ಗುರುವಾರ, ಏಪ್ರಿಲ್ 16, 2026

ಕನ್ನಡ ಪುಸ್ತಕ ಪ್ರಾಧಿಕಾರ: 2025ನೇ ಸಾಲಿನ ‘ಪುಸ್ತಕ ಸೊಗಸು' ಬಹುಮಾನಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ,ಏ.16(ಕರ್ನಾಟಕ ವಾರ್ತೆ): ಕನ್ನಡ ಪುಸ್ತಕ ಪ್ರಾಧಿಕಾರವು 2025ನೇ ಕ್ಯಾಲೆಂಡರ್ ವರ್ಷದಲ್ಲಿ (ಜನವರಿಯಿಂದ ಡಿಸೆಂಬರ್‌ವರೆಗೆ) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ನೀಡಲಾಗುವ ಪ್ರತಿಷ್ಠಿತ “ಕನ್ನಡ ಪುಸ್ತಕ ಸೊಗಸು ಬಹುಮಾನ” ಗಳಿಗಾಗಿ ಅರ್ಜಿ ಆಹ್ವಾನಿಸಿದೆ. ಕೃತಿಗಳ ಮುದ್ರಣ ಗುಣಮಟ್ಟ, ಆಕರ್ಷಕ ಮುಖಪುಟ ವಿನ್ಯಾಸ ಹಾಗೂ ಒಟ್ಟಾರೆ ಪುಸ್ತಕದ ಅಂದ-ಚAದವನ್ನು ಪರಿಗಣಿಸಿ ಈ ಬಹುಮಾನಗಳನ್ನು ನೀಡಲಾಗುತ್ತದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತಿ ಇರುವ ಪ್ರಕಾಶಕರು, ಮುದ್ರಕರು ಹಾಗೂ ಕಲಾವಿದರು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. *ಅರ್ಹತೆ:* 2025ರ ಜನವರಿಯಿಂದ ಡಿಸೆಂಬರ್ ಅವಧಿಯಲ್ಲಿ ಪ್ರಕಟವಾದ ಕನ್ನಡ ಪುಸ್ತಕಗಳು ಅರ್ಹತೆ ಹೊಂದಿರುತ್ತವೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟಿತ ವರ್ಷ, ಪ್ರಕಾಶಕರು ಮತ್ತು ಮುದ್ರಣಾಲಯದ ವಿವರ, ಮುಖಪುಟ ವಿನ್ಯಾಸಗಾರರ ಹೆಸರು, ಪೂರ್ಣ ವಿಳಾಸ ಮತ್ತು ದೂರವಾಣಿ ಸಂಖ್ಯೆ ಒಳಗೊಂಡAತೆ ಮಾಹಿತಿ ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆಯೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಕಳುಹಿಸಬೇಕು. ಅರ್ಜಿ ಸಲ್ಲಿಸಲು ಮೇ 11 ಕೊನೆಯ ದಿನವಾಗಿದೆ. *ಅರ್ಜಿ ಸಲ್ಲಿಸಬೇಕಾದ ವಿಳಾಸ:* ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು - 560002. ಬಹುಮಾನಕ್ಕಾಗಿ ಸಲ್ಲಿಸಲಾದ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ. ನಿಗದಿತ ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ (https://kpp.karnataka.gov.in) ಗೆ ಭೇಟಿ ನೀಡಬಹುದು ಅಥವಾ ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ಕನ್ನಡ ಭವನದ ಮೊದಲ ಮಹಡಿಯಲ್ಲಿರುವ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ