ಶನಿವಾರ, ಏಪ್ರಿಲ್ 18, 2026
ಏ.19 ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ,ಏ.18(ಕರ್ನಾಟಕ ವಾರ್ತೆ):
ಜೆಸ್ಕಾಂ ನಗರ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11 ಕೆವಿ ಸೌತ್ ವಿದ್ಯುತ್ ವಿತರಣ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಎಫ್-25 ಹಾಗು ಎಫ್-46 ಫೀಡರ್ ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿAದ ಏ.19 ರಂದು ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳಿವು:*
ನಗರದ ಆರ್.ಕೆ ಮಿಲ್ ರೋಡ್, ಬಾಪೂಜಿ ನಗರ, ಬಾಪೂಜಿ ನಗರ ಸರ್ಕಲ್, ರಾಣಿತೋಟ, ಕಣೆಕಲ್ ಬಸ್ ಸ್ಟಾö್ಯಂಡ್, ದೊಡ್ಡ ಮಾರ್ಕೆಟ್, ಸಣ್ಣ ಮಾರ್ಕೆಟ್, ಕಾರ್ಕಳ ತೋಟ, ಸಾಯಿ ಕಾಲೋನಿ, ಆರ್.ಆರ್ ಲೇಔಟ್, ಟೋಪಿಗಲ್ಲಿ, ಮರಿಸ್ವಾಮಿ ಮಠ, ಇಂಡಸ್ಟಿçಯಲ್ ಏರಿಯಾ ಹಂತ-1 ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ