾರ್ತೆ): ಜೆಸ್ಕಾಂ ನಗರ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11 ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾರ್ಯ, ದುರಸ್ತಿ ಹಾಗೂ ಕಬ್ಬಿಣದ ಕಂಬಗಳ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿAದ ಏ.19 ರಂದು ಬೆಳಿಗ್ಗೆ 09 ರಿಂದ ಮಧ್ಯಾಹ್ನ 03 ಗಂಟೆಯವರೆಗೆ ಎಫ್-24 ಫೀಡರ್ ವ್ಯಾಪ್ತಿಯ ಪ್ರದೇಶಗಳಾದ ಬಂಡಿಮೋಟ್, ಬಾಪೂಜಿ ನಗರ, ಕುರಿಕಮೇಲ, ಕಮೇಲ ರಸ್ತೆ, ಬೆಂಗಳೂರು ರಸ್ತೆ, ತೇರು ಬೀದಿ, ಬ್ರೂಸ್‌ಪೇಟೆ ಪೊಲೀಸ್ ಠಾಣೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ